ರಾಜಕೀಯ
ಎರಡನೇ ರಾಜಧಾನಿಯಾಗಿ ಬೆಳಗಾವಿ | ಎಚ್.ಡಿ.ಕೆ ಭರವಸೆ
ಸುದ್ದಿದಿನ, ಬೆಂಗಳೂರು | ಕರ್ನಾಟಕದ ಎರಡನೇ ರಾಜಧಾನಿಯಾಗಿ ಬೆಳಗಾವಿಯನ್ನು ಮಾಡುವುದಾಗಿ ಮುಖಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಇದರ ಮೂಲಕ ಉತ್ತರ ಕರ್ನಾಟಕಕ್ಕೆ ಸೂಕ್ತವಾದ ಸ್ಥಾನ-ಮಾನ ನೀಡುವುದಾಗಿ ಅವರು, ಮಾಜಿ ಸಚಿವ ಎಚ್.ಎಚ್.ಕೋನರೆಡ್ಡಿ ನೇತೃತ್ವದಲ್ಲಿ ಬಂದಂತಹ ಹೋರಾಟಗಾರರೊಂದಿಗೆ ಸಭೆ ನಡೆಸಿದ ನಂತರ ಎಚ್.ಡಿ.ಕೆ ತಿಳಿಸಿದ್ದಾರೆ.
ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸುವುದಿಲ್ಲ. ಬೆಳಗಾವಿಯಲ್ಲಿರುವ ಸುವರ್ಣ ಸೌಧದಲ್ಲಿ ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಿರಂತರವಾಗಿ ನಡೆಯಲು ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.
ಈ ನಿಟ್ಟಿನಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸದಂತೆ, ಬೆಳಗಾವಿಯಲ್ಲಿರುವ ಸುವರ್ಣ ಸೌಧದಲ್ಲಿ ಆಡಳಿತಕ್ಕೆ ಸಂಬಂಧಿಸಿದಂತಹ ಚಟುವಟಿಕೆಗಳು ಸದಾ ನಡೆಯುತ್ತಿರುವಂತೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆಯೆಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401