ದಿನದ ಸುದ್ದಿ
ರೈತರ ಬಗ್ಗೆ ಬಿಜೆಪಿಯವರು ಮೊಸಳೆ ಕಣ್ಣೀರು ಹಾಕೋದು ಬೇಡ : ಜಿ.ಪರಮೇಶ್ವರ್

ಸುದ್ದಿದಿನ,ತುಮಕೂರು : ಕೇಂದ್ರ ಸರ್ಕಾರ ನಿಗದಿಪಡಿಸೋ ಎಫ್.ಆರ್.ಪಿ ಬೆಲೆ ಏರುಪೇರಾಗುತ್ತೆ.ಅದರ ಮೇಲೆ ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬಿನಬೆಲೆ ನಿಗದಿಪಡಿಸುತ್ತಾರೆ.ಕೆಲವು ಸಂದರ್ಭ ಎಫ್.ಆರ್.ಪಿ ಬೆಲೆಗಿಂತಾ ಹೆಚ್ಚು ಸಿಗುತ್ತೆ, ಕಡಿಮೆಯೂ ಸಿಗುತ್ತೆ. ಕಾರ್ಖಾನೆಗಳು ರೈತರೊಂದಿಗೆ ಮಾಡಿಕೊಂಡ ಒಪ್ಪಂದಗಳಂತೆ ನಡೆದುಕೊಳೋದಿಲ್ಲ. ರೈತರಿಗೆ ಸಹಾಯ ಮಾಡೋಕೆ ಅಂತಾ ಕಾರ್ಖಾನೆಗಳಿಗೆ ಸರ್ಕಾರ ಹಣ ನೀಡಿದೆ ಎಂದು ಕಬ್ಬು ಬೆಳೆಗಾರರ ಪ್ರತಿಭಟನೆ ವಿಚಾರವಾಗಿ ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಕಳೆದ ಬಾರಿ ಸಿದ್ದರಾಮಯ್ಯ ಅವ್ರು 450 ರೂಪಾಯಿ ಬೆಂಬಲ ನೀಡಿದ್ದಾರೆ. 2017-18 ನಡೆದ ಒಪ್ಪಂದದ ಹಣ ಕೊಟಿಲ್ಲ ಅಂತಾ ರೈತರು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ ಈಗಾಗಲೇ ರೈತರೊಂದಿಗೆ, ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿದೆ. ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಅಂತಿಮವಾಗಿ ತೀರ್ಮಾನಿಸಲಾಗುವುದು.ಕೇಂದ್ರ ಸರ್ಕಾರ ದರ ನಿಗದಿಪಡಿಸೋದ್ರಿಂದ ಅವರು ಸ್ಪಂದಿಸಬೇಕಿದೆ ಎಂದು ಹೇಳಿದ್ದಾರೆ.
ಬಿಜೆಪಿಗೆ ರೈತರ ಬಗ್ಗೆ ಮಾತನಾಡೋ ಯಾವುದೇ ನೈತಿಕತೆ ಇಲ್ಲ. ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕೋದು ಬೇಡ. ರಾಜ್ಯದ ರೈತರ ಸಮಸ್ಯೆ ಅಂತಾ ಕೇಂದ್ರಕ್ಕೆ ಹೋದಾಗ ಯಾವುದೇ ರೀತಿ ಸ್ಪಂಧಿಸಿಲ್ಲ. ರಾಜಕೀಯಕ್ಕಾಗಿ ರೈತರ ಪರವಾಗಿ ಮಾತಾಡ್ತಾರೆ ಡಾ.ಜಿ.ಪರಮೇಶ್ವರ್ ಗುಡುಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ