ದಿನದ ಸುದ್ದಿ
ಉತ್ತರಾಖಂಡದ ನೂತನ ಸಿಎಂ ಆಗಿ ಬಿಜೆಪಿ ಸಂಸದ ತಿರಥ್ ಸಿಂಗ್ ರಾವತ್
ಸುದ್ದಿದಿನ,ಉತ್ತರಾಖಂಡ : ಬಿಜೆಪಿ ಸಂಸದ ತಿರಥ್ ಸಿಂಗ್ ರಾವತ್ ಉತ್ತರಾಖಂಡದ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತ್ರಿವೇಂದ್ರ ಸಿಂಗ್ ರಾವತ್ ಬುಧವಾರ ಡೆಹ್ರಾಡೂನ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಪ್ರಕಟಿಸಿದರು.
ಇದನ್ನೂ ಓದಿ | ನೂತನ ಖಾಸಗಿ ನೀತಿಗೆ ಒಪ್ಪದಿದ್ದರೆ ನಿಮ್ಮ ಮೊಬೈಲ್ ನಲ್ಲಿ ಮೇ. 15ರಿಂದ ವಾಟ್ಸಾಪ್ ಸೇವೆ ಬಂದ್..!
ತ್ರಿವೇಂದ್ರ ಸಿಂಗ್ ರಾವತ್ ಅವರು ನಿನ್ನೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಉತ್ತರಾಖಂಡದ ಮಾಜಿ ಬಿಜೆಪಿ ಮುಖ್ಯಸ್ಥರಾದ ತಿರಥ್ ಸಿಂಗ್ ರಾವತ್ ಅವರು ಕಣಿವೆ ರಾಜ್ಯದ ಮೊದಲ ಸರ್ಕಾರದಲ್ಲಿ 2000-02ರವರೆಗೆ ಶಿಕ್ಷಣ ಸಚಿವರಾಗಿದ್ದರು. ಅವರು ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243