ದಿನದ ಸುದ್ದಿ

ಮಂಡ್ಯ : ಸೇತುವೆಗೆ ಬೈಕ್​ ಡಿಕ್ಕಿ ಹೊಡೆದು ಇಬ್ಬರ ಧಾರುಣ ಸಾವು

Published

on

ಸುದ್ದಿದಿನ ಡೆಸ್ಕ್ : ರಸ್ತೆ ಪಕ್ಕದ ಸೇತುವೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್​ ಸವಾರರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಸಂಭವಿಸಿದೆ.

ಕುರುಬನಪುರದ ಚನ್ನೇಗೌಡ(51) ಹಾಗೂ ಆತನ ಸ್ನೇಹಿತ ಸಾವನ್ನಪ್ಪಿರುವ ದುರ್ದೈವಿಗಳು. ಮಳವಳ್ಳಿ ತಾಲೂಕಿನ ಮೈಸೂರು ರಸ್ತೆಯ ಕನ್ನಹಳ್ಳಿ ಬಳಿ ಬೈಕ್​ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್​ ಆಯತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯ ಮೇಲೆ ಒಬ್ಬ ಸತ್ತಿದ್ದು, ಮತ್ತೊಬ್ಬ ಸೇತುವೆಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಿರುಗಾವಲು ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version