ದಿನದ ಸುದ್ದಿ

ಸಾರಿಗೆ ಬಸ್ ಗೆ ಬೈಕ್ ಡಿಕ್ಕಿ: ಶಾಲಾ ಬಾಲಕಿ ಸ್ಥಳದಲ್ಲೇ ದುರ್ಮರಣ

Published

on

ಸುದ್ದಿದಿನ, ಶಿರಸಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರಸಿ- ಹುಬ್ಬಳ್ಳಿ ರಸ್ತೆಯ ಚಿಪ್ಗಿಯಲ್ಲಿ ನಡೆದಿದೆ.

ಚಿಪ್ಗಿಯ ಚೆಕ್ ಪೋಸ್ಟ್ ಘಟನೆ ನಡೆದಿದ್ದು, ಕುಮಟಾ-ಶಿರಸಿ ಹುಬ್ಬಳ್ಳಿ ಬಸ್ ಗೆ ಬೈಕ್ ಡಿಕ್ಕಿಯಾಗಿದೆ. ಬಾಲಕಿಯ ದೇಹ ಸಂಪೂರ್ಣ ಛಿದ್ರಗೊಂಡಿದೆ.

ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಪೊಲೀಸರು ಸ್ಥಳಕ್ಕೆಧಾವಿಸಿ ತನಿಖೆ ನಡೆಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version