ದಿನದ ಸುದ್ದಿ
ಬೆಳಗಾವಿ ಲೋಕಸಭಾ ಕ್ಷೇತ್ರ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ
ಸುದ್ದಿದಿನ ಡೆಸ್ಕ್ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಶಾಸಕರು ಹಾಗೂ ಮುಖಂಡರಾದ ಎಂ.ಬಿ. ಪಾಟೀಲ, ಆರ್.ವಿ. ದೇಶಪಾಂಡೆ, ಮಹಾಂತೇಶ ಕೌಜಲಗಿ, ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳ್ಕರ್, ಕೆಪಿಸಿಸಿ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ, ಮಾಜಿ ಶಾಸಕರಾದ ಪಿರೋಜ್ ಶೇಠ್, ಅಶೋಕ ಪಟ್ಟಣ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243