ದಿನದ ಸುದ್ದಿ
ಗದುಗಿನ ತೋಂಟದ ಸಿದ್ದಲಿಂಗ ಸ್ವಾಮೀಜಿಯ ಜನ್ಮ ದಿನ ಆಚರಣೆ ; ಶೀಘ್ರದಲ್ಲೇ ಆದೇಶ : ಸಿಎಂ ಬೊಮ್ಮಾಯಿ
ಸುದ್ದಿದಿನ, ಗದಗ : ಗದುಗಿನ ತೋಂಟದ ಸಿದ್ದಲಿಂಗ ಸ್ವಾಮೀಜಿಯ ಜನ್ಮ ದಿನವನ್ನು ಭಾವೈಕ್ಯ ದಿನವನ್ನಾಗಿ ಆಚರಿಸಲಾಗುವುದು. ಈ ಕುರಿತು ಶೀಘ್ರದಲ್ಲೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ತ್ರಿವಿಧ ದಾಸೋಹಿ ಡಾ.ತೋಂಟದ ಸಿದ್ದಲಿಂಗ ಸ್ವಾಮೀಜಿಯ ಐಕ್ಯಮಂಟಪ ಲೋಕಾರ್ಪಣೆಗೊಳಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ, ಸಾಮೂಹಿಕ ಸಮಾಜ ಕಟ್ಟಲು ಬಯಸಿದ್ದ ಸ್ವಾಮೀಜಿಯ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.
ಕೆರೆ ಕಟ್ಟೆಗಳ ನಿರ್ಮಾಣಕ್ಕಾಗಿ ಮಿಡಿಯುತ್ತಿದ್ದ ಡಾ.ತೋಂಟದ ಸಿದ್ದಲಿಂಗ ಸ್ವಾಮೀಜಿಯವರಿಂದ ಅನೇಕ ಕೆರೆ ತುಂಬಿಸುವ ಯೋಜನೆಗಳಾಗಿದ್ದು, ನಾಡು, ನುಡಿ, ಸಂಸ್ಕೃತಿ, ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243