ದಿನದ ಸುದ್ದಿ
ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ ಪಾವತಿ : ಸಚಿವ ಡಾ. ಕೆ. ಸುಧಾಕರ್
ಸುದ್ದಿದಿನ,ಬೆಂಗಳೂರು : ಆರೋಗ್ಯ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಲವು ಕಚೇರಿಗಳು ಮತ್ತು ಸಂಸ್ಥೆಗಳಲ್ಲಿ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದಿರುವ ಬಗ್ಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇಲಾಖೆಯಡಿಯಲ್ಲಿ ಬರುವ ಎಲ್ಲ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೂ ಅವರ “ಆಧಾರ್“ಆಧಾರಿತ ಬಯೋಮೆಟ್ರಿಕ್ ಹಾಜರಾತಿ ಆಧರಿಸಿಯೇ ಇನ್ನು ಮುಂದೆ ವೇತನ ನೀಡುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243