ಬಹಿರಂಗ
ಸಫಾಯಿ ಕರ್ಮಚಾರಿಗಳು ಗಟಾರದಲ್ಲಿಳಿದು ಸ್ವಚ್ಛಗೊಳಿಸುತ್ತಾ ಸಾಯುತ್ತಿದ್ದರೂ ದೇಶದ ಜನಕ್ಕೆ ಆಕ್ರೋಶ ಬರುತ್ತಿಲ್ಲ : ಬಿಜವಾಡ
ಮೇ ಸಾಹಿತ್ಯ ಮೇಳ ,ಗದಗ
ದಿನಾಂಕ 4-5 ಮೇ 2019
ಅಭಿವೃದ್ಧಿ ಭಾರತ – ಕವಲುದಾರಿಗಳ ಮುಖಾಮುಖಿ
ಉದ್ಘಾಟನಾ ಹಾಗು ಪುಸ್ತಕ ಲೋಕಾರ್ಪಣೆ
ಪ್ರಗತಿಪರ ಚಿಂತಕರು ಹಾಗೂ ಮ್ಯಾಗ್ಸೆಸಿ ಪ್ರಶಸ್ತಿ ಪುರಸ್ಕೃತರಾದ ವಿಲ್ಸನ್ ಬಿಜವಾಡರವರ ಮಾತುಗಳು.
ನಾನು ಮೂಲತಃ ಕನ್ನಡದವನು ನಮ್ಮ ರಾಜ್ಯದಲ್ಲಿ ರಾಜಕೀಯ ಏನೇಣು ನಡಿತೀದೆ ಹೇಗೆ ನಡಿತಿದೆ ಅನ್ನೋದು ಸಹಜವಾಗಿ ನನಗೂ ಕುತೂಹಲವಿರುತ್ತೆ, ನಾವು ಮಾತಾಡಬೇಕಾದಾಗ ಯಾವುದೇ ಪಕ್ಷಕ್ಕೆ ಸೀಮಿತವಾಗಿ ಅಥವಾ ವಿಚಾರಧಾರೆಗೆ ಸೀಮಿತವಾಗಿ ಮಾತಾಡಬಾರದು, ನಾವು ಮಾತಾಡಬೇಕಾದರೆ ತುಂಬಾ ಯೋಚನೆ ಮಾಡಿ ಮಾತಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿ ಮಾಡಲಾಗುತ್ತಿದೆ.
ಭಯದ ವಾತಾವರಣವನ್ನು ಸೃಷ್ಟಿ ಮಾಡಲಾಗುತ್ತಿದೆ , ದೇಶಪ್ರೇಮ ದೇಶಪ್ರೇಮದ ಸರ್ಟಿಫಿಕೇಟ್ ಗಳನ್ನು ಕೊಡಲಾಗುತ್ತದೆ, ನ್ಯಾಯಮೂರ್ತಿಯೊಬ್ಬರು ಮಹಿಳೆಯರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಬೇಡಿ ಎಂದು ಹೇಳುತ್ತಿದ್ದಾರೆ ನೇಮಕವಾದಲ್ಲಿ ಇವರು ನಮ್ಮ ಮೇಲೆಯೇ ಮಹಿಳಾ ಪರ ಆರೋಪಗಳನ್ನು ಮಾಡುತ್ತಾರೆ ಎಂಬ ಕಾರಣ ಕೊಡಲಾಗುತ್ತಿದೆ, ದೇಶದ ನ್ಯಾಯಾಧಾನ ವ್ಯವಸ್ಥೆಯಲ್ಲಿ ವಿಳಂಬ ನೀತಿಯನ್ನು ಅನುಸರಿಸಲಾಗುತ್ತಿದೆ. ಬಡವರಿಗೆ ದೀನ ದಲಿತರಿಗೆ ಹಿಂದುಳಿದವರಿಗೆ ನ್ಯಾಯ ಮರಿಚಿಕೆಯಾಗಿದೆ.
ರೈತರನ್ನು ನೀವು ಇಂದೇ ಪ್ರಶ್ನೆಯನ್ನು ಮಾಡಿ ಐದು ವರ್ಷಗಳಲ್ಲಿ ನಿಮಗೇನಾದರೂ ಕೆಲಸಗಳಾಗಿವೆಯೇ ಎಂದು, ಇಲ್ಲ ಎಂಬ ಉತ್ತರ ದೊರೆಯುತ್ತದೆ. ಬೇರೆ ಬೇರೆ ವೃತ್ತಿಯವರನ್ನು ಕೇಳಿ ಇಲ್ಲವೆನ್ನುತ್ತಾರೆ. ಆದರೆ ಇದೇ ಪ್ರಶ್ನೆಗೆ ಉತ್ತರವನ್ನು ಪಡೆದಾಗ ದೇಶಕ್ಕಾಗಿ ಏನಾದರೂ ಮಾಡೋಣ ದೇಶದ ಹಿತಕ್ಕಾಗಿ ಓಟು ಮಾಡಬೇಕು ಅಂತ ಹೇಳ್ತಾರೆ ಈ ರೀತಿ ಮನಸ್ಥಿತಿಗಳನ್ನು ಸೃಷ್ಟಿ ಮಾಡಲಾಗಿದೆ, ಅವರು ಅಂದುಕೊಂಡ ದೇಶಕ್ಕಾಗಿ ಓಟು ಕೇಳುತ್ತಿದ್ದಾರೆಯೇ ಹೊರತು ಭಾರತದ ಜನಕ್ಕಾಗಲ್ಲ, ಪ್ರತಿ ವರ್ಷ 2000 ರೈತರು ರೈತಾಪಿ ಜೀವನ ಬಿಟ್ಟು ಕಾರ್ಮಿಕರಾಗುತ್ತಿದ್ದಾರೆ, ಮಲ ಹೊರುವ ಪದ್ದತಿಯಲ್ಲಿ ಆಧ್ಯಾತ್ಮಿಕ ಸಂತೃಪ್ತಿ ಅಂತ ಗುಜರಾತ್ ಮುಖ್ಯಮಂತ್ರಿಗಳು ಹೇಳುತ್ತಾರೆ, ಆಗ ನಾನು ಹೇಳಿದ್ದೆ ಹಾಗಾದರೆ ನೀವು ಮಲ ಹೊತ್ತು ಸಂತೃಪ್ತಿ ಪಡೆಯಿರಿ ಎಂದು.
ಸಫಾಯಿ ಕರ್ಮಚಾರಿ ಆಂದೋಲನ್ ನಾವು ಪ್ರಾರಂಭ ಮಾಡಿದ್ದು ಈ ಸಮಸ್ಯಗಳಿಂದ ಹೊರಬರಲು, ನೀವು ಬಡವರಾಗಿ ಹುಟ್ಟಿದ್ದು ಯಾಕೆ ಎಂದು ಕೇಳಿದಾಗ ಬಾಬಾ ಉತ್ತರ ಹೀಗಿರುತ್ತದೆ ನೀನು ಹುಟ್ಟಿದ ಜಾತಿ ಎಂದು, ಏನಾದರೂ ಪ್ರಶ್ನೆ ಮಾಡಿದಾರೆ ನಿಮ್ಮ ಹಣೆಬರಹವೆಂಬ ಹಣೆಪಟ್ಟಿ ಕಟ್ಟುತ್ತಾರೆ, ಅಂಧಶ್ರದ್ದೇಗಳನ್ನು ನಮ್ಮ ಮೆದುಳಿನಲ್ಲಿ ತುರುಕುತ್ತಾರೆ.
ನಿರಂತರ ಹೋರಾಟಗಳ ನಂತರ ಸೆಪ್ಟಿಕ್ ಟ್ಯಾಂಕ್ ಗಳನ್ನು ಸರಕಾರಗಳು ಜಾರಿ ಮಾಡಿವೆ ಹಾಗೂ ಖಾಸಗಿಯಲ್ಲೂ ಅದು ನಡಿತಿವೆ. ಕೊನೆಯಲ್ಲಿ ನನ್ನದೊಂದು ಪ್ರಶ್ನೆ ಯಾರಾದರೂ ಸತ್ತರೆ ದೇಶವೆಲ್ಲಾ ತುಂಬಾ ಭಾವುಕವಾಗುತ್ತೆ ದಿನೆ ದಿನೇ ಸಫಾಯಿ ಕರ್ಮಚಾರಿಗಳು ಗಟಾರದಲ್ಲಿಳಿದು ಸ್ವಚ್ಛಗೊಳಿಸುತ್ತಾ ಸಾಯುತ್ತಿದ್ದಾರೆ ದೇಶದ ಜನಕ್ಕೆ ಆಕ್ರೋಶ ಬರುತ್ತಿಲ್ಲ ???
ಮಾಹಿತಿ ಕೃಪೆ : Khpatil Advocate
https://m.facebook.com/story.php?story_fbid=2259611090965936&id=100007512008764
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪೂರ್ಣಚಂದ್ರ ತೇಜಸ್ವಿ ಕಾದಂಬರಿ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕನ್ನಡ ಸಾಹಿತ್ಯದಲ್ಲಿ ಹೊಸ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ದೇವನಗರಿ ಸುದ್ದಿದಿನ ಕನ್ನಡ ದಿನಪತ್ರಿಕೆ, ಏಕಾಂತಗಿರಿ ಟ್ರಸ್ಟ್, ದಾವಣಗೆರೆ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ‘ಪೂರ್ಣಚಂದ್ರ ತೇಜಸ್ವಿ ಕಾದಂಬರಿ ಪ್ರಶಸ್ತಿ–2026’ ಘೋಷಿಸಲಾಗಿದ್ದು, ಅರ್ಹ ಬರಹಗಾರರಿಂದ ಕಾದಂಬರಿ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಚಿಂತನೆ, ಸೃಜನಶೀಲತೆ ಹಾಗೂ ವಿಭಿನ್ನ ಕಥನ ಸಾಧ್ಯತೆಗಳನ್ನು ಹೊಂದಿರುವ ಕಾದಂಬರಿಕಾರರನ್ನು ಪರಿಚಯಿಸುವ ಆಶಯದೊಂದಿಗೆ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ಇದುವರೆಗೆ ಯಾವುದೇ ಕಾದಂಬರಿಯನ್ನು ಪುಸ್ತಕ ರೂಪದಲ್ಲಿ ಪ್ರಕಟಿಸದ ಬರಹಗಾರರಿಗೆ ತಮ್ಮ ಸೃಜನಶೀಲತೆಯನ್ನು ಸಾಹಿತ್ಯ ಲೋಕಕ್ಕೆ ಪರಿಚಯಿಸಲು ಇದು ಉತ್ತಮ ವೇದಿಕೆಯಾಗಲಿದೆ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಕೃತಿಗಳನ್ನು ಪ್ರಕಟಿಸಿರುವ ಬರಹಗಾರರೂ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.
ಸ್ಪರ್ಧೆಗೆ ಸಲ್ಲಿಸುವ ಕಾದಂಬರಿಯು ಸಂಪೂರ್ಣ ಸ್ವತಂತ್ರ ಹಾಗೂ ಲೇಖಕರ ಸ್ವಂತ ರಚನೆಯಾಗಿರಬೇಕು. ಕಾದಂಬರಿಯ ಯಾವುದೇ ಭಾಗವು ಈ ಮೊದಲು ಯಾವುದೇ ಮಾಧ್ಯಮಗಳಲ್ಲಿ ಪ್ರಕಟವಾಗಿರಬಾರದು ಅಥವಾ ಪ್ರಸಾರವಾಗಿರಬಾರದು. ಈಗಾಗಲೇ ಪುಸ್ತಕ ರೂಪದಲ್ಲಿ ಪ್ರಕಟವಾಗಿರುವ ಕಾದಂಬರಿಗಳನ್ನು ಪರಿಗಣಿಸಲಾಗುವುದಿಲ್ಲ. ವಯಸ್ಸಿನ ಯಾವುದೇ ಮಿತಿ ಇರುವುದಿಲ್ಲ.
ಹಸ್ತಪ್ರತಿಯನ್ನು A4 ಅಳತೆಯ ಹಾಳೆಯಲ್ಲಿ ನುಡಿ ಅಥವಾ ಯುನಿಕೋಡ್ ಕನ್ನಡ ಫಾಂಟ್ ಬಳಸಿ, 12 ಪಾಯಿಂಟ್ ಅಕ್ಷರ ಗಾತ್ರದಲ್ಲಿ ಸ್ಪಷ್ಟವಾಗಿ ಟೈಪ್ ಮಾಡಿರಬೇಕು. ಕಾದಂಬರಿಯು ಕನಿಷ್ಠ 120 ಪುಟಗಳಿಗಿಂತ ಕಡಿಮೆ ಇರಬಾರದು. ಹಸ್ತಪ್ರತಿಯ ಮೊದಲ ಪುಟದಲ್ಲಿ ಕಾದಂಬರಿಯ ಶೀರ್ಷಿಕೆಯನ್ನು ಮಾತ್ರ ನಮೂದಿಸಬೇಕು. ಲೇಖಕರ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ ಹಾಗೂ ಕಾದಂಬರಿಯ ಸಂಕ್ಷಿಪ್ತ ಪರಿಚಯವನ್ನು ಪ್ರತ್ಯೇಕ ಲಕೋಟೆಯಲ್ಲಿ ಕಳುಹಿಸಬೇಕು. ಕೃತಿಯು ಸ್ವತಂತ್ರ ರಚನೆಯಾಗಿದ್ದು, ಈ ಮೊದಲು ಪ್ರಕಟವಾಗಿಲ್ಲ ಎಂಬ ಸ್ವಯಂ ದೃಢೀಕರಣ ಪತ್ರವನ್ನೂ ಲಗತ್ತಿಸುವುದು ಕಡ್ಡಾಯವಾಗಿದೆ.
ಕೃತಿಗಳ ಆಯ್ಕೆಯಲ್ಲಿ ಸಾಹಿತ್ಯಕ ಗುಣಮಟ್ಟ, ಭಾಷಾ ಸೊಗಸು, ಕಥನ ತಂತ್ರ, ಸೃಜನಶೀಲತೆ, ವೈಚಾರಿಕತೆ ಹಾಗೂ ಸಾಮಾಜಿಕ ಪ್ರಸ್ತುತತೆಗೆ ಆದ್ಯತೆ ನೀಡಲಾಗುವುದು. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿದ್ದು, ಸಲ್ಲಿಸಿದ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.
ಆಯ್ಕೆಯಾಗುವ ಕಾದಂಬರಿಗೆ ₹10,000 ನಗದು ಬಹುಮಾನ ನೀಡಿ ಗೌರವಿಸಲಾಗುವುದು. ಆಸಕ್ತರು ತಮ್ಮ ಹಸ್ತಪ್ರತಿಗಳನ್ನು ಡಿಸೆಂಬರ್ 30, 2026ರೊಳಗೆ ಕಳುಹಿಸಬೇಕು.
ಹಸ್ತಪ್ರತಿಗಳನ್ನು ‘ಸಂಪಾದಕರು, ದೇವನಗರಿ ಸುದ್ದಿದಿನ–ಕನ್ನಡ ದಿನಪತ್ರಿಕೆ, #3231/01, ಸಂಜೀವ ಸದನ, 11ನೇ ಮುಖ್ಯ ರಸ್ತೆ, 4ನೇ ಅಡ್ಡರಸ್ತೆ, ಎಂ.ಸಿ.ಸಿ. ಬಿ ಬ್ಲಾಕ್, ದಾವಣಗೆರೆ–577004’ ಈ ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 9980346243 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ | ವಾಟ್ಸಾಪ್ | 9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ




