ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಬೆಳಗಿನ ಪ್ರಮುಖ ಸುದ್ದಿಗಳು

  1. ಭಾರತದ ಶ್ರೀಮಂತ ಶಾಸ್ತ್ರೀಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯ ಮರುಶೋಧಕ್ಕೆ ಎಲ್ಲರ ಕೊಡುಗೆ ಮುಖ್ಯವಾಗಿದೆ. ಸಂಸ್ಕೃತ ಸೇರಿದಂತೆ ನಮ್ಮ ಶಾಸ್ತ್ರೀಯ ಭಾಷೆಗಳನ್ನು ಸಂರಕ್ಷಿಸಲು ಮತ್ತು ಪ್ರಚಾರ ಮಾಡಲು ತಂತ್ರಜ್ಞಾನವು ಹೊಸ ಅವಕಾಶಗಳನ್ನು ನೀಡಿದೆ. ಸಾಂವಿಧಾನಿಕ ನಿಬಂಧನೆಗಳು ಅಥವಾ ಸರ್ಕಾರದ ನೆರವು, ಇಲ್ಲವೆ ರಕ್ಷಣೆಯಿಂದ ಮಾತ್ರ ಭಾಷೆಯನ್ನು ಸಂರಕ್ಷಿಸಲು ಸಾಧ್ಯವಿಲ್ಲವೆಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಬೆಂಗಳೂರಿನಲ್ಲಿ ನಿನ್ನೆ ಕಾರ್ಯಕ್ರಮವೊಂದರಲ್ಲಿ ತಿಳಿಸಿದರು.
  2. ರಾಜ್ಯದಲ್ಲಿ 150 ಸ್ಥಳಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗಿದ್ದು, ಆಧುನಿಕ ಯಂತ್ರೋಪಕರಣ ಸೌಲಭ್ಯ ಅಳವಡಿಸಲಾಗಿದೆ ಎಂದು ರಾಜ್ಯ ಕೌಶಲ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ತಿಳಿಸಿದ್ದಾರೆ.
  3. ಕೊಡಗು ಜಿಲ್ಲೆಯಲ್ಲಿ ರಾತ್ರಿಯಿಂದ ವ್ಯಾಪಕ ಮಳೆಯಾಗುತ್ತಿದ್ದು, ಇಂದು ಬೆಳಗ್ಗೆ ಭೂಮಿ ಕಂಪಿಸಿದ ಅನುಭವವೂ ಆಗಿದೆ. ಭಾಗಮಂಡಲ, ತಲಕಾವೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಕಂಪನ ಉಂಟಾಗಿದೆ.
  4. ಜಾರ್ಖಂಡ್‌ನ ದೇವಗಢ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಇದೇ 12 ರಂದು ಲೋಕಾರ್ಪಣೆ ಮಾಡಲಿದ್ದಾರೆ. ಒಟ್ಟು 638ಎಕರೆ ಪ್ರದೇಶದಲ್ಲಿ ಸುಮಾರು 400 ಕೋಟಿ ರೂಪಾಯಿ ವೆಚ್ಚದಲ್ಲಿ ಈ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ.
  5. ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ವತಿಯಿಂದ ಇಂದು ರಾಷ್ಟ್ರೀಯ ಮೀನು ಕೃಷಿಕರ ದಿನ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಸಚಿವಾಲಯದ ಸಹಯೋಗದಲ್ಲಿ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯು ಹೈದರಾಬಾದ್‌ನಲ್ಲಿಂದು ಕಾರ್ಯಕ್ರಮ ಆಯೋಜಿಸಿದೆ.
  6. ತ್ಯಾಗ ಮತ್ತು ಮಾನವೀಯತೆಯ ಸಂಕೇತವಾಗಿರುವ ಈದ್ ವುಲ್ ಜುಹಾ ಅಥವಾ ಬಕ್ರೀದ್ ಹಬ್ಬವನ್ನು ದೇಶಾದ್ಯಂತ ಇಂದು ಆಚರಿಸಲಾಗುತ್ತಿದೆ. ಮುಸ್ಲೀಂ ಸಮುದಾಯದವರು ಮಸೀದಿ ಹಾಗೂ ಈದ್ಗಾ ಮೈದಾನಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
  7. ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ನಲ್ಲಿ ನಿನ್ನೆ ರಾತ್ರಿ ನಡೆದ ಎರಡನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ 49 ರನ್‌ಗಳಿಂದ ಇಂಗ್ಲೆಂಡ್ ತಂಡದ ವಿರುದ್ಧ ಜಯಗಳಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ, ಇನ್ನೂ ಒಂದು ಪಂದ್ಯ ಇರುವಂತೆಯೇ 2-0ಮುನ್ನಡೆಯೊಂದಿಗೆ ಮೂರು ಪಂದ್ಯಗಳ ಟಿ-20 ಸರಣಿಯನ್ನು ತನ್ನದಾಗಿಸಿಕೊಂಡಿತು.
  8. ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ದೌಪದಿ ಮುರ್ಮು ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮುರ್ಮು ಅವರನ್ನು ಹಾರ್ದಿಕವಾಗಿ ಸ್ವಾಗತಿಸಲು ಕರ್ನಾಟಕ ಬಿಜೆಪಿ ಘಟಕ ಸಕಲ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ಮಹಿಳಾ ಮೊರ್ಚಾದಿಂದಲೂ ಸಹ ಅವರನ್ನು ವಿಶೇಷವಾಗಿ ಸ್ವಾಗತಿಸಲು ಸಿದ್ಧತೆ ನಡೆಸಲಾಗಿದೆ. ರಾಜ್ಯದ ಭೇಟಿಯ ವೇಳೆ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ರಾಜ್ಯದ ಸಂಸದರು ಹಾಗೂ ಶಾಸಕರನ್ನು ಕೋರಲಿದ್ದಾರೆ.
  9. ಅಮರನಾಥ ಯಾತ್ರೆಯಲ್ಲಿ ರಾಜ್ಯದಿಂದ ಪಾಲ್ಗೊಂಡಿರುವ ಬಹುತೇಕ ಎಲ್ಲಾ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾತ್ರಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕೇಂದ್ರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಇದಕ್ಕಾಗಿ ಪ್ರತ್ಯೇಕ ಸಹಾಯವಾಣಿ ತೆರೆಯಲಾಗಿದೆ. ಬಿಎಸ್‌ಎಫ್, ಐಟಿಬಿಪಿ, ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದರು.
  10. ಇಂದು ಬಕ್ರೀದ್ ಆಚರಣೆ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಿ ಸರ್ಕಾರ ಆದೇಶಿಸಿದೆ. ಗೋಹತ್ಯೆ ನಿಷೇಧ ಕಾಯ್ದೆಯಡಿ ಉಡುಪಿ ಜಿಲ್ಲೆಯಲ್ಲಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇರಿಸುವಂತೆ ಸಂಬಂಧಪಟ್ಟ ಇಲಾಖೆಗೆ ಜಿಲ್ಲಾಧಿಕಾರಿ ಎಂ ಕೂರ್ಮಾರಾವ್ ಸೂಚಿಸಿದ್ದಾರೆ.
  11. ಇನ್ನು 25 ವರ್ಷಗಳಲ್ಲಿ ದೇಶವನ್ನು ವಿಶ್ವ ಗುರುವನ್ನಾಗಿಸಲು ಪ್ರತಿಯೊಬ್ಬರೂ ಅಭಿವೃದ್ಧಿಯಲ್ಲಿ ಕೈಜೋಡಿಸಿ ಸಂಕಲ್ಪ ತೊಡಬೇಕಾಗಿದೆ ಎಂದು ಕೇಂದ್ರ ವಿದ್ಯುತ್ ಮತ್ತು ಭಾರಿ ಕೈಗಾರಿಕೆಗಳ ರಾಜ್ಯ ಖಾತೆ ಸಚಿವ ಕ್ರಿಶನ್ ಪಾಲ್ ಗುರ್ಜರ ಹೇಳಿದ್ದಾರೆ. ಮಂಡ್ಯದಲ್ಲಿ ನಿನ್ನೆ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಭಾರತ ಶೇಕಡಾ ೬೫ ರಷ್ಟು ಯುವ ಜನತೆ ಹೊಂದಿರುವ ರಾಷ್ಟ್ರವಾಗಿದ್ದು, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಾಗಿದೆ ಎಂದರು.
  12. ಜಾರ್ಖಂಡ್‌ನ ದೇವಗಢ್‌ನಲ್ಲಿ ನಿರ್ಮಿಸಿರುವ 250 ಹಾಸಿಗೆಗಳ ಏಮ್ಸ್ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇದೇ 12ರಂದು ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೆ 16 ಸಾವಿರದ 835ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ.
  13. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಣ ಟಿ-20 ಕ್ರಿಕೆಟ್ ಸರಣಿಯ ಎರಡನೇ ಪಂದ್ಯವನ್ನು ಭಾರತ 49 ರನ್‌ಗಳಿಂದ ಗೆದ್ದುಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಮಡ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು. ಭಾರತ ನೀಡಿದ್ದ 171ರನ್‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ 17ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು121 ರನ್ ಗಳಿಸಿತು. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-1 ರಿಂದ ಮುನ್ನಡೆ ಸಾಧಿಸಿದೆ.
  14. ನಮ್ಮ ಶಾಸ್ತ್ರೀಯ ಭಾಷೆಗಳನ್ನು ಸಂರಕ್ಷಿಸಲು ಮತ್ತು ಪ್ರಚಾರ ಮಾಡಲು ತಂತ್ರಜ್ಞಾನವು ಹೊಸ ಅವಕಾಶಗಳನ್ನು ಕಲ್ಪಿಸಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹೇಳಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಅವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ದಶಮಾನೋತ್ಸವ ಮತ್ತು 9ನೇ ಘಟಿಕೋತ್ಸವ ಉದ್ದೇಶಿಸಿ ಭಾಷಣ ಮಾಡಿ, ಸಂಸ್ಕೃತ ಕಲಿಕೆಯನ್ನು ಪುನಶ್ವೇತನಗೊಳಿಸಲು ಜನಾಂದೋಲನ ನಡೆಯಬೇಕು ಎಂದರು.
  15. ರಾಜ್ಯದಲ್ಲಿ ಮುಂಗಾರು ತೀವ್ರಗೊಂಡಿದ್ದು ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯದ ಕರಾವಳಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ.
  16. ರಾಜ್ಯದ ಎಲ್ಲ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ಏಕರೂಪದ ವೇಳಾಪಟ್ಟಿ ಸಿದ್ಧಪಡಿಸಲಾಗಿದ್ದು, ಕಡ್ಡಾಯವಾಗಿ ಪಾಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
  17. ಪ್ರಧಾನಮಂತ್ರಿ ನರೇಂದ್ರಮೋದಿ ಅವರು, ಗುಜರಾತ್‌ನ ಸೂರತ್‌ನಲ್ಲಿ ಇಂದು ನಡೆಯಲಿರುವ ಸಾವಯವ ಕೃಷಿ ಸಮ್ಮೇಳನ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಸೂರತ್‌ನಲ್ಲಿ ನೈಸರ್ಗಿಕ ಕೃಷಿ ಅಳವಡಿಸಿಕೊಂಡು ಯಶಸ್ಸು ಸಾಧಿಸಿರುವ ಸಾವಿರಾರು ರೈತರು ಹಾಗೂ ಇತರ ಭಾಗಿದಾರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
  18. ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದಿಂದ ಅಭ್ಯರ್ಥಿಯಾಗಿರುವ ದೌಪದಿ ಮುರ್ಮು ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮುರ್ಮು ಅವರನ್ನು ವೈಭವದಿಂದ ಸ್ವಾಗತಿಸಲು ಕರ್ನಾಟಕ ಬಿಜೆಪಿ ಘಟಕ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ಮಹಿಳಾ ಮೊರ್ಚಾದಿಂದಲೂ ಸಹ ಅವರನ್ನು ವಿಶೇಷವಾಗಿ ಸ್ವಾಗತಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದ ಭೇಟಿಯ ವೇಳೆ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ರಾಜ್ಯದ ಸಂಸದರು ಮತ್ತು ಶಾಸಕರನ್ನು ಕೋರಲಿದ್ದಾರೆ.
  19. ಲಂಡನ್‌ನಲ್ಲಿ ನಡೆಯುತ್ತಿರುವ ವಿಂಬಲ್ಡನ್ ಗ್ರ್ಯಾನ್ ಸ್ಲಾಮ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಕಜಕಿಸ್ತಾನದ ಅಟಗಾರ್ತಿ ಎಲೆನಾ ರಿಬಾಕಿನಾ ಪ್ರಶಸ್ತಿಯ ಗರಿ ಮೂಡಿಸಿಕೊಂಡಿದ್ದಾರೆ. ಆಲ್ ಇಂಗ್ಲೆಂಡ್ ಕ್ಲಬ್‌ನ ಸೆಂಟರ್ ಕೋರ್ಟ್‌ನಲ್ಲಿ ನಿನ್ನೆ ರಾತ್ರಿ ನಡೆದ ಮಹಿಳೆಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ 17ನೇ ಶ್ರೇಯಾಂಕಿತೆ ರಿಬಾಕಿನ 2-6,6-3,6-3 ಸೆಟ್‌ಗಳಿಂದ ಮೂರನೇ ಶ್ರೇಯಾಂಕಿತೆ, ಟ್ಯುನಿಶಿಯಾದ ಒನ್ಸ್ ಜಬೇರ್ ವಿರುದ್ಧ ಗೆಲುವು ದಾಖಲಿಸಿ ಸಂಭ್ರಮಿಸಿದರು.
  20. ಈದ್-ಉಲ್-ಜುಹಾ ಅಂಗವಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಸೇರಿದಂತೆ ಅವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ. ತ್ಯಾಗ, ಸೇವೆ ಮತ್ತು ಮಾನವೀಯ ಮೌಲ್ಯಗಳ ಸಂಕೇತವಾದ ಈದ್-ಉಲ್-ಜುಹಾ ಎಲ್ಲರಿಗೂ ಶುಭ ಉಂಟುಮಾಡಲಿ ಎಂದು ರಾಷ್ಟ್ರಪತಿ ಕೋರಿದ್ದಾರೆ.
  21. ಬಕ್ರೀದ್ ಹಬ್ಬವನ್ನು ಕಾನೂನಿನ ಚೌಕಟ್ಟಿನಲ್ಲಿ ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಧಿಕಾರಿ ಕೆ.ಶ್ರೀನಿವಾಸ್ ಕೋರಿದ್ದಾರೆ.
  22. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿವಿಧ ಕೆಲಸ, ಕಾಮಗಾರಿಗಳಲ್ಲಿ ತೊಡಗಿರುವ ಮಹಿಳೆಯರನ್ನು ಇನ್ನಷ್ಟು ಸ್ವಾವಲಂಬಿಗಳಾಗಿಸುವ ಉದ್ದೇಶದಿಂದ ನರ್ಸರಿ ಫಾರ್ಮ್‌ಗಳನ್ನು ನಿರ್ಮಿಸಲು ಮಹಿಳೆಯರಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಬಾಗಲಕೋಟೆಯಲ್ಲಿ ತಿಳಿಸಿದ್ದಾರೆ.
  23. ಪ್ರಧಾನಮಂತ್ರಿ ನರೇಂದ್ರಮೋದಿ ಅವರು, ಗುಜರಾತ್‌ನ ಸೂರತ್‌ನಲ್ಲಿ ಇಂದು ನಡೆಯಲಿರುವ ಸಾವಯವ ಕೃಷಿ ಸಮ್ಮೇಳನ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಸೂರತ್‌ನಲ್ಲಿ ನೈಸರ್ಗಿಕ ಕೃಷಿ ಅಳವಡಿಸಿಕೊಂಡು ಯಶಸ್ಸು ಸಾಧಿಸಿರುವ ಸಾವಿರಾರು ರೈತರು ಹಾಗೂ ಇತರ ಭಾಗಿದಾರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
  24. ಜಾರ್ಖಂಡ್‌ನ ದೇವಗಢ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು, ಇದೇ12 ರಂದು ಲೋಕಾರ್ಪಣೆ ಮಾಡಲಿದ್ದಾರೆ. ಒಟ್ಟು 638ಎಕರೆ ಪ್ರದೇಶದಲ್ಲಿ ಸುಮಾರು 400ಕೋಟಿ ರೂಪಾಯಿ ವೆಚ್ಚದಲ್ಲಿ ಈ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ದೇವಗಢ್‌ನಲ್ಲಿರುವ ಪ್ರಸಿದ್ಧ ಬಾಬಾ ವೈದ್ಯನಾಥ ಧಾಮ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಿಕರಿಗೆ ನೂತನ ವಿಮಾನ ನಿಲ್ದಾಣದಿಂದ ಅನುಕೂಲವಾಗಲಿದೆ.
  25. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಆಕಾಶವಾಣಿ ಮಾಸಿಕ ಕಾರ್ಯಕ್ರಮ ಈ ತಿಂಗಳ 31ರಂದು ಭಾನುವಾರ ಪ್ರಸಾರವಾಗಲಿದೆ. ಅಂದು ಬೆಳಗ್ಗೆ 11ಗಂಟೆಗೆ ಈ ಕಾರ್ಯಕ್ರಮ ಪ್ರಸಾರವಾಗಲಿದ್ದು, ಇದು ಒಟ್ಟಾರೆ 91ನೇ ಆವೃತ್ತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರಿಂದ ಸಲಹೆ-ಸಂದೇಶಗಳನ್ನು ಆಹ್ವಾನಿಸಿದ್ದಾರೆ. ನಮೋ ಆಪ್ ಅಥವಾ ಮೈ ಗೌ ಓಪನ್ ಫೋರಂ ಮೂಲಕ ದೇಶದ ಜನತೆ ತಮ್ಮ ವಿಚಾರಗಳನ್ನು ಹಂಚಿಕೊಳ್ಳಬಹುದು. ಉಚಿತ ಸಂಖ್ಯೆ1800-11-7800 ಗೆ ಕರೆ ಮಾಡಿ ತಮ್ಮ ಸಂದೇಶವನ್ನು ದಾಖಲಿಸಬಹುದಾಗಿದೆ. ದೂರವಾಣಿ ಸಂಪರ್ಕ ಜುಲೈ ೨೮ರವರೆಗೆ ಮುಕ್ತವಾಗಿರಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version