ದಿನದ ಸುದ್ದಿ

ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪ.ಪಂ.ಚುನಾವಣೆ ವೇಳಾ ಪಟ್ಟಿ ಬಿಡುಗಡೆ

Published

on

ಸುದ್ದಿದಿನ,ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಅವಧಿ ಮುಗಿದಿರುವ ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣಪಂಚಾಯತಿ ಸಾರ್ವತ್ರಿಕ ಚುನಾವಣೆಯನ್ನು ದಿ:29/04/2021 ರಂದು ನಡೆಸಲು ಉದ್ದೇಶಿಸಿದ್ದು, ಏ.08 ರಂದು ಜಿಲ್ಲಾಧಿಕಾರಿಗಳು ವೇಳಾಪಟ್ಟಿಯನ್ನು ಹೊರಡಿಸಿರುತ್ತಾರೆ.

ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ ಏ.-15, ನಾಮಪತ್ರ ಪರಿಶೀಲಿಸುವ ದಿನಾಂಕ ಏ.-16, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಏ.-19 ಆಗಿರುತ್ತದೆ. ಏಪ್ರಿಲ್ 27 ರಂದು ಬೆಳಿಗ್ಗೆ 7.00 ರಿಂದ ಸಂಜೆ 5.00ರವರೆಗೆ ಮತದಾನ ನಡೆಯಲಿದ್ದು, ಏಪ್ರಿಲ್-30 ರಂದು ಬೆಳಿಗ್ಗೆ 8.00 ರಿಂದ ತಾಲೂಕು ಕೇಂದ್ರ ಸ್ಥಳದಲ್ಲಿ ಮತ ಎಣಿಕೆ ನಡೆಯಲಿದೆ. ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳಿಸುವ ದಿನಾಂಕ ಏಪ್ರಿಲ್-30 ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ | ಸಾಮಾಜಿಕ ಜಾಲತಾಣಗಳು ಮತ್ತು ಸುಳ್ಳು ಸುದ್ದಿಗಳು..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version