Connect with us

ದಿನದ ಸುದ್ದಿ

ಹೆಚ್ಚು ಬೆಲೆಗೆ ದಿನಸಿ ಮಾರಾಟ ಮಾಡಿದ 5 ಅಂಗಡಿಗಳ ವಿರುದ್ಧ ಪ್ರಕರಣ ದಾಖಲು

Published

on

ಸುದ್ದಿದಿನ,ಬಳ್ಳಾರಿ/ಹೊಸಪೇಟೆ : ಕೋವಿಡ್ 19 ಹಿನ್ನಲೆಯಲ್ಲಿ ಲಾಕ್ ಡೌನ್ ಆದೇಶವಿದ್ದು ಇದರ ನಡುವೆ ಹೆಚ್ಚಿನ ಲಾಭ ಗಳಿಸುವ ಕಾರಣದಿಂದ ಕೆಲ ದಿನಸಿ ವರ್ತಕರು ಹೆಚ್ಚಿನ ಬೆಲೆಯನ್ನು ನಿಗದಿಪಡಿಸುತ್ತಿರುವುದು ಕಂಡುಬರುತ್ತಿದ್ದು, ನಗರದಲ್ಲಿನ ಅಂತಹ ಕೆಲ ದಿನಸಿ ಅಂಗಡಿಗಳಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಲಾಗಿದೆ ಎಂದು ಹೊಸಪೇಟೆ ಸಹಾಯಕ ಆಯುಕ್ತ ಶೇಖ್ ತನ್ವೀರ್ ಆಸೀಫ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹೊಸಪೇಟೆಯ ತಾಲೂಕು ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಿ ಅವರು ಮಾತನಾಡಿದರು.

ದಿನಸಿ ಸಾಮಾಗ್ರಿಗಳಿಗೆ ದುಪ್ಪಟ್ಟು ಬೆಲೆ ವಿಧಿಸಿ ಕೆಲ ಕಿರಾಣಿ ಅಂಗಡಿಗಳು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು ಅಂತಹ ಅಂಗಡಿಗಳಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿ ಪಂಚನಾಮೆಯನ್ನು ಮಾಡಲಾಗಿದೆ. ಪ್ರಸ್ತುತ ನಗರದ 5 ಕಿರಾಣಿ ಅಂಗಡಿಗಳಿಗೆ ದಾಳಿ ನಡೆಸಲಾಗಿದ್ದು ಇನ್ನೂ ಹಲವು ಅಂಗಡಿಗಳ ಮೇಲೆ ನಿಗಾ ವಹಿಸಲಾಗುತ್ತಿದೆ ದರ ಹೆಚ್ಚಿಸಿ ದಿನಸಿ ಮಾರಾಟ ಮಾಡುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಲಾಕ್ ಡೌನ್ ಹಿನ್ನಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಮಯ ನಿಗದಿಪಡಿಸಲಾಗಿದ್ದು ನಿಗದಿತ ಸಮಯಕ್ಕೂ ಮೀರಿ ಓಡಾಡಿದರೇ ಕಠಿಣ ಕ್ರಮಕ್ಕೆ ಮುಂದಾಗಿದ್ದೇವೆ ;ಈಗಾಗಲೇ ಸಮಯ ಮೀರಿ ತೆರೆದಿಟ್ಟಿದ್ದ ಕೆಲ ಹಾರ್ಡ್ ವೇರ್ ಹಾಗೂ ಎಲೆಕ್ಟ್ರಿಕಲ್ ಅಂಗಡಿಗಳನ್ನು ಮುಟ್ಟುಗೋಲುಪಡಿಸಲಾಗಿದೆ.

ಏ.21ರಂದು ರಾಜ್ಯಸರ್ಕಾರ ಹೊಸ ನಿಯಮಗಳನ್ನು ಜಾರಿಪಡಿಸಲಿದ್ದು ಅವುಗಳನ್ನು ಗಮನದಲ್ಲಿಟ್ಟುಕೊಂಡು ಏ.22ಕ್ಕೆ ನಗರಕ್ಕೆ ಒಗ್ಗುವಂತೆ ಹೊಸ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತದೆ ಎಂದರು.

ನಂತರ ತಹಶೀಲ್ದಾರ್ ವಿಶ್ವನಾಥ್ ಅವರು ಮಾತನಾಡಿ ದರ ಹೆಚ್ಚಿಸಿ ವ್ಯಾಪಾರ ಮಾಡುವ ಅಂಗಡಿಗಳ ಮಾಹಿತಿ ಪಡೆದು ಪ್ರತಿದಿನ ದಾಳಿ ನಡೆಸುತ್ತಿದ್ದೇವೆ;ಅದೇ ರೀತಿಯಾಗಿ ಕೆಲ ಹೋಲ್ ಸೇಲ್ ಅಂಗಡಿಗಳು ಸಹ ಅಗತ್ಯ ದಿನಸಿಗಳ ಕೃತಕ ಅಭಾವವನ್ನು ಸೃಷ್ಠಿಸಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ಅಂತವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ.

ಶೇ.96 ಪಡಿತರವನ್ನು ವಿತರಿಸಲಾಗಿದ್ದು ಅದೇ ರೀತಿಯಾಗಿ ತಾಲೂಕಿನ ದಾನಿಗಳು ನೆರವಿಗೆ ಬಂದು ನೀಡಿದ 6 ಸಾವಿರದಷ್ಟು ಪಡಿತರ ಕಿಟ್ ಗಳನ್ನು ಅಗತ್ಯವುಳ್ಳವರಿಗೆ ನೀಡಲಾಗಿದೆ. ಮುಂದಿನ ತಿಂಗಳಲ್ಲಿ ಕೇಂದ್ರಸರ್ಕಾರದಿಂದ ಎರಡು ತಿಂಗಳಿನ ಪಡಿತರ ಬರುತ್ತದೆ;ಅದನ್ನು ಮೇ 1ರಿಂದ ಪಡಿತರ ಗ್ರಾಹಕರಿಗೆ ವಿತರಿಸಲಾಗುತ್ತದೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಡಿವೈಎಸ್ಪಿ ವಿ.ರಘುಕುಮಾರ್ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಮತ್ತಿತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending