ರಾಜಕೀಯ
ರಾಜ್ಯದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ತರಲು ಪಕ್ಷದ ಮುಖಂಡರ ಪ್ರವಾಸ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿದಿನ, ಬೆಂಗಳೂರು : ಭಾರತೀಯ ಜನತಾ ಪಕ್ಷವನ್ನು ರಾಜ್ಯದಲ್ಲಿ ಪುನಃ ಅಧಿಕಾರಕ್ಕೆ ತರಲು ಪಕ್ಷದ ಮುಖಂಡರು ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಬೂತ್ ಮಟ್ಟದ ಹಾಗೂ ಜಿಲ್ಲಾ ಕಾರ್ಯಕರ್ತರ ಸಭೆಯನ್ನು ನಡೆಸಲಾಗುವುದು. ಎರಡು ದಿನ ಮೂರು ವಿಭಾಗಗಳಲ್ಲಿ 9 ಕಡೆ 2 ಸಭೆಗಳನ್ನು ಬಿಜೆಪಿ ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷದ ಮುಖಂಡರು ಪ್ರವಾಸ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243