ದಿನದ ಸುದ್ದಿ
ದಾವಣಗೆರೆ ಮಹಾನಗರ ಪಾಲಿಕೆ | ಬಿಜೆಪಿ ಸೇರಿದ ಕಾಂಗ್ರೆಸ್ ನ ಶ್ರೀನಿವಾಸ್ ಮತ್ತು ಶ್ವೇತ ಶ್ರೀನಿವಾಸ್ ದಂಪತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 27 ನೇ ವಾರ್ಡಿನ ಸದಸ್ಯರಾದ ಜೆ.ಎನ್.ಶ್ರೀನಿವಾಸ್ ಹಾಗೂ 37 ನೇ ವಾರ್ಡಿನ ಸದಸ್ಯೆ ಶ್ವೇತಾ ಶ್ರೀನಿವಾಸ್ ದಂಪತಿಗಳು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾದರು.
ನಗರದ ಶಾಮನೂರು ಜಯದೇವಪ್ಪ ಕಲ್ಯಾಣ ಮಂಟಪದಲ್ಲಿ “ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ದಾವಣಗೆರೆ ಜಿಲ್ಲಾ ಉಸ್ತವಾರಿ ಸಚಿವ ಭೈರತಿ ಬಸವರಾಜ, ಸಚಿವ ಆರ್ ಅಶೋಕ, ಹಾಗೂ ದಾವಣಗೆರೆ ಜಿಲ್ಲೆಯ ಸಂಸದ ಜಿ ಎಂ ಸಿದ್ದೇಶ್ವರ್ ಸಮ್ಮುಖದಲ್ಲಿ ಇವರಿಬ್ಬರು ಬಿಜೆಪಿಗೆ ಸೇರಿದರು.
ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಭೈರತಿ ಬಸವರಾಜ್, ಶಾಸಕರಾದ ಎಸ್.ಎ.ರವೀಂದ್ರನಾಥ್, ವಿಧಾನ ಪರಿಷತ್ ಸದಸ್ಯರಾದ ಎನ್. ರವಿ ಕುಮಾರ್, ಕೆ.ಎಸ್. ನವೀನ್, ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ, ಚುನಾಯಿತ ಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243