ರಾಜಕೀಯ

ಶೋಭಾ ಮನೆಯಲ್ಲಿದೆ ಬಿ ಎಸ್ ವೈ ಖಜಾನೆ: ಬೇಳೂರು ಹೊಸ ಬಾಂಬ್ !

Published

on

ಸುದ್ದಿದಿನ ಡೆಸ್ಕ್: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಖಜಾನೆ ಸಂಸದೆ ಶೋಭಾ ಕರಂದ್ಲಾಜೆ ಮನೆಯಲ್ಲಿದೆ. ಅವರ ಮೇಲೆ ರೈಡ್ ಮಾಡಿದರೆ ಎಲ್ಲಾ ಹಣ ಸಿಗುತ್ತದೆ ಎಂದು ಹೇಳಿಕೆ ನೀಡಿದ್ದು, ಚರ್ಚೆಗೆ ಕಾರಣವಾಗಿದೆ.

ನಿನ್ನೆ ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಬಿಜೆಪಿ ನಾಯಕರ ನಡೆಯನ್ನು ಖಂಡಿಸಿದರು. ಸಚಿವ ಡಿ.ಕೆ.ಶಿವಕುಮಾರ್ ಆಪ್ತರ ಮೇಲೆ ಐಟಿ ದಾಳಿ ನಡೆಸುತ್ತಿರುವುದು ಉದ್ದೇಶಪೂರ್ವಕವಾಗಿದೆ ಎಂದು ಖಂಡಿಸಿದರು.
ಶೋಭಾ ಕರಂದ್ಲಾಜೆ ಮನೆ ಮೇಲೆ ಏಕೆ ದಾಳಿ ಮಾಡುವುದಿಲ್ಲ ಎಂದು ಪ್ರಶ್ನೆ ಮಾಡಿದರು.
ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರ ಹಿಡಿಯಲು ಎಸ್.ಬಂಗಾರಪ್ಪ ಕಾರಣ. ಆದರೆ ಇದೇ ಯಡಿಯೂರಪ್ಪ ಶಿವಮೊಗ್ಗದಲ್ಲಿ ಕಾಂಗ್ರೆಸ್ ಸೋಲಲು ಕಾರಣರಾಗಿದ್ದಾರೆ ಎಂದು ಆರೋಪಿಸಿದರು.
ಮಾಜಿ ಸಿಎಂ ಯಡಿಯೂರಪ್ಪ ಅವರು ಕೇವಲ ಲಿಂಗಾಯತ ಸಮಾಜದವರಿಗೆ ಅಧಿಕಾರ ನೀಡಿದ್ದಾರೆ. ಬ್ರಾಹ್ಮಣ ಸಮಾಜಕ್ಕೆ ಮೋಸ ಮಾಡಿದ್ದಾರೆ ಎಂದು ದೂರಿದರು.

Leave a Reply

Your email address will not be published. Required fields are marked *

Trending

Exit mobile version