ರಾಜಕೀಯ
ಬಿಜೆಪಿ ಸರ್ಕಾರ ವಿಫಲ ; ಜನರ ಸಮಸ್ಯೆಗಳ ಪರಿಹಾರಕ್ಕೆ ರಾಜ್ಯದ 100 ಕ್ಷೇತ್ರಗಳಲ್ಲಿ ಪ್ರವಾಸ : ಡಿ.ಕೆ.ಶಿವಕುಮಾರ್
ಸುದ್ದಿದಿನ,ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಾಗಿದೆ. ಪಕ್ಷದ ತತ್ವ, ಸಿದ್ಧಾಂತಗಳ ಅಡಿಯಲ್ಲಿ ಪಕ್ಷ ಸಂಘಟನೆ ಮಾಡಿದಾಗ ನಮಗೆ ಗೆಲುವು ನಿಶ್ಚಿತ. ಅಲ್ಲದೇ ಸಂಕಷ್ಟದಲ್ಲಿರುವ ಜನರ ಪರವಾಗಿ ನಾವು ಅವರ ಧ್ವನಿಯಾಗಿ ಹೋರಾಟ ನಡೆಸಬೇಕು. ಬಿಜೆಪಿ ಸರ್ಕಾರದ ವೈಫಲ್ಯಗಳು, ದುರಾಡಳಿತವನ್ನು ಜನರ ಮುಂದೆ ತೆರೆದಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದಾವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಕೋವಿಡ್ ಪರಿಸ್ಥಿತಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು ಜನರು ಸಾಕಷ್ಟು ನೊಂದಿದ್ದಾರೆ. ರೈತರು, ಕಾರ್ಮಿಕರು, ವ್ಯಾಪಾರಿಗಳು, ಉದ್ಯೋಗಿಗಳು ಸೇರಿ ಎಲ್ಲ ವರ್ಗದ ಜನರು ಕಷ್ಟದಲ್ಲಿದ್ದಾರೆ. ಅಂತವರಿಗೆ ಚೈತನ್ಯ ತುಂಬಬೇಕು, ಅವರ ಸಮಸ್ಯೆಗಳಿಗೆ ಪರಿಹಾರ ಹುಡಕಬೇಕು ಎಂದರು.
ಈ ಸಂಬಂಧ ರಾಜ್ಯದ 100 ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದೇನೆ. ಪ್ರತಿಪಕ್ಷ ನಾಯಕರೂ ಹಲವು ಕ್ಷೇತ್ರಗಳಲ್ಲಿ ನಮ್ಮೊಂದಿಗಿರಲಿದ್ದಾರೆ. ಉಳಿದಂತೆ ಅವರೂ ಕೂಡ ಹಲವು ಕ್ಷೇತ್ರಗಳ ಪ್ರವಾಸ ನಡೆಸಲಿದ್ದಾರೆ. ಶೀಘ್ರದಲ್ಲೇ ನಾನು ಕೋಲಾರ ಭಾಗದಲ್ಲಿ ಹಾಗೂ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಉಡುಪಿ, ಮಂಗಳೂರು ಪ್ರವಾಸ ಮಾಡಲಿದ್ದೇವೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ಸಂದೀಪ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ @srpatilbagalkot, ಕೆಪಿಸಿಸಿ ಕಾರ್ಯಾಧ್ಯಕ್ಷರಾದ @SaleemAhmadINC, @eshwar_khandre, ಮಾಜಿ ಸಚಿವರಾದ @HKPatil1953, @MBPatil, @dineshgrao, ಸಂಸದ @DKSureshINC, ವಿಧಾನ ಪರಿಷತ್ ಸದಸ್ಯ @HariprasadBK2 ಸೇರಿದಂತೆ ಹಲವು ನಾಯಕರ ಉಪಸ್ಥಿತಿ. pic.twitter.com/dUkRW4NODF
— D K Shivakumar, President, KPCC (@KPCCPresident) February 21, 2021
ಕೆಪಿಸಿಸಿ ಅಧ್ಯಕ್ಷ @DKShivakumar
ಅವರ ನೇತೃತ್ವದಲ್ಲಿ ನೂತನ ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವ @RLR_BTM ಹಾಗೂ ಮಾಜಿ ಸಂಸದ ಧೃವನಾರಾಯಣ್ ಅವರ ಜವಾಬ್ದಾರಿ ಸ್ವೀಕಾರ ಕಾರ್ಯಕ್ರಮ.ರಾಜ್ಯಸಭೆ ವಿರೋಧ ಪಕ್ಷದ ನಾಯಕ @kharge, ವಿಧಾನಸಭೆ ವಿಪಕ್ಷ ನಾಯಕ @siddaramaiah ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. pic.twitter.com/iAvpsFuLnD
— D K Shivakumar, President, KPCC (@KPCCPresident) February 21, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್
ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ನೂತನವಾಗಿ ನಿರ್ಮಾಣವಾಗಿರುವ ಸೋಲಾರ್ ಘಟಕದ ಕಾಮಗಾರಿ ಪರಿಶೀಲಿಸಿದ ಅವರು, ಜಿಲ್ಲೆಯ ಆರೂ ತಾಲೂಕುಗಳಲ್ಲಿ ಒಂಬತ್ತು ಸೋಲಾರ್ ಘಟಕಗಳು ಸ್ಥಾಪನೆಯಾಗಲಿದ್ದು ಇದರಿಂದ ಅರವತ್ತೆರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.
ಇಂಧನ ಇಲಾಖೆಯು ರಾಜ್ಯಾದ್ಯಂತ 154 ಸೋಲಾರ್ ಘಟಕಗಳನ್ನು ಸ್ಥಾಪಿಸಿ 1 ಸಾವಿರದ 81 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಸ್ವಾವಲಂಬನೆ ಸಾಧಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
ಇನ್ನೊಂದೆಡೆ ತುಮಕೂರಿನ ಸಿರಾ ತಾಲ್ಲೂಕಿನ ಚೆಂಗಾವರದಲ್ಲಿ ಪಿ.ಎಂ.ಕುಸುಮ್ ಯೋಜನೆಯಡಿ ನಿರ್ಮಿಸಿರುವ ಸೋಲಾರ್ ಪಾರ್ಕ್ ವೀಕ್ಷಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಸೋಲಾರ್ ಘಟಕಗಳನ್ನು ನಿರ್ಮಿಸಿ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ
ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.
ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243