ದಿನದ ಸುದ್ದಿ
ದಾವಣಗೆರೆ | ಟ್ಯಾಕ್ಟರ್ ಗೆ ಬೈಕ್ ಡಿಕ್ಕಿ, ಸವಾರರಿಬ್ಬರು ಸಾವು
ಸುದ್ದಿದಿನ,ದಾವಣಗೆರೆ : ಟ್ಯಾಕ್ಟರ್ ಗೆ ಬೈಕ್ ಡಿಕ್ಕಿ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕು ಮಲ್ಲಶೆಟ್ಟಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ನಿಂಗಪ್ಪ (40) ಕೆಂಚವೀರಪ್ಪ (24) ಸಾವನ್ನಪ್ಪಿದವರಾಗಿದ್ದು,ಇವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಬೆಂಚಿಕಟ್ಟೆ ಗ್ರಾಮದ ನಿವಾಸಿಗಳಾಗಿದ್ದಾರೆ. ಬೆಂಚಿಕಟ್ಟೆಯಿಂದ ದಾವಣಗೆರೆ ಕಡೆಗೆ ಬರುತ್ತಿದ್ದ ಬೈಕ್ ಸವಾರರು ಟ್ಯಾಕ್ಟರ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401