ದಿನದ ಸುದ್ದಿ
ಭ್ರದಾಮೇಲ್ದಂಡೆ ಯೋಜನೆ: ಕೇಂದ್ರದಿಂದ 9 ಸಾವಿರದ 675 ಕೋಟಿ ರೂಪಾಯಿ ಆರ್ಥಿಕ ನೆರವು : ಸಚಿವ ಗೋವಿಂದ ಕಾರಜೋಳ
ಸುದ್ದಿದಿನ ಡೆಸ್ಕ್ : ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ದೆಹಲಿಯಲ್ಲಿಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ತ್ವರಿತ ಅನುಮತಿ ನೀಡುವಂತೆ ಮನವಿ ಮಾಡಿರುವುದಾಗಿ ಹೇಳಿದರು.
ರಾಷ್ಟ್ರೀಯ ಯೋಜನೆಯಾಗಿ ಪರಿಗಣನೆಯಾದ ನಂತರ ಕೇಂದ್ರದಿಂದ 9 ಸಾವಿರದ 675 ಕೋಟಿ ರೂಪಾಯಿ ಆರ್ಥಿಕ ನೆರವು ದೊರೆಯಲಿದೆ. ಇದು ರಾಜ್ಯದ ಮೊದಲ ರಾಷ್ಟ್ರೀಯ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದು ಸಚಿವ ಕಾರಜೋಳ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243