ದಿನದ ಸುದ್ದಿ

Big Breaking | ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಸ್ಥಳದಲ್ಲಿಯೇ ಸಾವು

Published

on

ಸುದ್ದಿದಿನ,ಧಾರವಾಡ: ವೇಗವಾಗಿ ಬಂದ ಕಾರವೊಂದು ಬೈಕಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಬೈಕ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ವೆಂಕಟಾಪೂರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ‌ಸಮೀಪ‌ ನಡೆದಿದೆ.

ಧಾರವಾಡ ತಾಲೂಕಿನ ಬೋಗೂರು ಗ್ರಾಮದ
ಸುಶಿಲವ್ವ ಹರಿಜನ, ಕಲ್ಲವ್ವ ಹರಿಜನ, ರಾಜು ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಅಪಘಾತವಾದ ನಂತರ ಕಾರ್ ಬಿಟ್ಟು ವಾಹನ‌ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.‌ಇನ್ನೂ ಘಟನೆ ನಡೆಯುತ್ತಿದಂತೆ ಸ್ಥಳೀಯರು ಹಾಗೂ ವಾಹನ ಸವಾರರು ಗಾಯಾಳುಗಳ ರಕ್ಷಣೆಗೆ ಮುಂದಾಗಿದ್ದರು, ಆದರೆ ತೀವ್ರವಾದ ಪೆಟ್ಟು ಬಿದಿದ್ದರಿಂದ ಮೂವರು ಸ್ಥಳದಲ್ಲಿಯೇ ಕೊನೆಯುಸಿರು ಎಳೆದಿದ್ದಾರೆ.

ಸದ್ಯ ಸ್ಥಳೀಯರ ಮಾಹಿತಿ‌ ಮೇರೆಗೆ ಗರಗ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version