ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು
- ಭಾರತದ ಶ್ರೀಮಂತ ಶಾಸ್ತ್ರೀಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯ ಮರುಶೋಧಕ್ಕೆ ಎಲ್ಲರ ಕೊಡುಗೆ ಮುಖ್ಯವಾಗಿದೆ. ಸಂಸ್ಕೃತ ಸೇರಿದಂತೆ ನಮ್ಮ ಶಾಸ್ತ್ರೀಯ ಭಾಷೆಗಳನ್ನು ಸಂರಕ್ಷಿಸಲು ಮತ್ತು ಪ್ರಚಾರ ಮಾಡಲು ತಂತ್ರಜ್ಞಾನವು ಹೊಸ ಅವಕಾಶಗಳನ್ನು ನೀಡಿದೆ. ಸಾಂವಿಧಾನಿಕ ನಿಬಂಧನೆಗಳು ಅಥವಾ ಸರ್ಕಾರದ ನೆರವು, ಇಲ್ಲವೆ ರಕ್ಷಣೆಯಿಂದ ಮಾತ್ರ ಭಾಷೆಯನ್ನು ಸಂರಕ್ಷಿಸಲು ಸಾಧ್ಯವಿಲ್ಲವೆಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಬೆಂಗಳೂರಿನಲ್ಲಿ ನಿನ್ನೆ ಕಾರ್ಯಕ್ರಮವೊಂದರಲ್ಲಿ ತಿಳಿಸಿದರು.
- ರಾಜ್ಯದಲ್ಲಿ 150 ಸ್ಥಳಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗಿದ್ದು, ಆಧುನಿಕ ಯಂತ್ರೋಪಕರಣ ಸೌಲಭ್ಯ ಅಳವಡಿಸಲಾಗಿದೆ ಎಂದು ರಾಜ್ಯ ಕೌಶಲ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ತಿಳಿಸಿದ್ದಾರೆ.
- ಕೊಡಗು ಜಿಲ್ಲೆಯಲ್ಲಿ ರಾತ್ರಿಯಿಂದ ವ್ಯಾಪಕ ಮಳೆಯಾಗುತ್ತಿದ್ದು, ಇಂದು ಬೆಳಗ್ಗೆ ಭೂಮಿ ಕಂಪಿಸಿದ ಅನುಭವವೂ ಆಗಿದೆ. ಭಾಗಮಂಡಲ, ತಲಕಾವೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಕಂಪನ ಉಂಟಾಗಿದೆ.
- ಜಾರ್ಖಂಡ್‌ನ ದೇವಗಢ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಇದೇ 12 ರಂದು ಲೋಕಾರ್ಪಣೆ ಮಾಡಲಿದ್ದಾರೆ. ಒಟ್ಟು 638ಎಕರೆ ಪ್ರದೇಶದಲ್ಲಿ ಸುಮಾರು 400 ಕೋಟಿ ರೂಪಾಯಿ ವೆಚ್ಚದಲ್ಲಿ ಈ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ.
- ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ವತಿಯಿಂದ ಇಂದು ರಾಷ್ಟ್ರೀಯ ಮೀನು ಕೃಷಿಕರ ದಿನ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಸಚಿವಾಲಯದ ಸಹಯೋಗದಲ್ಲಿ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯು ಹೈದರಾಬಾದ್‌ನಲ್ಲಿಂದು ಕಾರ್ಯಕ್ರಮ ಆಯೋಜಿಸಿದೆ.
- ತ್ಯಾಗ ಮತ್ತು ಮಾನವೀಯತೆಯ ಸಂಕೇತವಾಗಿರುವ ಈದ್ ವುಲ್ ಜುಹಾ ಅಥವಾ ಬಕ್ರೀದ್ ಹಬ್ಬವನ್ನು ದೇಶಾದ್ಯಂತ ಇಂದು ಆಚರಿಸಲಾಗುತ್ತಿದೆ. ಮುಸ್ಲೀಂ ಸಮುದಾಯದವರು ಮಸೀದಿ ಹಾಗೂ ಈದ್ಗಾ ಮೈದಾನಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
- ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ನಲ್ಲಿ ನಿನ್ನೆ ರಾತ್ರಿ ನಡೆದ ಎರಡನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ 49 ರನ್‌ಗಳಿಂದ ಇಂಗ್ಲೆಂಡ್ ತಂಡದ ವಿರುದ್ಧ ಜಯಗಳಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ, ಇನ್ನೂ ಒಂದು ಪಂದ್ಯ ಇರುವಂತೆಯೇ 2-0ಮುನ್ನಡೆಯೊಂದಿಗೆ ಮೂರು ಪಂದ್ಯಗಳ ಟಿ-20 ಸರಣಿಯನ್ನು ತನ್ನದಾಗಿಸಿಕೊಂಡಿತು.
- ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ದೌಪದಿ ಮುರ್ಮು ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮುರ್ಮು ಅವರನ್ನು ಹಾರ್ದಿಕವಾಗಿ ಸ್ವಾಗತಿಸಲು ಕರ್ನಾಟಕ ಬಿಜೆಪಿ ಘಟಕ ಸಕಲ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ಮಹಿಳಾ ಮೊರ್ಚಾದಿಂದಲೂ ಸಹ ಅವರನ್ನು ವಿಶೇಷವಾಗಿ ಸ್ವಾಗತಿಸಲು ಸಿದ್ಧತೆ ನಡೆಸಲಾಗಿದೆ. ರಾಜ್ಯದ ಭೇಟಿಯ ವೇಳೆ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ರಾಜ್ಯದ ಸಂಸದರು ಹಾಗೂ ಶಾಸಕರನ್ನು ಕೋರಲಿದ್ದಾರೆ.
- ಅಮರನಾಥ ಯಾತ್ರೆಯಲ್ಲಿ ರಾಜ್ಯದಿಂದ ಪಾಲ್ಗೊಂಡಿರುವ ಬಹುತೇಕ ಎಲ್ಲಾ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾತ್ರಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕೇಂದ್ರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಇದಕ್ಕಾಗಿ ಪ್ರತ್ಯೇಕ ಸಹಾಯವಾಣಿ ತೆರೆಯಲಾಗಿದೆ. ಬಿಎಸ್‌ಎಫ್, ಐಟಿಬಿಪಿ, ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದರು.
- ಇಂದು ಬಕ್ರೀದ್ ಆಚರಣೆ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಿ ಸರ್ಕಾರ ಆದೇಶಿಸಿದೆ. ಗೋಹತ್ಯೆ ನಿಷೇಧ ಕಾಯ್ದೆಯಡಿ ಉಡುಪಿ ಜಿಲ್ಲೆಯಲ್ಲಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇರಿಸುವಂತೆ ಸಂಬಂಧಪಟ್ಟ ಇಲಾಖೆಗೆ ಜಿಲ್ಲಾಧಿಕಾರಿ ಎಂ ಕೂರ್ಮಾರಾವ್ ಸೂಚಿಸಿದ್ದಾರೆ.
- ಇನ್ನು 25 ವರ್ಷಗಳಲ್ಲಿ ದೇಶವನ್ನು ವಿಶ್ವ ಗುರುವನ್ನಾಗಿಸಲು ಪ್ರತಿಯೊಬ್ಬರೂ ಅಭಿವೃದ್ಧಿಯಲ್ಲಿ ಕೈಜೋಡಿಸಿ ಸಂಕಲ್ಪ ತೊಡಬೇಕಾಗಿದೆ ಎಂದು ಕೇಂದ್ರ ವಿದ್ಯುತ್ ಮತ್ತು ಭಾರಿ ಕೈಗಾರಿಕೆಗಳ ರಾಜ್ಯ ಖಾತೆ ಸಚಿವ ಕ್ರಿಶನ್ ಪಾಲ್ ಗುರ್ಜರ ಹೇಳಿದ್ದಾರೆ. ಮಂಡ್ಯದಲ್ಲಿ ನಿನ್ನೆ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಭಾರತ ಶೇಕಡಾ ೬೫ ರಷ್ಟು ಯುವ ಜನತೆ ಹೊಂದಿರುವ ರಾಷ್ಟ್ರವಾಗಿದ್ದು, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಾಗಿದೆ ಎಂದರು.
- ಜಾರ್ಖಂಡ್‌ನ ದೇವಗಢ್‌ನಲ್ಲಿ ನಿರ್ಮಿಸಿರುವ 250 ಹಾಸಿಗೆಗಳ ಏಮ್ಸ್ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇದೇ 12ರಂದು ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೆ 16 ಸಾವಿರದ 835ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ.
- ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಣ ಟಿ-20 ಕ್ರಿಕೆಟ್ ಸರಣಿಯ ಎರಡನೇ ಪಂದ್ಯವನ್ನು ಭಾರತ 49 ರನ್‌ಗಳಿಂದ ಗೆದ್ದುಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಮಡ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು. ಭಾರತ ನೀಡಿದ್ದ 171ರನ್‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ 17ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು121 ರನ್ ಗಳಿಸಿತು. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-1 ರಿಂದ ಮುನ್ನಡೆ ಸಾಧಿಸಿದೆ.
- ನಮ್ಮ ಶಾಸ್ತ್ರೀಯ ಭಾಷೆಗಳನ್ನು ಸಂರಕ್ಷಿಸಲು ಮತ್ತು ಪ್ರಚಾರ ಮಾಡಲು ತಂತ್ರಜ್ಞಾನವು ಹೊಸ ಅವಕಾಶಗಳನ್ನು ಕಲ್ಪಿಸಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹೇಳಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಅವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ದಶಮಾನೋತ್ಸವ ಮತ್ತು 9ನೇ ಘಟಿಕೋತ್ಸವ ಉದ್ದೇಶಿಸಿ ಭಾಷಣ ಮಾಡಿ, ಸಂಸ್ಕೃತ ಕಲಿಕೆಯನ್ನು ಪುನಶ್ವೇತನಗೊಳಿಸಲು ಜನಾಂದೋಲನ ನಡೆಯಬೇಕು ಎಂದರು.
- ರಾಜ್ಯದಲ್ಲಿ ಮುಂಗಾರು ತೀವ್ರಗೊಂಡಿದ್ದು ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯದ ಕರಾವಳಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ.
- ರಾಜ್ಯದ ಎಲ್ಲ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ಏಕರೂಪದ ವೇಳಾಪಟ್ಟಿ ಸಿದ್ಧಪಡಿಸಲಾಗಿದ್ದು, ಕಡ್ಡಾಯವಾಗಿ ಪಾಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರಮೋದಿ ಅವರು, ಗುಜರಾತ್‌ನ ಸೂರತ್‌ನಲ್ಲಿ ಇಂದು ನಡೆಯಲಿರುವ ಸಾವಯವ ಕೃಷಿ ಸಮ್ಮೇಳನ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಸೂರತ್‌ನಲ್ಲಿ ನೈಸರ್ಗಿಕ ಕೃಷಿ ಅಳವಡಿಸಿಕೊಂಡು ಯಶಸ್ಸು ಸಾಧಿಸಿರುವ ಸಾವಿರಾರು ರೈತರು ಹಾಗೂ ಇತರ ಭಾಗಿದಾರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
- ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದಿಂದ ಅಭ್ಯರ್ಥಿಯಾಗಿರುವ ದೌಪದಿ ಮುರ್ಮು ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮುರ್ಮು ಅವರನ್ನು ವೈಭವದಿಂದ ಸ್ವಾಗತಿಸಲು ಕರ್ನಾಟಕ ಬಿಜೆಪಿ ಘಟಕ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ಮಹಿಳಾ ಮೊರ್ಚಾದಿಂದಲೂ ಸಹ ಅವರನ್ನು ವಿಶೇಷವಾಗಿ ಸ್ವಾಗತಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದ ಭೇಟಿಯ ವೇಳೆ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ರಾಜ್ಯದ ಸಂಸದರು ಮತ್ತು ಶಾಸಕರನ್ನು ಕೋರಲಿದ್ದಾರೆ.
- ಲಂಡನ್‌ನಲ್ಲಿ ನಡೆಯುತ್ತಿರುವ ವಿಂಬಲ್ಡನ್ ಗ್ರ್ಯಾನ್ ಸ್ಲಾಮ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಕಜಕಿಸ್ತಾನದ ಅಟಗಾರ್ತಿ ಎಲೆನಾ ರಿಬಾಕಿನಾ ಪ್ರಶಸ್ತಿಯ ಗರಿ ಮೂಡಿಸಿಕೊಂಡಿದ್ದಾರೆ. ಆಲ್ ಇಂಗ್ಲೆಂಡ್ ಕ್ಲಬ್‌ನ ಸೆಂಟರ್ ಕೋರ್ಟ್‌ನಲ್ಲಿ ನಿನ್ನೆ ರಾತ್ರಿ ನಡೆದ ಮಹಿಳೆಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ 17ನೇ ಶ್ರೇಯಾಂಕಿತೆ ರಿಬಾಕಿನ 2-6,6-3,6-3 ಸೆಟ್‌ಗಳಿಂದ ಮೂರನೇ ಶ್ರೇಯಾಂಕಿತೆ, ಟ್ಯುನಿಶಿಯಾದ ಒನ್ಸ್ ಜಬೇರ್ ವಿರುದ್ಧ ಗೆಲುವು ದಾಖಲಿಸಿ ಸಂಭ್ರಮಿಸಿದರು.
- ಈದ್-ಉಲ್-ಜುಹಾ ಅಂಗವಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಸೇರಿದಂತೆ ಅವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ. ತ್ಯಾಗ, ಸೇವೆ ಮತ್ತು ಮಾನವೀಯ ಮೌಲ್ಯಗಳ ಸಂಕೇತವಾದ ಈದ್-ಉಲ್-ಜುಹಾ ಎಲ್ಲರಿಗೂ ಶುಭ ಉಂಟುಮಾಡಲಿ ಎಂದು ರಾಷ್ಟ್ರಪತಿ ಕೋರಿದ್ದಾರೆ.
- ಬಕ್ರೀದ್ ಹಬ್ಬವನ್ನು ಕಾನೂನಿನ ಚೌಕಟ್ಟಿನಲ್ಲಿ ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಧಿಕಾರಿ ಕೆ.ಶ್ರೀನಿವಾಸ್ ಕೋರಿದ್ದಾರೆ.
- ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿವಿಧ ಕೆಲಸ, ಕಾಮಗಾರಿಗಳಲ್ಲಿ ತೊಡಗಿರುವ ಮಹಿಳೆಯರನ್ನು ಇನ್ನಷ್ಟು ಸ್ವಾವಲಂಬಿಗಳಾಗಿಸುವ ಉದ್ದೇಶದಿಂದ ನರ್ಸರಿ ಫಾರ್ಮ್‌ಗಳನ್ನು ನಿರ್ಮಿಸಲು ಮಹಿಳೆಯರಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಬಾಗಲಕೋಟೆಯಲ್ಲಿ ತಿಳಿಸಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರಮೋದಿ ಅವರು, ಗುಜರಾತ್‌ನ ಸೂರತ್‌ನಲ್ಲಿ ಇಂದು ನಡೆಯಲಿರುವ ಸಾವಯವ ಕೃಷಿ ಸಮ್ಮೇಳನ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಸೂರತ್‌ನಲ್ಲಿ ನೈಸರ್ಗಿಕ ಕೃಷಿ ಅಳವಡಿಸಿಕೊಂಡು ಯಶಸ್ಸು ಸಾಧಿಸಿರುವ ಸಾವಿರಾರು ರೈತರು ಹಾಗೂ ಇತರ ಭಾಗಿದಾರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
- ಜಾರ್ಖಂಡ್‌ನ ದೇವಗಢ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು, ಇದೇ12 ರಂದು ಲೋಕಾರ್ಪಣೆ ಮಾಡಲಿದ್ದಾರೆ. ಒಟ್ಟು 638ಎಕರೆ ಪ್ರದೇಶದಲ್ಲಿ ಸುಮಾರು 400ಕೋಟಿ ರೂಪಾಯಿ ವೆಚ್ಚದಲ್ಲಿ ಈ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ದೇವಗಢ್‌ನಲ್ಲಿರುವ ಪ್ರಸಿದ್ಧ ಬಾಬಾ ವೈದ್ಯನಾಥ ಧಾಮ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಿಕರಿಗೆ ನೂತನ ವಿಮಾನ ನಿಲ್ದಾಣದಿಂದ ಅನುಕೂಲವಾಗಲಿದೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಆಕಾಶವಾಣಿ ಮಾಸಿಕ ಕಾರ್ಯಕ್ರಮ ಈ ತಿಂಗಳ 31ರಂದು ಭಾನುವಾರ ಪ್ರಸಾರವಾಗಲಿದೆ. ಅಂದು ಬೆಳಗ್ಗೆ 11ಗಂಟೆಗೆ ಈ ಕಾರ್ಯಕ್ರಮ ಪ್ರಸಾರವಾಗಲಿದ್ದು, ಇದು ಒಟ್ಟಾರೆ 91ನೇ ಆವೃತ್ತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರಿಂದ ಸಲಹೆ-ಸಂದೇಶಗಳನ್ನು ಆಹ್ವಾನಿಸಿದ್ದಾರೆ. ನಮೋ ಆಪ್ ಅಥವಾ ಮೈ ಗೌ ಓಪನ್ ಫೋರಂ ಮೂಲಕ ದೇಶದ ಜನತೆ ತಮ್ಮ ವಿಚಾರಗಳನ್ನು ಹಂಚಿಕೊಳ್ಳಬಹುದು. ಉಚಿತ ಸಂಖ್ಯೆ1800-11-7800 ಗೆ ಕರೆ ಮಾಡಿ ತಮ್ಮ ಸಂದೇಶವನ್ನು ದಾಖಲಿಸಬಹುದಾಗಿದೆ. ದೂರವಾಣಿ ಸಂಪರ್ಕ ಜುಲೈ ೨೮ರವರೆಗೆ ಮುಕ್ತವಾಗಿರಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..
ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.
ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.
ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ
ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.
ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243