Connect with us

ದಿನದ ಸುದ್ದಿ

ಬಳ್ಳಾರಿ | ಶ್ರಮಿಕ ರೈಲಿನ ಮೂಲಕ ಬಿಹಾರದತ್ತ 1452 ವಲಸಿಗರು : ಶುಭಕೋರಿದ ಜಿಲ್ಲಾಡಳಿತ

Published

on

ಸುದ್ದಿದಿನ,ಬಳ್ಳಾರಿ : ಬಳ್ಳಾರಿ ರೈಲ್ವೆ ನಿಲ್ದಾಣದಿಂದ 1452 ಜನ ಬಿಹಾರಿ ವಲಸಿಗರನ್ನು ಹೊತ್ತ ಶ್ರಮಿಕ ವಿಶೇಷ ರೈಲು ಬಿಹಾರದತ್ತ ಶನಿವಾರ ಸಂಜೆ ತೆರಳಿತು.ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್,ಎಸ್ಪಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ನಿತೀಶ್ ಸೇರಿದಂತೆ ಅನೇಕರು ಅವರನ್ನು ಸುರಕ್ಷಿತವಾಗಿ ತಮ್ಮೂರನ್ನು ತಲುಪಿ ಮತ್ತೇ ಬಳ್ಳಾರಿಗೆ ಅತ್ಯಂತ ಖುಷಿಯಿಂದ ಬನ್ನಿ ಎಂದು ಶುಭಹಾರೈಸಿ ಬೀಳ್ಕೊಟ್ಟರು.

ಬಳ್ಳಾರಿ,ತೋರಣಗಲ್ಲು ಸೇರಿದಂತೆ ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಬಿಹಾರದ 1452 ಜನ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆಯಿಂದಲೇ ವಿಶೇಷ ವೈದ್ಯಕೀಯ ತಪಾಸಣೆ ನಡೆಸಿ ಅವರಿಗೆ ಪ್ರಮಾಣಪತ್ರ ವಿತರಿಸಿ ಹಾಗೂ ಅಲ್ಲಿಯೇ 840 ರೂ.ಗಳ ಟಿಕೆಟ್‍ನ್ನು ನೀಡಿ ರೈಲ್ವೆ ನಿಲ್ದಾಣಕ್ಕೆ ಬಸ್‍ಗಳ ಮೂಲಕ ಅವರನ್ನು ತಂದುಬಿಡಲಾಯಿತು.

ಆ ವಲಸಿಗರನ್ನು ಅವರಿಗೆ ನೀಡಲಾದ ಟಿಕೆಟ್ ಹಿಂಬದಿಯಲ್ಲಿ ಬರೆಯಲಾದ ಸೀಟ್ ಸಂಖ್ಯೆ ಮತ್ತು ಬೋಗಿ ನೋಡಿಕೊಂಡು ಅವರನ್ನು ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಸಂಬಂಧಿಸಿದ ಬೋಗಿಯಲ್ಲಿ ಕುಳಿತುಕೊಳ್ಳುವಂತೆ ತಿಳಿಸುತ್ತಿದ್ದರು.

ಈ ವಲಸಿಗ ಪ್ರಯಾಣಿಕರು ಪ್ರಯಾಣದ ಸಂದರ್ಭದಲ್ಲಿ ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಎರಡು ಬ್ರೇಡ್ ಪ್ಯಾಕ್,ಮೂರು ಲೀಟರ್ ನೀರು, ಎರಡು ಪ್ಯಾಕೇಟ್ ಆಹಾರ ಪೊಟ್ಟಣ, ಮಿರ್ಚಿ ಬಜಿ ಹಾಗೂ ಇನ್ನೀತರ ಆಹಾರ ಸಾಮಗ್ರಿಗಳ ಆಹಾರ ಕಿಟ್‍ಗಳನ್ನು ಪ್ರತಿಯೊಬ್ಬರಿಗೂ ಜಿಲ್ಲಾಡಳಿತದ ವತಿಯಿಂದ ವಿತರಿಸಲಾಯಿತು.

ರೈಲ್ವೆ ನಿಲ್ದಾಣದೊಳಗೆ ಆಗಮಿಸುತ್ತಲೇ ವಲಸಿಗ ಪ್ರಯಾಣಿಕರಿಗೆ ಸ್ಯಾನಿಟೈಸರ್ ಕೈಗೆ ಸಿಂಪಡಿಸಲಾಗುತ್ತಿತ್ತು. ರೆಡ್‍ಕ್ರಾಸ್ ಸಂಸ್ಥೆಯವರು ಮಾಸ್ಕ್‍ಗಳನ್ನು ವಿತರಿಸಿದರು. ತಮ್ಮ ರಾಜ್ಯದ ಕಡೆ ತೆರಳಲು ರೈಲಿನ ಸೀಟಿನಲ್ಲಿ ಆಸೀನರಾಗಿದ್ದ ವಲಸಿಗರು ತಮ್ಮೂರು ಕಡೆ ಸುರಕ್ಷಿತವಾಗಿ ಪಯಣಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತು.

ರೈಲ್ವೆ ನಿಲ್ದಾಣದಲ್ಲಿನ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಬಿಹಾರದ ಸಹಸ್ರಾಗೆ ಈ ರೈಲು ತೆರಳಲಿದ್ದು, 34 ಗಂಟೆಗಳ ಪ್ರಯಾಣದ ಅವಧಿಯಾಗಿರಲಿದೆ. ಮಾರ್ಗಮಧ್ಯೆ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಿ ಕಳುಹಿಸಿಕೊಡಲಾಗಿದೆ ಎಂದರು.

ಈಗ ಒಂದು ರೈಲು ಬಿಹಾರ ರಾಜ್ಯಕ್ಕೆ ತೆರಳುತ್ತಿದ್ದು,ಇನ್ನೂ ಬಿಹಾರಕ್ಕೆ ವಲಸಿಗರು ತೆರಳುವುದಿದ್ದಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಉತ್ತರ ಪ್ರದೇಶಕ್ಕೆ ಎರಡು ರೈಲುಗಳು ಮೇ 17ರಂದು ಬೆಳಗ್ಗೆ 10ಕ್ಕೆ ಹೊಸಪೇಟೆ ಮತ್ತು ಬಳ್ಳಾರಿ ರೈಲು ನಿಲ್ದಾಣದ ಮೂಲಕ ಉತ್ತರ ಪ್ರದೇಶದ ವಲಸಿಗರು ತೆರಳಲಿದ್ದಾರೆ ಎಂದು ವಿವರಿಸಿದ ಅವರು ಈಗಾಗಲೇ ಅವರೆಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಟಿಕೆಟ್ ಸಹ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಬಂಕದ್ ಮತ್ತಿತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending