ದಿನದ ಸುದ್ದಿ
ಬೆಳಗಾವಿ | ಖಾನಾಪೂರ ತಾಲ್ಲೂಕು : 123 ಗ್ರಾಮಗಳು ಪ್ರವಾಹ ಬಾಧಿತ
ಸುದ್ದಿದಿನ,ಬೆಳಗಾವಿ : ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಖಾನಾಪೂರ ತಾಲ್ಲೂಕಿನ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಜಿಲ್ಲೆಯ ಖಾನಾಪೂರ ತಾಲ್ಲೂಕ ಚಿಕ್ಕದಾದರೂ 123 ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ, 236 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಅಥಣಿ-4351, ರಾಯಬಾಗ-4349, ಹುಕ್ಕೇರಿ-975, ಗೋಕಾಕ-1082, ಕಾಗವಾಡ-4599, ನಿಪ್ಪಾಣಿ-2973, ಮೂಡಲಗಿ-1100, ಬೆಳಗಾವಿ-546, ಬೈಲಹೊಂಗಲ-38, ರಾಮದುರ್ಗ-628, ಸವದತ್ತಿ-631 ಹಾಗೂ ಕಿತ್ತೂರು-27 ಕುಟುಂಬಗಳನ್ನು ಆಗಸ್ಟ್ 9ರವರೆಗೆ ಸ್ಥಳಾಂತರಿಸಲಾಗಿದೆ.
ಖಾನಾಪೂರ ತಾಲ್ಲೂಕಿನಲ್ಲಿ ಒಟ್ಟಾರೆ 11 ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಈ ಕೆಂದ್ರಗಳಲ್ಲಿ 925 ಜನರು ಆಶ್ರಯ ಪಡೆದುಕೊಂಡಿದ್ದಾರೆ. ಅದೇ ರೀತಿ ರಕ್ಷಿಸಲಾದ ಹಾಗೂ ಸ್ಥಳಾಂತರಿಸಲಾದ ಜಾನುವಾರುಗಳ ಪೈಕಿ 195 ಜಾನುವಾರುಗಳಿಗೆ ಪರಿಹಾರ ಕೇಂದ್ರದಲ್ಲಿ ಅಶ್ರಯ ಒದಗಿಸಲಾಗಿದೆ.
ಖಾನಾಪೂರ ತಾಲ್ಲೂಕಿನಲ್ಲಿ 236 ಕುಟುಂಬಗಳು ಪ್ರವಾಹಕ್ಕೆ ಒಳಗಾಗಿದ್ದು, ಒಟ್ಟು 1093 ಜನರನ್ನು ಸ್ಥಳಾಂತರಿಸಿದ್ದು, ಪರಿಹಾರ ಕೇಂದ್ರಗಳಲ್ಲಿ 925 ಜನರು ಜನರು ಆಶ್ರಯ ಪಡೆದುಕೊಂಡಿದ್ದರೆ.
ಜಿಲ್ಲೆಯಲ್ಲಿ ಕಿತ್ತೂರು ನೂತನ ತಾಲ್ಲೂಕು, ಇಲ್ಲಿ 9 ಗ್ರಾಮಗಳು ಪ್ರವಾಹಕ್ಕೆ ಸಿಲುಕಿದ್ದು, 27 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಕಿತ್ತೂರು ತಾಲ್ಲೂಕಿನಲ್ಲಿ ಒಟ್ಟು 9 ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದ್ದು, 261 ಜನ ಆಶ್ರಯ ಪಡೆದುಕೊಂಡಿದ್ದಾರೆ.
ಸೇನೆ, ಪೊಲೀಸ್, ಎನ್.ಡಿ.ಆರ್.ಎಫ್., ಎಸ್.ಡಿ.ಆರ್.ಎಫ್, ಗೃರಕ್ಷಕದಳ ಸೇರಿದಂತೆ ಸರ್ಕಾರದ ಎಲ್ಲ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243