Connect with us

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸಮಾವೇಶ ; ಲಕ್ಷಾಂತರ ಜನ ಬರುವ ನಿರೀಕ್ಷದ ಸಚಿವ ಡಾ.ಕೆ.ಸುಧಾಕರ್‌

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದೊಡ್ಡಬಳ್ಳಾಪುರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಪ್ರಯುಕ್ತ ದೊಡ್ಡಬಳ್ಳಾಪುರದಲ್ಲಿ ಸಮಾವೇಶ ನಡೆಯಲಿದೆ. ಮೂರು-ನಾಲ್ಕು ಜಿಲ್ಲೆಗಳಿಂದ ಲಕ್ಷಾಂತರ ಜನರು ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ದೊಡ್ಡಬಳ್ಳಾಪುರದ ಬಿಜೆಪಿ ಕಚೇರಿಯಲ್ಲಿ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಬಿಜೆಪಿ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಾ ಬಂದಿದೆ. ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಜುಲೈ 28 ಕ್ಕೆ ಒಂದು ವರ್ಷವಾಗಲಿದೆ. ಈ ಪ್ರಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರ ವಲಯದಲ್ಲಿ ಸಮಾವೇಶ ನಡೆಸಲು ಸ್ಥಳ ನಿಗದಿ ಮಾಡಲಾಗಿದೆ.

‘ಬಿಜೆಪಿಯು ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತ ನೀಡುತ್ತಿದೆ ಎಂಬುದನ್ನು ಸಾಬೀತು ಮಾಡಿದೆ.”ಯುವಜನರು, ಮಹಿಳೆಯರು, ರೈತರು ಸೇರಿದಂತೆ ಪ್ರತಿ ಜನವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಎಷ್ಟೇ ಆರ್ಥಿಕ ದುಃಸ್ಥಿತಿ ಇದ್ದರೂ ಕೋವಿಡ್‌ ಸಾಂಕ್ರಾಮಿಕವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಶಸ್ವಿಯಾಗಿ ನಿರ್ವಹಣೆ ಮಾಡಿದೆ.

ಕೋವಿಡ್‌ನಿಂದಾದ ಸಮಸ್ಯೆಗಳನ್ನು ನಿವಾರಿಸಿ ಇಡೀ ವ್ಯವಸ್ಥೆಯನ್ನು ಪುನಶ್ಚೇತನ ಮಾಡಲಾಗುತ್ತಿದೆ. ಪಕ್ಕದ ಶ್ರೀಲಂಕಾ ಲಾಕ್‌ಡೌನ್‌ ಬಳಿಕ ದಿವಾಳಿಯಾಗಿದೆ. ಆದರೆ ಅಮೆರಿಕ ಬಳಿಕ ಅತ್ಯಂತ ವೇಗದ ಆರ್ಥಿಕ ಪ್ರಗತಿ ಕಾಣುತ್ತಿರುವ ದೇಶಗಳಲ್ಲಿ ಭಾರತ ಒಂದಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕಾರಣ. ಹಾಗೆಯೇ ರಾಜ್ಯದ ಆರ್ಥಿಕ ಪ್ರಗತಿಗೆ ಹಿಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮರ್ಥ ಆಡಳಿತ ಕಾರಣ ಎಂದರು.

ಈ ಭಾಗದಲ್ಲಿ ಬಿಜೆಪಿ ಶಾಸಕರು ಅತಿ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಆದರೂ ಜನರ ಭಾವನೆಗೆ ಪೂರಕವಾಗಿ ಇಲ್ಲಿ ಸಮಾವೇಶ ನಡೆಸಲು ಅವಕಾಶ ದೊರೆತಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ, ಹುಮ್ಮಸ್ಸಿನಲ್ಲಿ ಪಾಲ್ಗೊಂಡು ಸರ್ಕಾರದೊಂದಿಗೆ ಹಾಗೂ ಪಕ್ಷದೊಂದಿಗೆ ನಾವಿದ್ದೇವೆ ಎಂದು ತೋರಿಸಿಕೊಡಲಿದ್ದಾರೆ. ಜನರು ಬಿಜೆಪಿ ಮೇಲೆ ಹೇಗೆ ವಿಶ್ವಾಸ ಇರಿಸಿದ್ದಾರೆ ಎಂಬುದು ಸಾಕ್ಷಿ ಸಮೇತ ಸಾಬೀತಾಗಲಿದೆ ಎಂದರು.

ಮಂಕಿ ಪಾಕ್ಸ್‌ ಕಂಡುಬಂದಿಲ್ಲ

ರಾಜ್ಯದಲ್ಲಿ ಮಂಕಿ ಪಾಕ್ಸ್‌ ಪ್ರಕರಣ ಕಂಡುಬಂದಿಲ್ಲ. ಈ ಕುರಿತು ವಿಮಾನ ನಿಲ್ದಾಣ, ಬಂದರುಗಳಲ್ಲಿ ಕಟ್ಟೆಚ್ಚರ ವಹಿಸಿದ್ದು, ಮಾರ್ಗಸೂಚಿ ಪಾಲಿಸಲಾಗುತ್ತಿದೆ. ಇದಕ್ಕೆ ಬೇಕಾದ ಚಿಕಿತ್ಸೆಗೆ ಸಿದ್ಧತೆ ಕೂಡ ಮಾಡಿಕೊಳ್ಳಲಾಗಿದೆ. ರಾಜ್ಯದೊಳಗೆ ಈ ಸೋಂಕು ನುಸುಳದಂತೆ ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಜಯದೇವ ಹೃದ್ರೋಗ ಸಂಸ್ಥೆ ಹಾಗೂ ನೆಫ್ರೋ ಯುರಾಲಜಿ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಸ್ಥರಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ಕಡತವನ್ನು ಅವರಿಗೆ ಕಳುಹಿಸಿಕೊಡಲಾಗಿದೆ. ನಿರ್ದೇಶಕರ ಅವಧಿ ಮುಂದುವರಿಕೆ ಕುರಿತು ಮುಖ್ಯಮಂತ್ರಿಗಳೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚನ್ನಗಿರಿ | ಕೊರಟಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ | ಪಿ.ಡಿ.ಓ ಶಿವಕುಮಾರ, ಇ.ಒ ಪ್ರಕಾಶ್ ವಿರುದ್ಧ ಲೋಕಾಗೆ ದೂರು

Published

on

ದಾವಣಗೆರೆ, ಸುದ್ದಿದಿನ; ದಾವಣಗೆರೆ ಜಿಲ್ಲಾ ಚನ್ನಗಿರಿ ತಾಲ್ಲೂಕು ಕೊರಟಿಕೆರೆ ಗ್ರಾಮ ಪಂಚಾಯಿತಿಗೆ 15ನೇ ಹಣಕಾಸಿನ ಯೋಜನೆಯ ಅಡಿಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ನಡೆದಿರುವ ಕಾಮಗಾರಿ ಮತ್ತು ಖರೀದಿಯಲ್ಲಿನ ಅವ್ಯವಹಾರವನ್ನು ಸೂಕ್ತ ತನಿಖೆಗೆ ಒಳಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಕಾಲಾವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಎಂ.ಆರ್ ಹಾಗೂ ಅವ್ಯವಹಾರದಲ್ಲಿ ಭಾಗಿಯಾಗಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜಿ ಶಿವಕುಮಾರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಕೊರಟಿಕೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯ ಇಲ್ಲಿಗೆ 15ನೇ ಹಣಕಾಸು ಯೋಜನೆಯ ಅಡಿಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ಮಾಹಿತಿಯ ಮೇರೆಗೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯಾಲಯ, ಕೊರಟಿಕೆರೆ ಚನ್ನಗಿರಿ ತಾಲ್ಲೂಕು ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಲಾಗಿದ್ದು, ಅರ್ಜಿದಾರರು ಹಣ ಪಾವತಿಸಿದರೂ ನಿಗಧಿತ ಕಾಲಾವಧಿಯಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿ ಮಾಹಿತಿ ನೀಡದ ಕಾರಣ ಇ-ಗ್ರಾಮ ಸ್ವರಾಜ್ ಮೂಲಕ ಮಾಹಿತಿ ಪಡೆದು ದಿನಾಂಕ: 03-10-2026 ರಂದು ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚನ್ನಗಿರಿ ಇವರಿಗೆ ದೂರು ನೀಡಿ ಇಲಾಖಾ ತನಿಖೆಗೆ ಒಳಪಡಿಸುವಂತೆ ಕೋರಲಾಗಿತ್ತು. ನಿಗಧಿತ ಕಾಲಾವಧಿ ಮುಕ್ತಾಯವಾದರೂ ಯಾವುದೇ ತನಿಖೆ ನಡೆಸದ ಕಾರಣ ಲೋಕಾಯುಕ್ತಗೆ ದೂರು ನೀಡಿ, ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ನೀತಿ ಸಂಹಿತೆ ಉಲ್ಲಘನೆ, ಬೋಧನೆ ಶೂನ್ಯ ; ಚಳ್ಳಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಲೇಪಾಕ್ಷ ವಿರುದ್ಧ ದೂರು

Published

on

ದಾವಣಗೆರೆ,ಸುದ್ದಿದಿನ: ಪ್ರಥಮ ದರ್ಜೆ ಕಾಲೇಜು, ಚಳ್ಳಕೆರೆ ಇಲ್ಲಿನ ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಲೇಪಾಕ್ಷ ಎಸ್.ಆರ್ ಇವರು ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಹಾಜರಾಗದೆ ಇರುವುದು ಮಾತ್ರವಲ್ಲದೆ ವೇಳಾಪಟ್ಟಿಯಂತೆ ಇವರಿಗೆ ನಿಗಧಿಪಡಿಸಿದ ಯಾವುದೇ ತರಗತಿಗಳನ್ನು ತೆಗೆದುಕೊಳ್ಳದೆ ರಾಜಕೀಯ ಪಕ್ಷವೊಂದರ ಪ್ರಚಾರ ಹಾಗೂ ಸ್ಥಳೀಯ ರಾಜಕಾರಣದಲ್ಲಿ ಸಕ್ರಿಯವಾಗಿ ವಿದ್ಯಾರ್ಥಿಗಳಿಗೆ ವಂಚಿಸುತ್ತಿರುವ ನಡೆಯನ್ನು ಸೂಕ್ತ ತನಿಖೆಗೆ ಒಳಪಡಿಸಿ, ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಜಂಟಿ ನಿರ್ದೇಶಕರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.

ಡಾ. ಲೇಪಾಕ್ಷ ಎಸ್.ಆರ್ ಇವರನ್ನು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ತರಗತಿಗಳನ್ನು ಹಂಚಿಕೆ ಮಾಡಿದ್ದು, ಯಾವುದೇ ತರಗತಿಗಳನ್ನು ತೆಗೆದುಕೊಳ್ಳದ ಮಾಹಿತಿಯ ಮೇರೆಗೆ ಕಾಲೇಜಿನಲ್ಲಿ ಅಳವಡಿಸಿದ ಸಿ.ಸಿ.ಟಿ.ವಿ ಹಾಗೂ ಬಯೋಮೆಟ್ರಿಕ್ ಹಾಜರಾತಿಯನ್ನು ನೀಡುವಂತೆ ಮಾಹಿತಿ ಕೋರಿದ್ದು, ಕಾಲೇಜಿನ ಪ್ರಾಂಶುಪಾಲರು ಕಾಲೇಜಿಗೆ ಸರಿಯಾಗಿ ಹಾಜರಾಗದ ಮತ್ತು ಬೋದನೆ ಮಾಡದ ಅಧ್ಯಾಪಕರನ್ನು ರಕ್ಷಿಸುವ ಸಲುವಾಗಿ ನಿಯಮಬಾಹಿರವಾಗಿ ಹಿಂಬರಹ ನೀಡಿರುತ್ತಾರೆ. ಈ ಎಲ್ಲಾ ಅಂಶಗಳನ್ನು ಉಲ್ಲೇಖಿಸಿ, ಲೇಪಾಕ್ಷ ಇವರು ರಾಜಕೀಯ ಪಕ್ಷದ ಪ್ರಚಾರ ಮತ್ತು ಸಂಭ್ರಮದಲ್ಲಿ ಭಾಗಿಯಾಗಿರುವ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ದಾಖಲೆಗಳನ್ನು ಲಗತ್ತಿಸಿ ಸೂಕ್ತ ತನಿಖೆ ನಡೆಸಿ, ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಚಿವರಿಗೆ ದೂರು ನೀಡಿರುತ್ತಾರೆ.

Continue Reading

ದಿನದ ಸುದ್ದಿ

ಮಂಗಳೂರು | ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಕೆ.ಆರ್ ಕವಿತಾ ವಿರುದ್ಧ ಲೋಕಾಗೆ ದೂರು

Published

on

ಮಂಗಳೂರು | ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಕೆ.ಆರ್ ಕವಿತಾ ವಿರುದ್ಧ ಲೋಕಾಗೆ ದೂರು:

ದಾವಣಗೆರೆ, ಸುದ್ದಿದಿನ; ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಜಂಟಿ ನಿರ್ದೇಶಕರ ಕಛೇರಿ, ಮಂಗಳೂರು ಇಲ್ಲಿನ ಕಛೇರಿ ನಿರ್ವಹಣೆಗೆ 2024-25 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಂಟಿ ನಿರ್ದೇಶಕರಾದ ಶ್ರೀಮತಿ ಕೆ.ಆರ್.ಕವಿತಾ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಜಂಟಿ ನಿರ್ದೇಶಕರ ಕಛೇರಿ, ಮಂಗಳೂರು ಇಲ್ಲಿಗೆ 2024-25 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಕಛೇರಿಯ ನಿರ್ವಹಣೆಯ ಅನುದಾನದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಕೆ.ಟಿ.ಪಿ.ಪಿ ನಿಯಮವನ್ನು ಉಲ್ಲಂಘಿಸಿ ನಡೆದಿರುವ ಕಾನೂನುಬಾಹಿರ ಚಟುವಟಿಕೆಗಳ ಅಧಿಕೃತ ಮಾಹಿತಿಯ ಮೇರೆಗೆ 2024-25 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಕಛೇರಿ ನಿರ್ವಹಣೆಗಾಗಿ ಸರ್ಕಾರದಿಂದ ಮಂಜೂರಾದ ಅನುದಾನದ ಖರ್ಚು ವೆಚ್ಚದ ದಾಖಲೆಗಳನ್ನು ಮಾಹಿತಿಹಕ್ಕು ಅಡಿ ಪಡೆದು ಪರಿಶೀಲನೆ ಮಾಡಿದಾಗ ಸಾಕಷ್ಟು ಲೋಪಗಳು ಕಂಡುಬಂದಿರುತ್ತವೆ. ಆದ ಕಾರಣ ಲೋಕಾಯುಕ್ತದಲ್ಲಿ ಜಂಟಿ ನಿರ್ದೇಶಕರಾದ ಕೆ.ಆರ್.ಕವಿತಾ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.

Continue Reading

Trending