ದಿನದ ಸುದ್ದಿ
ಬಿಗ್ ಬ್ರೇಕಿಂಗ್ | ಅರ್ಜುನ್ ಸರ್ಜಾಗೆ ಜೈಲು ಗ್ಯಾರಂಟಿ : ಈ ನಾಲ್ಕು ಸಾಕ್ಷಿಗಳು ಸಾಕಾ..!?
ಸುದ್ದಿದಿನ ಡೆಸ್ಕ್ : ಅರ್ಜುನ್ ಸರ್ಜಾ ಜೈಲಿಗೆ ಹೋಗೋದು ಸತ್ಯ..ಸತ್ಯ..ಸತ್ಯ, ಸರ್ಜಾ ಜೈಲಿಗೆ ಕಳಿಸಲು ಆ ನಾಲ್ಕು ಸಾಕ್ಷಿಗಳು ಸಾಕಾ..? ಆ ಪ್ರಮುಖ ಸಾಕ್ಷಿಗಳು ಯಾವುವು..? ಶ್ರುತಿ ಹರಿಹರನ್ ಮಾಡಿದ ಆರೋಪಕ್ಕೆ ಪೂರಕವಾಗಿವೆಯಾ ಆ ನಾಲ್ಕು ಸಾಕ್ಷಿಗಳು..? ಆ ಸಾಕ್ಷಿಗಳ ಸ್ಫೋಟಕ ಡೀಟೆಲ್ಸ್ ಸರ್ಜಾಗೆ ಮುಳುವಾಗಲಿದೆಯಾ..?
ಅರ್ಜುನ್ ಸರ್ಜಾ ಜೈಲಿಗೆ ಹೋಗೋದು ಸತ್ಯ ಸತ್ಯ ಸತ್ಯ ಎಕಂದ್ರೆ, ಶ್ರುತಿ ಮಾಡಿದ ಲೈಂಗಿಕ ಕಿರುಕುಳ ಆರೋಪಕ್ಕೆ ಮಹತ್ವದ ಸಾಕ್ಷಿ ಲಭ್ಯವಾಗಿದೆ. ಮಹಜರು ವೇಳೆ ಪೊಲೀಸರೆದುರು ಸ್ಫೋಟಕ ಸತ್ಯ ಬಿಚ್ಚಿಟ್ಟಿದ್ದಾರೆ ಪ್ರತ್ಯಕ್ಷದರ್ಶಿಗಳು.
ಸಂಕಷ್ಟ ತಂದ ಸಾಕ್ಷ್ಯಗಳು
- ನಂಬರ್ 1: ಕೆಂಪಾಪುರ ಬಳಿಯ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಡೆದ ಸ್ಥಳಕ್ಕೆ ಪೊಲೀಸರ ಭೇಟಿ
ಅಪ್ಪಿಕೊಳ್ಳುವ ಸೀನ್ ರಿಹರ್ಸಲ್ನಲ್ಲಿ ಶ್ರುತಿ ಅಳುತ್ತಾ ಬಂದಿದ್ದು ನಿಜ ಎಂದ ಸಾಕ್ಷಿಗಳು - ನಂಬರ್ 2: ಆಕಾಶ್ ಹಾಸ್ಪಿಟಲ್ನಲ್ಲಿ ನಡೆದ ದೃಶ್ಯದಲ್ಲೂ ಶ್ರುತಿ ಅಪ್ಸೆಟ್ ಆಗಿದ್ರು ಎಂದ ಸಾಕ್ಷಿಗಳು
- ನಂಬರ್ 3: ದೇವನಹಳ್ಳಿಯ ಸಾದಹಳ್ಳಿ ಗೇಟ್ ಟ್ರಾಫಿಕ್ ಸಿಗ್ನಲ್ನ ಸಿಸಿಟಿವಿ ದೃಶ್ಯ ಪರಿಶೀಲಿಸಿದ ಪೊಲೀಸರು ಶ್ರುತಿ ಹರಿಹರನ್ರನ್ನು ಅರ್ಜುನ್ ಸರ್ಜಾ ಕರೆಯುತ್ತಿರೋ ದೃಶ್ಯ ಲಭ್ಯ
ಸಿಗ್ನಲ್ನಲ್ಲಿ ರೆಸಾರ್ಟ್ಗೆ ಬಾ ಎಂದು ಸರ್ಜಾ ಕರೆದಿದ್ರು ಎಂದು ಆರೋಪಿಸಿದ್ದ ಶ್ರುತಿ - ನಂಬರ್ 4: ಯುಬಿ ಸಿಟಿಯಲ್ಲಿ ಹಿಂಬದಿಯಿಂದ ನನ್ನನ್ನು ತಬ್ಬಿಕೊಂಡಿದ್ರು ಎಂದಿದ್ದ ಶ್ರುತಿ
ಶ್ರುತಿ ಹೇಳಿದ ದಿನವೇ ಅರ್ಜುನ್ ಸರ್ಜಾ ಹೆಸರಿನಲ್ಲಿ ರೂಂ ಬುಕ್ ಸಾಬೀತು ಈ ಸಾಕ್ಷಿಗಳ ಹಿನ್ನೆಲೆಯಲ್ಲಿ ನಾಳೆ ಅರ್ಜುನ್ ಸರ್ಜಾ ಬಂಧನ ಸಾಧ್ಯತೆವಿದೆ.
ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪ ಪ್ರಕರಣ ಶ್ರುತಿ ಪ್ರಕರಣದ ಸಾಕ್ಷ್ಯದಾರರು ಇಂದು ಕಬ್ಬನ್ ಪಾರ್ಕ್ ಠಾಣೆಗೆ ಹಾಜರ್ ಆಗಿದ್ದಾರೆ. ಸಾಕ್ಷಿಗಳಾದ ಕಿರಣ್, ಬೋರೇಗೌಡ, ಭರತ್ ನೀಲಕಂಠರನ್ನು ಇಂದು ಪೊಲೀಸರು ವಿಚಾರಣೆ
ಸಾಕ್ಷಿಗಳ ವಿಚಾರಣೆ ಬಳಿಕ ಇಂದು ಅರ್ಜುನ್ ಸರ್ಜಾಗೆ ಪೊಲೀಸರಿಂದ ನೋಟಿಸ್ ಜಾರಿಯಾಗಲಿದೆ. ನಾಳೆಯೇ ಅರ್ಜುನ್ ಸರ್ಜಾರನ್ನು ವಿಚಾರಣೆ ಮಾಡಲಿರೋ ಪೊಲೀಸರು ವಿಚಾರಣೆ ಮಗಿದ ಬಳಿಕ ಅರ್ಜುನ್ ಸರ್ಜಾ ಬಂಧನ ಮಾಡುವ ಸಾಧ್ಯತೆ ಇದ್ದು, ‘ಅರ್ಜುನ’ಗೆ ಕೃಷ್ಣ ಜನ್ಮಸ್ಥಾನ ಸೇರೊ ಭೀತಿ ಹೆಚ್ಚಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ; ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ಇಲಾಖೆ ಕಚೇರಿಗೆ ಸಲ್ಲಿಸಲು ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
ಸುದ್ದಿದಿನ,ದಾವಣಗೆರೆ: ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣವು ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಅವರು (07) ರಂದು ಪಿ.ಬಿ ರಸ್ತೆಯಲ್ಲಿನ ಡಾ. ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಈ ಬಸ್ ನಿಲ್ದಾಣ ಸ್ಮಾರ್ಟ್ ಸಿಟಿ’ ಯೋಜನೆಯಡಿ 20 ಕೋಟಿ ವೆಚ್ಚದಲ್ಲಿ ಸಿದ್ದಗೊಂಡು, ಈಚೆಗಷ್ಟೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರುವ ಈ ಬಸ್ ನಿಲ್ದಾಣವು ಸುಸಜ್ಜಿತವಾಗಿದ್ದು, ಹತ್ತಾರು ಸೌಲಭ್ಯಗಳನ್ನು ಹೊಂದಿದೆ. 84 ಮಳಿಗೆ ಹಾಗೂ ಏಕಾಲಕ್ಕೆ 16 ಬಸ್ ನಿಲ್ಲಿಸಬಹುದಾಗಿದೆ. 200 ದ್ವೀಚಕ್ರ ವಾಹನ ನಿಲುಗಡೆಗೆ ಕೂಡ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸುಸಜ್ಜಿತ ಬಸ್ ನಿಲ್ದಾಣವನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು. ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪಮೇಯರ್ ಸೋಗಿ ಶಾಂತಕುಮಾರ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ, ಖಾಸಗಿ ಬಸ್ ಏಜೆಂಟರ ಸಂಘದ ಅಧ್ಯಕ್ಷರಾದ ಉಮೇಶ್‍ರಾವ್ ಸಾಳಂಕಿ, ಹಾಗೂ ದಾವಣಗೆರೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಏಜೆಂಟ್ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಜಂಟಿ ನಿರ್ದೇಶಕಾರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಎಂಬ್ರಾಯ್ಡರಿ ಮತ್ತು ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
-
ದಿನದ ಸುದ್ದಿ7 days ago
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
-
ದಿನದ ಸುದ್ದಿ7 days ago
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
-
ದಿನದ ಸುದ್ದಿ6 days ago
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ
-
ದಿನದ ಸುದ್ದಿ7 days ago
ದಿವಾಕರ. ಡಿ ಮಂಡ್ಯ ಅವರಿಗೆ ಪಿ ಎಚ್ ಡಿ ಪದವಿ
-
ದಿನದ ಸುದ್ದಿ7 days ago
ಚಿನ್ನದ ಬೆಲೆ ಇಳಿಕೆ
-
ದಿನದ ಸುದ್ದಿ7 days ago
ಈ ದಿನ ಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನ