ದಿನದ ಸುದ್ದಿ

ಬಿಜೆಪಿ ಸೋಲಿನ ಹೊಣೆ ಹೊತ್ತ ನಳೀನ್ ಕುಮಾರ್ ಕಟೀಲ್

Published

on

ಸುದ್ದಿದಿನ, ಬೆಂಗಳೂರು : ಬಿಜೆಪಿ ಸೋಲಿನ ಹೊಣೆಯನ್ನು ಹೊರುವುದಾಗಿ ಪಕ್ಷದ ರಾಜ್ಯಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ. ಬಿಜೆಪಿಗೆ ಹಿನ್ನಡೆಯಾಗಿದೆ ಎಂದರು.

ಈ ನಡುವೆ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೀಡಿರುವ ತೀರ್ಪನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಜನತೆಗೆ ಕೊಟ್ಟಿರುವ ಆಶ್ವಾಸನೆಗಳನ್ನು ಆದ್ಯತೆ ಮೇರೆಗೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version