ದಿನದ ಸುದ್ದಿ
ಹರಪನಳ್ಳಿ,ಹಡಗಲಿ,ಹಗರಿಬೊಮ್ಮನಳ್ಳಿಯಲ್ಲಿ ನೆರೆಹಾವಳಿ ಭೀತಿ : ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗ್ರತಾ ಕ್ರಮ
ಸುದ್ದಿದಿನ,ಬಳ್ಳಾರಿ : ತುಂಗಾ ಮತ್ತು ಭದ್ರಾದಿಂದ ಹೊರಹರಿಯುವ ನೀರಿನ ಪ್ರಮಾಣದಲ್ಲಿ ತೀವ್ರ ಹೆಚ್ಚಳವಾಗಿದ್ದು ಅಪಾರ ಪ್ರಮಾಣದಲ್ಲಿ ತುಂಗಾಭದ್ರಾ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ತುಂಗಾ ಮತ್ತು ಭದ್ರಾದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಪರಿಣಾಮ ಹರಪನಳ್ಳಿ,ಹಡಗಲಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳಲ್ಲಿ ನೆರೆಹಾವಳಿ ಭೀತಿ ಉಂಟಾಗಿದೆ. ಇದನ್ನರಿತ ಬಳ್ಳಾರಿ ಜಿಲ್ಲಾಡಳಿತ ತುರ್ತು ಸಭೆ ನಡೆಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ತುರ್ತುಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಪ್ರತಿನಿತ್ಯ 10 ಟಿಎಂಸಿಯಷ್ಟು ನೀರು ತುಂಗಾಭದ್ರಾ ಜಲಾಶಯಕ್ಕೆ ನೀರು ಹರಿದುಬರುತ್ತಿದೆ. ತುಂಗಾ ಮತ್ತು ಭದ್ರಾದಿಂದ ನೀರು ಅಪಾರ ಪ್ರಮಾಣದಲ್ಲಿ ಹರಿದು ಬರುತ್ತಿರುವ ಪರಿಣಾಮ ಹರಪನಳ್ಳಿ,ಹಗರಿಬೊಮ್ಮನಳ್ಳಿ ಮತ್ತು ಹಡಗಲಿ ತಾಲೂಕಿನ ನದಿಪಾತ್ರದ ಗ್ರಾಮಗಳಲ್ಲಿ ನೆರೆಹಾನಿ ಉಂಟಾಗುವ ಸಾಧ್ಯತೆ ಇದ್ದು, ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಭೆ ನಡೆಸಿ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನದಿಪಾತ್ರದಲ್ಲಿರುವ ಮನೆಗಳಿಗೆ ಧಕ್ಕೆಯಾಗಲಿವೆ ಎಂದು ಹೇಳಿದ ಡಿಸಿ ನಕುಲ್ ಅವರು ಸಂಭಾವ್ಯ ನೆರೆಹಾನಿ ಉಂಟಾಗುವ ಪ್ರದೇಶಗಳಿಗೆ ಕೂಡಲೇ ಉಪವಿಭಾಗಾಧಿಕಾರಿಗಳು, ತಹಸೀಲ್ದಾರರು, ತಾಪಂ ಇಒಗಳು, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ತೆರಳಿ ಅಲ್ಲಿನ ಗ್ರಾಪಂ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳೊಂದಿಗೆ ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ನದಿಪಾತ್ರದಲ್ಲಿ ಮನೆಕಟ್ಟಿಕೊಂಡವರ ಮನೆಗಳಿಗೆ ಹಾಗೂ ಮಣ್ಣಿನ ಗೊಡೆ ಮನೆಗಳಲ್ಲಿರುವ ಮನೆಗಳಿಗೆ ಗ್ರಾಪಂ ಪಿಡಿಒಗಳು ಮತ್ತು ಗ್ರಾಮಲೆಕ್ಕಿಗರು ತೆರಳಿ ಅವರಿಗೆ ಸ್ಥಳಾಂತರಕ್ಕೆ ಸೂಚಿಸಬೇಕು ಮತ್ತು ತಮ್ಮ ಮೊಬೈಲ್ ನಂಬರ್‍ಗಳನ್ನು ಅವರಿಗೆ ನೀಡಬೇಕು. ತುರ್ತು ಸಂದರ್ಭದಲ್ಲಿ ಅವರು ತಮ್ಮನ್ನು ಸಂಪರ್ಕಿಸಲು ಸಾಧ್ಯವಾಗುತ್ತದೆ ಎಂದರು.
ತುರ್ತುಸಂದರ್ಭದಲ್ಲಿ ಜನ-ಜಾನುವಾರುಗಳನ್ನು ರಕ್ಷಣೆ ಮಾಡಲು ಅನುಕೂಲವಾಗುತ್ತದೆ ಎಂಬ ಕಾರಣಕ್ಕೆ ಹಗರಿಬೊಮ್ಮನಹಳ್ಳಿ ಮತ್ತು ಹರಪನಳ್ಳಿಗಳಲ್ಲಿ ಎರಡು ಬೋಟ್‍ಗಳು ರಕ್ಷಣಾ ತಂಡಗಳು ಲಭ್ಯವಿರುವಂತೆ ಮಾಡಲಾಗಿದೆ ಮತ್ತು ಇದರ ಜತೆಗೆ ಆರೋಗ್ಯ ತಂಡಗಳು ಇರಲಿವೆ ಎಂದು ಅವರು ವಿವರಿಸಿದರು.
ಪ್ರತಿನಿತ್ಯ ವರದಿ ನೀಡಲು ಸೂಚನೆ
ಜನ-ಜಾನುವಾರು ಹಾಗೂ ಮನೆಗಳ ಹಾನಿ ಕುರಿತಂತೆ ಒಂದು ನಮೂನೆ ಸಿದ್ದಪಡಿಸಲಾಗಿದ್ದು, ಅದರಂತೆ ಪ್ರತಿನಿತ್ಯ ತಮ್ಮ ವ್ಯಾಪ್ತಿಯಲ್ಲಾಗುವ ಹಾನಿಗಳ ವಿವರವನ್ನು ಜಿಲ್ಲಾಡಳಿತಕ್ಕೆ ಉಪವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರರು ಕಳುಹಿಸಿಕೊಡಬೇಕು. ಹಾನಿಗಿಡಾದವರ ಕುಟುಂಬಕ್ಕೆ ವಿಪತ್ತು ನಿಧಿ ಅಡಿ 3 ದಿನದೊಳಗೆ ಪರಿಹಾರ ನೀಡುವಂತೆ ನೋಡಿಕೊಳ್ಳಿ; ಈ ವಿಷಯದಲ್ಲಿ ಯಾವುದೇ ಸಬೂಬು ಮತ್ತು ಶಿಷ್ಟಾಚಾರ ಬೇಡ ಎಂದು ಅವರು ಡಿಸಿ ನಕುಲ್ ಸೂಚಿಸಿದರು.
ಕುರವತ್ತಿಯಲ್ಲಿ ಹಾನಿಯಾಗಿದೆ ಎಂಬ ಮಾಹಿತಿಯಿದ್ದು,ಪರಿಹಾರ ಕೂಡಲೇ ಒದಗಿಸಿ ಎಂದು ಸೂಚನೆ ನೀಡಿದ ಅವರು, ಅವಶ್ಯ ಬಿದ್ದರೇ ಗಂಜಿಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದ್ದು, ಅಂತ ಸ್ಥಳಗಳನ್ನು ಗುರುತಿಸಿ ಪಟ್ಟಿ ಮಾಡಿಟ್ಟುಕೊಳ್ಳಿ. ನೆರೆಹಾವಳಿಯಿಂದ ರಸ್ತೆ ಮತ್ತು ಬ್ರಿಡ್ಜ್‍ಗಳಿಗೆ ಆಗುವ ಹಾನಿ ಪ್ರಮಾಣದ ವಿವರವನ್ನು ಒದಗಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ತುಂಗಾಭದ್ರಾ ಜಲಾಶಯದಿಂದ ನೀರು ಬಿಡುವ ಸಂದರ್ಭದಲ್ಲಿ ನದಿಪಾತ್ರದೂದ್ದಕ್ಕೂ ಹಂಪಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಹಾನಿಯುಂಟಾಗದಂತೆ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ವಿವರ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಡಿಸಿ ನಕುಲ್ ಅವರು, ಎಸಿಗಳು ಮತ್ತು ತಹಸೀಲ್ದಾರರು ಕೂಡಲೇ ಸಭೆ ನಡೆಸಿ ಕಾರ್ಯಪ್ರವೃತ್ತರಾಗಿ ಹಾಗೂ ಸ್ಥಳೀಯಮಟ್ಟದ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ಸ್ಪಂದಿಸುವ ಕೆಲಸ ಮಾಡಿ ಎಂದರು.
ಸಹಾಯವಾಣಿ ಕೇಂದ್ರಗಳ ಸ್ಥಾಪನೆ
ನೆರೆಹಾನಿಯಾದ ಸಂದರ್ಭದಲ್ಲಿ ಜನರಿಗೆ ತುರ್ತು ನೆರವಿಗೆ ಧಾವಿಸಬೇಕೆಂಬ ದೃಷ್ಟಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಿ ಮತ್ತು ನಿರಂತರ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಬೇಕು. ದೂರು ಬಂದ ತಕ್ಷಣ ಸ್ಪಂದಿಸಬೇಕುಎಂದು ಡಿಸಿ ನಕುಲ್ ಸೂಚಿಸಿದರು.
ಎನ್‍ಡಿಆರ್‍ಎಫ್ ಸಹಾಯಬೇಕಿದ್ದಲ್ಲಿ ಕೇಳಿ ಅಗತ್ಯ ನೆರವು ಒದಗಿಸಲಾಗುವುದು ಎಂದು ಹೇಳಿದ ಅವರು, ಗ್ರಾಮಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಫಾಗಿಂಗ್ ಮಶೀನ್ ಮತ್ತು ಬ್ಲೀಚಿಂಗ್ ಪೌಡರ್ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಡಿಎಚ್‍ಒ ಮತ್ತು ಟಿಎಚ್‍ಒಗಳು ಸಂಭ್ಯಾವ ನೆರೆಹಾವಳಿ ಪ್ರದೇಶಗಳಿಗೆ ಭೇಟಿ ನೀಡಿ ಆ ವ್ಯಾಪ್ತಿಯ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮರ್ಪಕ ಔಷಧಿಗಳಿರುವಂತೆ ನೋಡಿಕೊಳ್ಳಬೇಕು ಎಂದರು.
ಕೃಷಿ ಚಟುವಟಿಕೆಗಳಿಗಾಗಿ ಬಳ್ಳಾರಿ ಜಿಲ್ಲೆಗೆ ನೀರು ಬಿಡುಗಡೆ
ಬಳ್ಳಾರಿ ರೈತಾಪಿ ಸಮುದಾಯ ಕೃಷಿ ಚಟುವಟಿಕೆಗಳಿಗಾಗಿ ಬಹಳ ದಿನಗಳಿಂದ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ತುಂಗಾಭದ್ರಾ ಜಲಾಶಯದ ನೀರು ಕೃಷಿ ಚಟುವಟಿಕೆಗಳಿಗಾಗಿ ಶುಕ್ರವಾರ ಬೆಳಗ್ಗೆ ಬಿಡುಗಡೆ ಮಾಡಲಾಗುತ್ತಿದೆ.
ಈಗಾಗಲೇ 50 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿದ್ದು, ಪ್ರತಿನಿತ್ಯ 10 ಟಿಎಂಸಿ ನೀರು ಜಲಾಶಯಕ್ಕೆ ಹರಿದುಬರುತ್ತಿರುವ ಹಿನ್ನೆಲೆ ನೀರು ಬಿಡಲಾಗುತ್ತಿದೆ ಎಂದು ತುಂಗಾಭದ್ರಾ ಬೋರ್ಡ್ ಅಧೀಕ್ಷಕ ವೆಂಕಟರಮಣ ಸಭೆಗೆ ತಿಳಿಸಿದರು.
ಜಿಪಂ ಸಿಇಒ ಕೆ.ನಿತೀಶ್, ಎಸ್ಪಿ ಸಿ.ಕೆ.ಬಾಬಾ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಈಶ್ವರ್ ಕಾಂಡೂ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್, ಉಪವಿಭಾಗಾಧಿಕಾರಿಗಳಾದ ರಮೇಶ ಕೋನರೆಡ್ಡಿ, ಪಿ.ಎನ್.ಲೋಕೇಶ ಸೇರಿದಂತೆ ವಿವಿಧ ತಾಲೂಕುಗಳ ತಹಸೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
AI ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ ಪ್ರಕಟ
ಸುದ್ದಿದಿನಡೆಸ್ಕ್:ಕೃತಕ ಬುದ್ಧಿಮತ್ತೆ ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಪತ್ರಿಕೆ ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ವೈಷ್ಣವ್ ಅವರನ್ನು ಶಾರ್ಪರ್ ವರ್ಗದಲ್ಲಿ ಹೆಸರಿಸಲಾಗಿದ್ದು, ಅವರ ನಾಯಕತ್ವದಲ್ಲಿ ಮುಂದಿನ 5 ವರ್ಷಗಳಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಕ್ಷೇತ್ರದ ಮೊದಲ 5 ದೇಶಗಳಲ್ಲಿ ಭಾರತ ಸ್ಥಾನ ಪಡೆಯುವ ಆಶಯದಲ್ಲಿದೆ ಎಂದು ಟೈಮ್ ಮ್ಯಾಗ್‌ಜೀನ್ ಬರೆದಿದೆ.
ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತವನ್ನು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿಸುವ ಪ್ರಯತ್ನದಲ್ಲಿ ಸಚಿವರು ನಿರ್ವಹಿಸಿದ ಮಹತ್ವದ ಪಾತ್ರದ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿ ಅವರ ಹೆಸರು ನಮೂದಿತವಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.
ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ಕೊಡುಗೆ ನೀಡಿದ ಇನ್ಫೋಸೀಸ್‌ನ ಸಹ ಸಂಸ್ಥಾಪಕ ನಂದನ್ ನಿಲೇಕಣಿ, ಸಿಇಓಗಳಾದ ಗೂಗಲ್‌ನ ಸುಂದರ್ ಪಿಚಾಯಿ, ಮೈಕ್ರೋಸಾಫ್ಟ್‌ನ ಸತ್ಯ ನಾದೆಲ್ಲಾ, ಓಪನ್‌ಎಐ ನ ಸ್ಯಾಮ್ ಅಲ್ಟ್‌ಮನ್, ಮೆಟಾದ ಮಾರ್ಕ್ ಝುಕೇರ್‌ಬರ್ಗ್ ಟೈಮ್ ಪ್ರಕಟಿಸಿದ ಪಟ್ಟಿಯಲ್ಲಿ ಸೇರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಾಜಧಾನಿಯಲ್ಲಿ ಅಪಾಯಕಾರಿ ಮರಗಳನ್ನು ಕತ್ತರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.
ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಸಭೆ ನಡೆಸಿದ ಅವರು ಸರಿಯಾಗಿ ಕಾರ್ಯನಿವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಸೆಪ್ಟಂಬರ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ತಿಳಿಸಿದ ಅವರು, ಅಪಾಯಕಾರಿ ಮರಗಳಿದ್ದರೆ, ಕತ್ತರಿಸುವಂತೆ ಸೂಚಿಸಿದ್ದಾರೆ.
ಯಾವುದೇ ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮೌನೀಶ್ ಮೌದ್ಗೀಲ್, ಬಿಎಂಆರ್ಡಿಎ ಆಯುಕ್ತ, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ
ಸುದ್ದಿದಿನಡೆಸ್ಕ್:ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆಯ ಹಿನ್ನಡೆಗೆ ಕಾಂಗ್ರೆಸ್ ಕಾರಣ ಎಂದು ದೂರಿದ್ದಾರೆ. ಜುಲೈನಲ್ಲಿ ನಡೆದ ಸಭೆ ತಮ್ಮ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ ಅವರು, ರಾಜ್ಯದ ಜನರ ಹಿತ ಕಾಪಾಡಲು ಬದ್ಧ ಎಂದು ಹೇಳಿದ್ದಾರೆ. ಮಹದಾಯಿ ಕೇವಲ ಗೋವಾ ಸಂಬಂಧಿ ಯೋಜನೆ ಅಲ್ಲ. ಅಲ್ಲಿ ಹುಲಿ ಸಂರಕ್ಷಿತ ಪ್ರದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು
-
ದಿನದ ಸುದ್ದಿ4 days ago
ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ
-
ದಿನದ ಸುದ್ದಿ3 days ago
ಆತ್ಮಕತೆ | ಸರಳ ಹಾಗೂ ಒಲವಿನ ಮದುವೆಗಳ ಸಾಲುಸಾಲು
-
ದಿನದ ಸುದ್ದಿ5 days ago
ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ
-
ದಿನದ ಸುದ್ದಿ4 days ago
ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ
-
ದಿನದ ಸುದ್ದಿ3 days ago
ರಿವರ್ ಕ್ರಾಸಿಂಗ್ ತರಬೇತಿ ; ಬೋಟ್ ಮುಳುಗಿ ಇಬ್ಬರು ಕಮಾಂಡೋಗಳು ಸಾವು
-
ದಿನದ ಸುದ್ದಿ4 days ago
ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ