ರಾಜಕೀಯ

ದ್ವೈವಾರ್ಷಿಕ ಚುನಾವಣೆ | ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನ : ಕಾಂಗ್ರೆಸ್ ಉಮೇದುವಾರಿಕೆ ಸಲ್ಲಿಕೆ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 10ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಜೈರಾಮ್ ರಮೇಶ್ ಹಾಗೂ ಮನ್ಸೂರ್ ಖಾನ್ ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭಾ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.

ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಚಿತ್ರನಟ ಜಗ್ಗೇಶ್ ಅವರಿಗೆ ಪಕ್ಷದ ಕಚೇರಿಯಲ್ಲಿ ಸನ್ಮಾನಿಸಿ, ಬಿ-ಫಾರಂ ನೀಡಲಾಯಿತು. ನಾಳೆ ಇಬ್ಬರೂ ಮುಖಂಡರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ. ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನ.
ನಾಮಪತ್ರ ಪರಿಶೀಲನೆ ಬುಧವಾರ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಜೂನ್ 3ರಂದು ಕೊನೆಯ ದಿನ. ಜೂನ್ 10ರಂದು ಮತದಾನ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version