Connect with us

ದಿನದ ಸುದ್ದಿ

ಬಡವರಿಗೆ ಉತ್ತಮ ಶಿಕ್ಷಣ, ಆರೋಗ್ಯ ಸೌಲಭ್ಯ : ಸಚಿವ ಶಿವರಾಮ್ ಹೆಬ್ಬಾರ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಉತ್ತರಕನ್ನಡ : ಎಲ್ಲ ಬಡವರಿಗೂ ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ಅವರು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೃಹತ್ ಆರೋಗ್ಯ ಮೇಳ ಹಾಗೂ ಬ್ಲಡ್ ಬ್ಯಾಂಕ್ ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ 15ಸಾವಿರಕ್ಕೂ ಹೆಚ್ಚು ಜನರ ಉಚಿತ ಆರೋಗ್ಯ ತಪಾಸಣೆ ಮಾಡಲಾಗಿದೆ.

ಜಿಲ್ಲೆಗೆ 28ಅಂಬುಲೆನ್ಸ್ ಒದಗಿಸಲಾಗಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸಿ ಬಡವರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕನಸಿನಂತೆ, ರಾಜ್ಯದಲ್ಲಿ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಕೃಷಿಕರಿಗೆ ಯಶಸ್ವಿನಿ ಆರೋಗ್ಯ ಕಾರ್ಡ್ ಪುನರಾರಂಭಿಸಲು ಸರ್ಕಾರ ನಿರ್ಧರಿಸಿದೆ.

ಈಗಾಗಲೇ ಬಜೆಟ್‌ನಲ್ಲಿ ಮುಖ್ಯಮಂತ್ರಿ 300 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಬಡವರಿಗಾಗಿ ಆಯುಷ್ಮಾನ್ ಕಾರ್ಡ್ ಮೂಲಕ 5 ಲಕ್ಷವರೆಗೆ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿಶೇಷವಾಗಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಈ ಕುರಿತು ಹೆಚ್ಚು ಪ್ರಚಾರ ಮಾಡಬೇಕು. ಇದೀಗ ಗ್ರಾಮಒನ್ ಮೂಲಕ ಆನ್‌ಲೈನ್‌ನಲ್ಲೇ ಕಾರ್ಡ್ ಪಡೆಯುವ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ ಎಂದು ಸಚಿವರು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending