ದಿನದ ಸುದ್ದಿ
ಜನನ ಮತ್ತು ಮರಣ ನೋಂದಣಿ ; ವಿಳಂಬ ಮಾಡುವಂತಿಲ್ಲ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹೇಳಿದರು.
ಸೋಮವಾರ(ಮೇ.26) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ನಾಗರೀಕ ನೋಂದಣಿ ಪದ್ದತಿಯ ಸಮನ್ವಯ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನ್ಯಾಯಾಲಯದ ಆದೇಶದಂತೆ ಜನನ, ಮರಣ ದಿನಾಂಕವು ನೋಂದಾಣಿಯಾಗಬೇಕು. ನ್ಯಾಮತಿಯಲ್ಲಿ ನೋಂದಾಣಿಗೆ ಶೀಘ್ರವೇ ಲಾಗಿನ್ ಸಮಸ್ಯೆಯನ್ನು ಸರಿಮಾಡಿಸಬೇಕು. ಸಾರ್ವಜನಿಕರು ಜನನ ದಿನಾಂಕವನ್ನು ತಿದ್ದುಪಡಿ ಮಾಡುವಂತೆ ಒತ್ತಾಯಿಸಬಾರದು. ಜನನ ಮರಣಗಳನ್ನು ನಿಗಧಿತ ದಿನಗಳ ಒಳಗಾಗಿ ಕಡ್ಡಾಯವಾಗಿ ಪ್ರಾಧಿಕಾರದ ಮುಂದೆ ಪ್ರತಿಯೊಬ್ಬರೂ ನೋಂದಾಯಿಸಬೇಕು ಎಂದರು.
2024 ರ ಸಾಲಿನ ಜನವರಿಯಿಂದ ಡಿಸೆಂಬರ್ ಮಾಹೆಯವರೆಗೆ ಜನನ ಅಂಕಿ ಅಂಶದಲ್ಲಿ 14703 ಗಂಡು, 13847 ಹೆಣ್ಣು ಸೇರಿ 28550 ಜನನ ಪ್ರಕರಣಗಳಿವೆ. ಮರಣ ಪ್ರಕರಣಗಳಲ್ಲಿ ಇದೇ ಅವಧಿಯಲ್ಲಿ 9902 ಗಂಡು, 7361, ಹೆಣ್ಣು, 1 ತೃತೀಯ ಲಿಂಗÀ ಸೇರಿ 17264 ಮರಣ ಪ್ರಕರಣಗಳು ಜಿಲ್ಲೆಯಲ್ಲಿ ಜರುಗಿದೆ.
ಪ್ರಸಕ್ತ 2025 ರ ಸಾಲಿನ ಜನವರಿಯಿಂದ ಏಪ್ರಿಲ್ ವರೆಗೆ ಜನನ ಅಂಕಿ ಅಂಶದಲ್ಲಿ 4593 ಗಂಡು, 4439 ಹೆಣ್ಣು ಸೇರಿ 9032 ಜನನ ಪ್ರಕರಣಗಳಿವೆ. ಮರಣ ಪ್ರಕರಣಗಳಲ್ಲಿ ಇದೇ ಅವಧಿಯಲ್ಲಿ 3313 ಗಂಡು, 2599 ಹೆಣ್ಣು ಸೇರಿ 5912 ಮರಣ ಪ್ರಕರಣಗಳು ಜಿಲ್ಲೆಯಲ್ಲಿ ಜರುಗಿದೆ. ಜನನ ಹಾಗೂ ಮರಣಗಳ ಅಂಕಿ ಅಂಶಗಳನ್ನು ಇ-ಜನ್ಮ ತಂತ್ರಾಂಶದಲ್ಲಿ ನೋಂದಾಯಿಸಲಾಗಿದ್ದು ಗ್ರಾಮೀಣ ಪ್ರದೇಶದಲ್ಲಿ ಗ್ರಾಮಲೆಕ್ಕಿಗರು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಜನನ, ಮರಣ ನೊಂದಣಿ ಪ್ರಾಧಿಕಾರವಾಗಿದ್ದು ನಗರ, ಪಟ್ಟಣ ಪ್ರದೇಶದಲ್ಲಿ ಮುಖ್ಯಾಧಿಕಾರಿ, ಆಯುಕ್ತರು ಪ್ರಾಧಿಕಾರವಾಗಿರುತ್ತಾರೆ.
ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ 916 ನೊಂದಣಿ ಘಟಕಗಳು, ನಗರ ಪ್ರದೇಶದಲ್ಲಿ 20 ಸೇರಿದಂತೆ ಒಟ್ಟು 936 ನೊಂದಣಿ ಘಟಕಗಳಿರುತ್ತವೆ. ಜಿಲ್ಲಾ ಸಾಂಖ್ಯಿಕ ಅಧಿಕಾರಿ ನೀಲಾ, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ತೋಟಗಾರಿಕೆ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ, ಜಿಲ್ಲಾ ಸರ್ಜನ್ ಡಾ; ನಾಗೇಂದ್ರಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಿವರ
ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೆöÊಫಂಡ್ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.
ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದ್ದು, ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ : ದೂರು ದಾಖಲು

ಸುದ್ದಿದಿನ,ದಾವಣಗೆರೆ:ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ತೆರೆದುಕೊಂಡು ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ಗಜಾನನ ತಂದೆ ರಾಮಪೂಜಾರಪ್ಪ ಇವರು ತಮ್ಮ ಸ್ನೇಹಿತರೊಂದಿಗೆ ಪಡೆದುಕೊಂಡು ಪ್ರತಿ ತಿಂಗಳು ಶೇಕಡಾ 5 ರಷ್ಟು ಲಾಭಾಂಶವನ್ನು ಕೊಡುವುದಾಗಿ ಹೇಳಿ ಕೆಲವು ತಿಂಗಳು ಕೊಟ್ಟು ನಂತರದ ದಿನಗಳಲ್ಲಿ ಲಾಭಾಂಶವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಒಟ್ಟು ಸಾರ್ವಜನಿಕರಿಂದ 31.50,000/- ರೂಗಳನ್ನು ಕಟ್ಟಿಸಿಕೊಂಡು 61.62.800/- ರೂ ಲಾಭಾಂಶದ ಹಣವನ್ನು ಜಮಾ ಮಾಡಿದ್ದು ರೂ.37,33,500ಗಳನ್ನು 6 ತಿಂಗಳ ಲಾಭಾಂಶದ ಹಣವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಮೋಸ ಮಾಡಿರುತ್ತಾರೆ ಎಂದು ಹರೀಶ.ಕೆ ತಂದೆ ಉಮೇಶಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.
ಠೇವಣಿದಾರರು ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ ಹೋಗಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಾವಣಗೆರೆ ನಗರದ ಸಿಇಎನ್ ಪೊಲೀಸ್ ಠಾಣೆ, ಮೊದಲನೇ ಮಹಡಿ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ರವರ ಬಳಿ ಹೋಗಿ ಮಾಹಿತಿ ನೀಡಬೇಕು. ದೂ.ಸಂ:08192-225119 ನ್ನು ಸಂಪರ್ಕಿಸಲು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
