ದಿನದ ಸುದ್ದಿ
ಬೆಳಗಾವಿ | ಮನೆಹಾನಿ-488 ಕೋಟಿ ಪರಿಹಾರ ಬಿಡುಗಡೆ
ಸುದ್ದಿದಿನ, ಬೆಳಗಾವಿ : ಜಿಲ್ಲೆಯಲ್ಲಿ ಕಳೆದ ವರ್ಷ ಮನೆ ಕಳೆದುಕೊಂಡಿರುವ ಎ.ಬಿ ಮತ್ತು ಸಿ ಕೆಟಗರಿಯ ಕುಟುಂಬಗಳಿಗೆ ಒಟ್ಟು 488 ಕೋಟಿ ರೂಪಾಯಿ ಪರಿಹಾರ ವಿತರಣೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮನಿ ತಿಳಿಸಿದರು.
ಅತಿವೃಷ್ಟಿ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ(ಅ.19) ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಹಣದ ಕೊರತೆಯಿಲ್ಲ; ಮಳೆ ಹಾಗೂ ಕೊರೊನಾ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ವಿಳಂಬವಾಗಿದೆ.
ಪಟ್ಟಿಯಿಂದ ಬಿಟ್ಟು ಹೋಗಿರುವ ಮನೆಗಳನ್ನು ಮರು ಸಮೀಕ್ಷೆ ಕೈಗೊಂಡು ಪುನಃ ವಸತಿ ನಿಗಮಕ್ಕೆ ಕಳಿಸಲಾಗಿದೆ.
ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಪಠಾಣ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ.ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243