ರಾಜಕೀಯ

ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ : ಬಿಎಸ್‌ವೈ

Published

on

ಸುದ್ದಿದಿನ, ಬೆಂಗಳೂರು : ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ರೈತ ಮಹಿಳೆ ಅವಹೇಳನಕಾರಿ ಹೇಳಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ‌ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ತಾಲೂಕು ಘಟಕಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಇಂದು ಸಂಜೆ ಕೋರ್ ಕಮಿಟಿ ಸಭೆ ನಡೆಸ್ತೇವೆ.ಬೆಳಗಾವಿ ಅಧಿವೇಶನದಲ್ಲಿ ಒಳಗೆ, ಹೊರಗೆ ರೈತರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುತ್ತೇವೆ ಎಂದು ಬಿಎಸ್‌ವೈ ಹೇಳಿದ್ದಾರೆ.

ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ 200 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ‌ಮಾಡ್ಕೊಂಡಿದ್ದಾರೆ.ಮಾತೆತ್ತಿದ್ರೇ ಸಾಲ ಮನ್ನ ಸಾಲ ಮನ್ನ ಅಂತೀರಾ,ಎಷ್ಟು ಸಾಲ ಮನ್ನ ಮಾಡಿದ್ದೀರಾ? ಇದರಿಂದ ಸಹಕಾರ ಕ್ಷೇತ್ರ ದಿವಾಳಿಯಾಗಿದೆ ಎಂದು ಅವರು ಕೆಂಡಾ ಮಂಡಲವಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version