ದಿನದ ಸುದ್ದಿ
ಬೆಳಗಾವಿ ಮೂರು ಭಾಗವಾಗುತ್ತ; ರಾಜಕೀಯ ಆಟದಲ್ಲಿ ಬೆಳಗಾವಿ ವಿಭಜನೆ
ಸುದ್ದಿದಿನ ಡೆಸ್ಕ್: ಬೆಳಗಾವಿ ಜಿಲ್ಲೆಯ ಗೊಂದಲಮಯ ರಾಜಕಾರಣಕ್ಕೆ ಅಂತ್ಯ ಹಾಡಲು ರಕ್ಷಣಾತ್ಮಕ ಹೆಜ್ಜೆ ಇಟ್ಟಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವ ಚಿಂತನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯನ್ನು ಬೆಳಗಾವಿ, ಚಿಕ್ಕೋಡಿ ಮತ್ತು ಗೋಕಾಕ್ಅನ್ನು ಜಿಲ್ಲಾ ಕೇಂದ್ರಗಳನ್ನಾಗಿ ಘೋಷಿಸಲು ನಿರ್ಧರಿಸಿದ್ದು, ಕಂದಾಯ ಸಚಿವ ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದಾರೆ.
ಕಂದಾಯ ಸಚಿವ ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ಸಮಿತಿ ವರದಿ ನೀಡಿದ ನಂತರ ಬೆಳಗಾವಿ, ಗೋಕಾಕ್ ಮತ್ತು ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಗಳಾಗಿ ಕನ್ನಡ ರಾಜ್ಯೋತ್ಸವದಂದು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಡಳಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಜತೆಗೆ ರಾಜ್ಯ ಸರ್ಕಾರದ ಅಸ್ತಿತ್ವಕ್ಕೆ ಕಂಟಕವಾಗುತ್ತಿರುವ ಜಾರಕಿಹೊಳಿ ಸಹೋದರರ ಸಾಮ್ರಾಜ್ಯವನ್ನು ನಿಯಂತ್ರಿಸುವ ರಣತಂತ್ರ ರೂಪಿಸಿದ್ದಾರೆ.
ಬೆಂಗಳೂರು ಹೊರತುಪಡಿಸಿ ಜನಸಂಖ್ಯೆ ಹಾಗೂ ಹೆಚ್ಚು ವಿಧಾನ ಸಭಾ ಕ್ಷೇತ್ರಗಳನ್ನು ಬೆಳಗಾವಿ ಜಿಲ್ಲೆ ಹೊಂದಿದ್ದು,
ರಾಜ್ಯದಲ್ಲೇ 2ನೇ ಅತಿ ದೊಡ ಜಿಲ್ಲೆಯಾಗಿದೆ. ಈ ಹಿಂದೆಯೇ ಬೆಳಗಾವಿ ವಿಭಜನೆಯ ಬೇಡಿಕೆ ಇತ್ತಾದರೂ, ಮರಾಠಿಗರ ಪ್ರಾಬಲ್ಯ ನಿಯಂತ್ರಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆ ವಿಭಜನೆ ಸರಿಯಲ್ಲ ಎಂದು ಕನ್ನಡಪರ ಸಂಘಟನೆಗಳು, ಸಾಹಿತಿಗಳು ಸೇರಿ ಮತ್ತಿತರರು ಸರ್ಕಾರದ ಮೇಲೆ ಒತಡ ಹೇರಿದ್ದರು.