ರಾಜಕೀಯ

ಬಿಹಾರ | ಬೋಚಹಾನ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ; ಆರ್ಜೆಡಿ ಅಭ್ಯರ್ಥಿ ಅಮರ್ ಪಾಸ್ವಾನ್ ಗೆಲುವು

Published

on

ಸುದ್ದಿದಿನ,ಬಿಹಾರ  : ಬಿಹಾರದ ಬೋಚಹಾನ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಆರ್ಜೆಡಿ ಅಭ್ಯರ್ಥಿ ಅಮರ್ ಪಾಸ್ವಾನ್ ತಮ್ಮ ಸಮೀಪದ ಬಿಜೆಪಿ ಅಭ್ಯರ್ಥಿ ಬಾಬಿ ಕುಮಾರಿ ವಿರುದ್ಧ 36ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ವಿಕಾಸಶೀಲ್ ಇನ್ಸಾನ್ ಪಾರ್ಟಿಯ ಶಾಸಕ ಮುಸಾಫಿರ್ ಪಾಸ್ವಾನ್ ಅವರ ನಿಧನದಿಂದ ಉಪಚುನಾವಣೆ ಎದುರಾಗಿತ್ತು.

ಪಶ್ಚಿಮ ಬಂಗಾಳದ ಅನ್ಸೋಲ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಶತ್ರುಘ್ನ ಸಿನ್ಹಾ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದ ಮುನ್ನಡೆಯಲ್ಲಿದ್ದಾರೆ.

ಪಶ್ಚಿಮ ಬಂಗಾಳದ ಬಲ್ಯಾ ಗುಂಗೆ ವಿಧಾನಸಭಾ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್ನ ಬಾಬುಲ್ ಸುಪ್ರಿಯಾ ಸಿಪಿಐ ಅಭ್ಯರ್ಥಿ ವಿರುದ್ಧ 19ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version