ದಿನದ ಸುದ್ದಿ

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸೇವೆ ಸಲ್ಲಿಸುವ ಸ್ಕೌಟ್ಸ್ ಮತ್ತು ಗೈಡ್‍ಗಳಿಗೆ ಲಸಿಕೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ದಾವಣಗೆರೆ, ಜಿಲ್ಲಾ ಸಂಸ್ಥೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ದಾವಣಗೆರೆ ಉತ್ತರವಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಾವಣಗೆರೆ ಇವರ ಸಹಯೋಗದೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಮಯದಲ್ಲಿ ಸೇವೆ ಸಲ್ಲಿಸುವ ಸ್ಕೌಟ್ಸ್ ಮಾಸ್ಟರ್ಸ್ ಮತ್ತು ಗೈಡ್ ಕ್ಯಾಪ್ಟನ್ ಮತ್ತು ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಜು.14 ರಂದು ವ್ಯಾಕ್ಸಿನೇಷನ್ ವ್ಯವಸ್ಥೆಯನ್ನು ಎಕ್ಸ್ ಮುನ್ಸಿಪಲ್ ಕಾಲೇಜಿನಲ್ಲಿ ಆಯೋಜಿಸಲಾಯಿತು.

ಇದನ್ನೂ ಓದಿ | ದಾವಣಗೆರೆ | ಕಟ್ಟಡ ಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ 

ಉತ್ತರವಲಯದ ಕ್ಷೇತ್ರಶಿಕ್ಷಣಾಧಿಕಾರಿ ಕೊಟ್ರೇಶ್.ಜಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಮುಖ್ಯ ಆಯುಕ್ತ ಮುರುಘರಾಜೇಂದ್ರ ಜೆ ಚಿಗಟೇರಿ, ಜಿಲ್ಲಾ ಆಯುಕ್ತ ಎಪಿ ಷಡಕ್ಷರಪ್ಪ, ಜಲ್ಲಾ ಖಜಾಂಚಿ ಬಿ.ವಿ ವಿಶ್ವನಾಥ್, ನೋಡೆಲ್ ಆಫೀಸರ್ ಡಾ.ಚೇತನ್, ಶ್ರೀನಿವಾಸ್, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ, ಪ್ರಾಂಶುಪಾಲ ಹಾಲಪ್ಪ, ಉತ್ತರ ವಲಯ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಅಶ್ವಿನಿ, ಬಿ.ಆರ್.ಸಿ ಹಾಗೂ ಸಿ.ಆರ್.ಪಿ ರವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version