ದಿನದ ಸುದ್ದಿ
ಭದ್ರಾ ಜಲಾಶಯದಿಂದ 197ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ : ಕೇಂದ್ರ ಸಚಿವೆ ಶೋಭ ಕರಂದ್ಲಾಜೆ
ಸುದ್ದಿದಿನ, ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಚಿಕ್ಕಮಗಳೂರು, ಕಡೂರು ಹಾಗು ಹಾಸನ ಜಿಲ್ಲೆಯ ಅರೆಸೀಕೆರೆ ತಾಲೂಕಿನ ಒಟ್ಟು 197ಕೆರೆಗಳಿಗೆ ಭದ್ರಾ ಜಲಾಶಯದಿಂದ ನೀರು ತುಂಬಿಸಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಹೇಳಿದಾರೆ.
ಜಿಲೆಯ ತರೀಕೆರೆ ತಾಲೂಕಿನ ಭದ್ರಾ ಜಲಾಶಯದಿಂದ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಅವರು ಮಾತನಾಡಿದರು. ಯೋಜನೆಯ ಮೊದಲನೇ ಹಂತದಲ್ಲಿ 406ಕೋಟಿ ರೂಪಾಯಿ ವೆಚ್ಚದಲ್ಲಿ 55ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದರು.
ಇದಕ್ಕೂ ಮುನ್ನತರೀಕೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅವರು, 500ಲೀಟರ್ ಸಾಮರ್ಥ್ಯದ ಆಮ್ಲಜನಕ ಘಟಕ ವೀಕ್ಷಿಸಿದರು. ತರೀಕೆರೆ ತಾಲೂಕಿಗೆ 30 ಕೋಟಿ ರೂಪಾಯಿ ವೆಚ್ಚದಲ್ಲಿ ತಾಯಿ ಮಗು ಪ್ರತ್ಯೇಕ ಆಸ್ಪತ್ರೆ ಮಂಜೂರಾಗಿದ್ದು ಸುಸಜ್ಜಿತ ಆಸ್ಪತ್ರೆ ಶೀರ್ಘವೇ ತರೀಕೆರೆಯಲ್ಲಿ ನಿರ್ಮಾಣವಾಗಲಿದೆ ಎಂದು ಸಚಿವರು ಹೇಳಿದರು. ಶಾಸಕ ಡಿ.ಎಸ್ ಸುರೇಶ್, ಜಿಲ್ಲಾಧಿಕಾರಿ ಕೆ.ಎನ್ ರಮೇಶ್, ಮೊದಲಾದವರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಲ್ಲದೆ, ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಸುಮಾರು 24000 ಪೌತಿ ಖಾತೆಗಳನ್ನು ಬದಲಾಯಿಸಲಾಗಿದ್ದು, ಪೌತಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಜಮೀನು ಮಂಜೂರು ಆಗಿ ಪೋಡಿ ಆಗದೇ ಪ್ರತ್ಯೇಕ ಪಹಣಿ ಬರದೇ ಇರುವುದರಿಂದ ಅಂತಹವುಗಳನ್ನು ಗೈರು ವಿಲೇ ಕಡತವನ್ನು ಮಾಡಲಾಗಿದ್ದು, ಸುಮಾರು 4000 ಜನರಿಗೆ ಈ ಗೈರು ವಿಲೇ ಕಡತವನ್ನು ನೀಡಲಾಗಿದೆ. ರಾಜ್ಯದಲ್ಲಿ ನಮ್ಮ ಜಿಲ್ಲೆಯೂ 3ನೇ ಸ್ಥಾನವನ್ನು ಹೊಂದಲಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್ಗಳನ್ನು ವಶಪಡಿಸಿಕೊಳ್ಳಲಾಗುವುದು.
ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಏ.1 ರಿಂದ 2026ರ ಡಿಜಿಟಲ್ ಜನಗಣತಿ
ಸುದ್ದಿದಿನ,ದಾವಣಗೆರೆ :2026ರ ಜನಗಣತಿ ಪ್ರಕ್ರಿಯೆ ಏಪ್ರಿಲ್ 1 ರಿಂದ ಆರಂಭವಾಗಲಿದ್ದು, ಈ ಬಾರಿ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಸಾರ್ವಜನಿಕರು ಆನ್ಲೈನ್ ಮೂಲಕ ಸ್ವಯಂ ದೃಢೀಕರಣ ಮಾಡಿಕೊಳ್ಳಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ7 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ2 days agoಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ – ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ
-
ದಿನದ ಸುದ್ದಿ4 days agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
-
ದಿನದ ಸುದ್ದಿ3 days agoಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ
-
ದಿನದ ಸುದ್ದಿ22 hours agoಎಸ್.ಎಸ್.ಎಲ್.ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ರಮ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ9 hours agoತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

