ದಿನದ ಸುದ್ದಿ
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬರಲಿರುವ ಮಹಾಚುನಾವಣೆಗೆ ಪಕ್ಷದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿರುವ ನೂತನ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ರಾಜ್ಯ ನಾಯಕರು ಇಂದು ಬೆಳಿಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಮತ್ತು ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.
ಜನವಿರೋಧಿ ಕ್ರಮಗಳಿಂದಾಗಿ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸಲು ತನ್ನ 200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ನಡುವೆ ಲೋಕಸಭಾ ಚುನಾವಣೆ ಕುರಿತಂತೆ ದೆಹಲಿಯಲ್ಲಿ ಇಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ನಡೆಯಲಿದೆ.
ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಸಮಾಲೋಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಸಮಿತಿಯ ಸದಸ್ಯರು ಮತ್ತಿತರ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
"ವಿಕಸಿತ ಭಾರತಕ್ಕಾಗಿ
ಮತ್ತೊಮ್ಮೆ ಮೋದಿ ಸರ್ಕಾರ"ಮಲ್ಲೇಶ್ವರಂನ ಜಿ.ಎಂ. ರಿಜಾಯ್ಸ್ ಹೋಟೆಲ್ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಲಾಯಿತು. ರಾಜ್ಯದೆಲ್ಲೆಡೆ ಪ್ರಧಾನಿ ಮೋದಿ ಜೀ ಅವರ ಪರವಾದ ಅಲೆ ವ್ಯಾಪಕವಾಗಿದ್ದು 'ಮೋದಿ ಮತ್ತೊಮ್ಮೆ' ಎಂಬುದು ಜನಸಾಮಾನ್ಯರ ಸಂಕಲ್ಪವಾಗಿದೆ. ದೇಶದಲ್ಲಿ 400 ಹಾಗೂ… pic.twitter.com/gYbNmo1Poo
— Vijayendra Yediyurappa (Modi Ka Parivar) (@BYVijayendra) March 23, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243