Connect with us

ದಿನದ ಸುದ್ದಿ

ದಾವಣಗೆರೆ ಹಕ್ಕಿಜ್ವರ : ಕೋಳಿಗಳನ್ನು ವೈಜ್ಞಾನಿಕವಾಗಿ ಕಿಲ್ ಮಾಡಬೇಕು : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಹಕ್ಕಿಜ್ವರ ಕಂಡು ಬಂದ ಹರಿಹರ ತಾಲ್ಲೂಕಿನ ಬನ್ನಿಕೋಡು ಸೇರಿದಂತೆ ಸುತ್ತಮುತ್ತ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಪಶುಸಂಗೋಪನೆ ಇಲಾಖೆ ಅಧಿಕಾರಿ/ಸಿಬ್ಬಂದಿಗಳು ವೈಜ್ಞಾನಿಕ ರೀತಿಯಲ್ಲಿ 332 ಕೋಳಿಗಳನ್ನು ನಾಶಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಬುಧವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಹಕ್ಕಿಜ್ವರ ನಿಯಂತ್ರಣ ಮತ್ತು ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನಾರೋಗ್ಯಕ್ಕೆ ಒಳಪಟ್ಟ ಕೋಳಿಗಳನ್ನು ವೈಜ್ಞಾನಿಕವಾಗಿ ಕಿಲ್ಲಿಂಗ್ ಮಾಡಬೇಕು. ಆದ್ದರಿಂದ ಅನಾರೋಗ್ಯಕ್ಕೆ ಒಳಪಟ್ಟ ಕೋಳಿಗಳನ್ನು ಸಾರ್ವಜನಿಕರು ಸ್ವಪ್ರೇರಣೆಯಿಂದ ನಾಶಮಾಡದೇ ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಕರೆಮಾಡಿ ಮಾಹಿತಿ ನೀಡಬೇಕು ಎಂದರು.

ಮಾದರಿಯನ್ನು ಪರೀಕ್ಷೆಗೆ ಕಳುಹಿಸಲು ಸೂಚನೆ 

ಆವರಗೆರೆಯ ಆರ್‍ಹೆಚ್ ಫಾರ್ಮ್‍ನ ಕೋಳಿಗಳಲ್ಲಿ ಹಕ್ಕಿಜ್ವರ ಬಂದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಫಾರ್ಮ್‍ಗಳ ಕೋಳಿಗಳ ಸ್ಯಾಂಪಲ್‍ನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಬೇಕೆಂದು ಸೂಚಿಸಿದರು.

ಹಕ್ಕಿಜ್ವರ ಪೀಡಿತ ಪ್ರದೇಶ ಮತ್ತು ಸರ್ವೇಕ್ಷಣಾ ವಲಯದಲ್ಲಿರುವ ಯಾವದೇ ಪಕ್ಷಿಗಳು ಮತ್ತು ಕೋಳಿಯ ಮಾಂಸ ಹಾಗೂ ಮೊಟ್ಟೆಯಿಂದ ತಯಾರಿಸಿದ ಆಹಾರವನ್ನು ಸಾರ್ವಜನಿಕರು ಸೇವಿಸಬಾರದು ಮತ್ತು ಮಾರಾಟ ಮಾಡಬಾರದು ಎಂದರು.

ಸತ್ತ ಕೋಳಿಗಳನ್ನು ಅವೈಜ್ಞಾನಿಕವಾಗಿ ಸಾರ್ವಜನಿಕ ಅಥವಾ ಖಾಸಗಿ ಪ್ರದೇಶಗಳಲ್ಲಿ ಎಸೆಯಬಾರದು. ಒಂದು ವೇಳೆ ಹೀಗೆ ಎಸೆದರೆ ಸಂಬಂಧಿಸಿದ ವಾಹನಗಳ ಚಾಲಕರು, ಮಾಲೀಕರು ಇವರ ಮೇಲೆ ಸೂಕ್ತ ಜರುಗಿಸಲಾಗುವುದು. ಹಾಗೂ ಸಾರ್ವಜನಿಕರು ಹೀಗೆ ಮಾಡುವುದು ಕಂಡು ಬಂದಲ್ಲಿ ತಕ್ಷಣ ಸಹಾಯವಾಣಿ ಅಥವಾ ಇಲಾಖೆಗೆ ತಿಳಿಸಬೇಕೆಂದರು.

ದಾವಣಗೆರೆ ತಾಲ್ಲೂಕಿನ ಗ್ರಾಮಗಳು ಮತ್ತು ಹರಿಹರ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ ಈ ಕೆಳಕಂಡ ಗ್ರಾಮಗಳಿಂದ ಯಾವುದೇ ಕೋಳಿ ಮಾಂಸ ಮತ್ತು ಇನ್ನಿತರೆ ಪಕ್ಷಿಗಳ ಮಾಂಸ ಹಾಗೂ ಮೊಟ್ಟೆಗಳನ್ನು ಸಾರ್ವಜನಿಕರು ಸೇವಿಸಬಾರದು ಮತ್ತು ಸಾಗಾಣಿಕೆ ಮಾಡಬಾರದು ಎಂದು ಆದೇಶಿಸಲಾಗಿದೆ ಎಂದು ಹೇಳಿದರು.

ಹರಿಹರ ತಾಲ್ಲೂಕಿನ ಗ್ರಾಮಗಳು

ಬನ್ನಿಕೋಡು, ಬೇವಿನಹಳ್ಳಿ, ಸಾಲಕಟ್ಟೆ, ಮಿಟ್ಮಕಟ್ಟೆ, ದೇವರಬೆಳಕೆರೆ. ಕಡ್ಲೆಗೊಂದಿ, ಸಲಗನಹಳ್ಳಿ, ಕುಣೆಬೆಳೆಕೆರೆ, ಬೂದುಹಾಳ್, ಗುಳದಹಳ್ಳಿ, ಆದಾಪುರ, ನಿಟ್ಟೂರು, ಕುಂಬಳೂರು, ಜಿಗಳಿ, ಯಲವಟ್ಟಿ, ಲಕ್ಕಿಶೆಟ್ಟೆಹಳ್ಳಿ, ಕಮಾಲಪುರ, ಹೊಸಹಳ್ಳಿ, ಬಿಳಸನೂರು, ತಿಮ್ಲಾಪುರ, ರಾಜನಹಳ್ಳಿ, ಹಲಸಬಾಳು, ಹರಗನಹಳ್ಳಿ, ನಾಗೇನಹಳ್ಳಿ, ರಾಮತೀರ್ಥ, ರಾಯಪುರ, ಭಾನುವಳ್ಳಿ, ಬ್ಯಾಲದಹಳ್ಳಿ, ಯಕ್ಕೆಗೊಂದಿ, ನಂದಿತಾವರೆ, ಬೆಳ್ಳೂಡಿ, ಹನಗವಾಡಿ, ಷಂಶೀಪುರ, ಮಹಜೇನಹಳ್ಳಿ, ಶೇರಾಪುರ, ಹರಿಹರ, ದೊಗ್ಗಳ್ಳಿ, ಅಮರವತಿ, ಮಲ್ಲನಾಯ್ಕನಹಳ್ಳಿ, ಗುಳದಹಳ್ಳಿ, ಸಂಕ್ಲೀಪುರ ಮತ್ತು ಹರಿಹರ ಗ್ರಾಮಗಳು

ದಾವಣಗೆರೆ ತಾಲ್ಲೂಕಿನ ಗ್ರಾಮಗಳು

ದಾವಣಗೆರೆ, ದೊಡ್ಡಬಾತಿ, ಹಳೇಬಾತಿ, ನೀಲಾನಹಳ್ಳಿ, ಅಗಸನಕಟ್ಟೆ, ಆವರಗೊಳ್ಳ, ಕೋಡಿಹಳ್ಳಿ, ನಾಗನೂರು, ಜರೀಕಟ್ಟೆ, ಬಿಸಲೇರಿ, ಮುದಹದಡಿ, ಬಟ್ಲಕಟ್ಟೆ, ಬಲ್ಲೂರು, ಕನಗೊಂನಹಳ್ಳಿ, ಕುಂದುವಾಡ, ಶ್ಯಾಮನೂರು, ನಿಟ್ಟುವಳ್ಳಿ,ಮತ್ತು ಪಾಮೇನಹಳ್ಳಿ ಗ್ರಾಮಗಳಲ್ಲಿ ಕೋಳಿ ಮೊಟ್ಟೆ, ಮಾಂಸದ ಆಹಾರ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ.

ಸಭೆಯಲ್ಲಿ ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಎಎಸ್‍ಪಿ ರಾಜೀವ್, ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ.ಭಾಸ್ಕರ್ ನಾಯಕ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಹೆಚ್‍ಓ ಡಾ.ರಾಘವೇಂದ್ರ ಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಡಿಡಿಎಲ್‍ಆರ್ ರಾಮಾಂಜನೇಯ, ಆರ್‍ಟಿಓ ಎನ್.ಜೆ.ಬಣಕಾರ್, ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್, ಹರಿಹರ ನಗರಸಭೆ ಆಯುಕ್ತರಾದ ಲಕ್ಷ್ಮೀ, ದಾವಣಗೆರೆ ತಹಶೀಲ್ದಾರ್ ಸಂತೋಷ್‍ಕುಮಾರ್, ಇತರೆ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending