ದಿನದ ಸುದ್ದಿ

ಜಲ ಜೀವನ್ ಮಿಷನ್ ಅನುಷ್ಠಾನದಲ್ಲಿ ಕರ್ನಾಟಕದಿಂದ ಉತ್ತಮ ಸಾಧನೆ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

Published

on

ಸುದ್ದಿದಿನ, ಹೊಸಪೇಟೆ (ವಿಜಯನಗರ): ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಅನುಷ್ಠಾನದಲ್ಲಿಯೂ ಕರ್ನಾಟಕ ಉತ್ತಮ ಪ್ರಗತಿ ಸಾಧಿಸಿದೆ ಎಂದರು.

ರಾಜ್ಯದಲ್ಲಿ 2 ಸಾವಿರದ 766 ಕಿಲೋ ಮೀಟರ್ ಉದ್ದದ ರಸ್ತೆ ಅಭಿವೃದ್ಧಿ ಮಾಡಲಾಗಿದೆ. 10 ಹೊಸ ರೈಲ್ವೆ ಮಾರ್ಗಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ರಾಯಚೂರಿನಲ್ಲಿ ಹಸಿರು ವಿಮಾನ ನಿಲ್ದಾಣ ನಿರ್ಮಾಣವಾಗಲಿದ್ದು, ಕರ್ನಾಟಕದ ಅಭಿವೃದ್ಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡುತ್ತಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version