ದಿನದ ಸುದ್ದಿ
ಭಾರತ್ ಬಂದ್ : ದಾವಣಗೆರೆ ಜಿಲ್ಲೆಯಲ್ಲಿ ಪ್ರತಿಭಟನೆ ಬಿಸಿ ಜೋರು
ಸುದ್ದಿದಿನ ಡೆಸ್ಕ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನೀಡಿರುವ ಬಂದ್ ಬಿಸಿ ವಾಣಿಜ್ಯ ನಗರಿ ದಾವಣಗೆರೆಯಲ್ಲಿ ಜೋರಾಗಿದೆ.
ಲೋಕಲ್ ಗೂಡ್ಸ್ ಶೆಡ್ ಲಾರಿ ಮಾಲೀಕರ ಸಂಘ, ಜೆಡಿಎಸ್ ಜಿಲ್ಲಾ ಘಟಕ, ಕರ್ನಾಟಕ ತಾಂಡ ರಕ್ಷಣಾ ವೇದಿಕೆ, ಖಾಸಗಿ ಬಸ್ ಮಾಲೀಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದು, ಪ್ರತಿಭಟನೆ ನಡೆಸಿವೆ.
ನಗರದ ಜಯದೇವ ವೃತ್ತದಲ್ಲಿ ಟೈಯರ್ ಸುಟ್ಟು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.