ದಿನದ ಸುದ್ದಿ

ಬಿಜೆಪಿಗೆ ಕುಮಾರಸ್ವಾಮಿ ಟಾರ್ಗೆಟ್ ಅಂತೆ; ದೇವೇಗೌಡರ ಆರೋಪ

Published

on

ಸುದ್ದಿದಿನ ಡೆಸ್ಕ್:  ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಮುಖಂಡರು ಲೋಕಸಭಾ ಚುನಾವಣೆಗೂ ಮೊದಲು ರಾಜ್ಯದ ಸಮ್ಮಿಶ್ರ ಸರ್ಕಾರ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜಕೀಯ ದುರುದ್ದೇಶದಿಂದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಪಕ್ಷದ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಮುಖಂಡರು ಇರುವವರೆಗೂ ಕುಮಾರಸ್ವಾಮಿ ಸೇಫಾಗಿರುತ್ತಾರೆ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಜೆಡಿಎಸ್- ಕಾಂಗ್ರೆಸ್ ಪರಸ್ಪರ ಪ್ರೋತ್ಸಾಹ, ಸಹಕಾರ ನೀಡಲಿವೆ. ಯಾರೂ ಈ ಸರ್ಕಾರವನ್ನು ಅಳ್ಳಾಡಿಸಲು ಆಗುವುದಿಲ್ಲ. ಐದು ವರ್ಷಗಳ ಅಧಿಕಾರ ಪೂರ್ಣಗೊಳಿಸಲಿದೆ.

ದೇವೇಗೌಡರು ತಮ್ಮ ಪುತ್ರ ಕುಮಾರಸ್ವಾಮಿ ರಾಷ್ಟ್ರ ರಾಜಕಾರಣ ಪ್ರವೇಶ ಮಾಡುವ ಬಗ್ಗೆ ಸುಳಿವು ನೀಡಿದ್ದು, ರಾಜ್ಯದಲ್ಲಿ ಸಮ್ಮಿಶ್ರ ಸರಕಾರದ ಐದು ವರ್ಷಗಳ ಪೂರ್ಣಾವಧಿ ಮುಗಿದ ನಂತರ  ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಲಿದ್ದಾರೆ ಎಂದು ಭವಿಷ್ಯ ನುಡಿದ್ದಾರೆ.

ತಾವು ಮುಂಬರುವ ಲೋಕಸಭಾ ಎಲೆಕ್ಷನ್ ಸ್ಪರ್ಧಿಸುವುದಿಲ್ಲ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿರುವ ದೇವೇಗೌಡರು, ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಏಕಾಂಗಿ ಎದುರಿಸಲಿದೆ. ಲೋಕಸಭಾ ಚುನಾವಣೆಯಲ್ಲಿ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version