ರಾಜಕೀಯ
ಬಾದಾಮಿಯಲ್ಲಿ ಸ್ಪರ್ಧಿಸಿ, ಅಲ್ಪಮತದಲ್ಲಿ ಗೆದ್ದು ಸಿದ್ದರಾಮಯ್ಯ ಮರ್ಯಾದೆ ಉಳಿಸಿಕೊಂಡಿದ್ದಾರೆ : ಬಿ.ಎಸ್.ವೈ ವ್ಯಂಗ್ಯ
ಸುದ್ದಿದಿನ ಡೆಸ್ಕ್ : ಮದ್ದೂರು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರವರಿಂದ ಬಾರಿ ಬಹಿರಂಗ ಪ್ರಚಾರಕ್ಕೆ ಚಾಲನೆ ನೀಡಿದರು. ಪಟ್ಟಣದ ನಗರಕೆರೆ ವೃತ್ತದ ಬಳಿ ಬಿಜೆಪಿ ಭಾರಿ ಬಹಿರಂಗ ಸಭೆಯನ್ನುದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾತನಾಡಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರಕಾರ
ಅಧಿಕಾರಕ್ಕೆ ಬಂದ ದಿನದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳೇ ಕುಂಠಿತಗೊಳ್ಳುತ್ತಿವೆ ರೈತರ ಆತ್ಮಹತ್ಯೆಗಳು ಹೆಚ್ಚಳವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆರೋಪಿಸಿದರು ಜಿಲ್ಲೆಯ ಜನ ಬದಲಾವಣೆ ಬಯಸುತ್ತಿದ್ದು ನರೇಂದ್ರ ಮೋದಿಯವರ ನಾಲ್ಕುವರೆ ವರ್ಷಗಳ ಉತ್ತಮ ಆಡಳಿತವನ್ನು ಕಂಡು ಬಿಜೆಪಿ ಪಕ್ಷವನ್ನು ಜಿಲ್ಲೆಯ ಜನ ಬೆಂಬಲಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಭಾವ ಗೊಳಿಸಿರುವ ಶನಿ ರಾಹು ಕೇತು ಒಂದಾಗಿದ್ದು ಬಾದಾಮಿಯಲ್ಲಿ ಸ್ಪರ್ಧಿಸಿ ಸ್ವಲ್ಪ ಅಂತರದಿಂದ ಗೆದ್ದು ತಮ್ಮ ಮರ್ಯಾದೆ ಉಳಿಸಿಕೊಂಡಿದ್ದಾರೆಂದು ದೂರಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಎಲ್ಲ ಮುಖಂಡರು ಪಕ್ಷದ ಅಭ್ಯರ್ಥಿ ಶಿವರಾಮೇಗೌಡ ಪರ ಮತಯಾಚನೆ ಮಾಡುತ್ತಿಲ್ಲವೆಂದು ತಿಳಿಸಿದರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡು ಆರು ತಿಂಗಳು ಕಳೆದರೂ ರೈತರ ಸಾಲ ಮನ್ನಾ ಮಾಡದೆ ಹಾಗೂ ಅಭಿವೃದ್ಧಿಯ ಕೈಗೊಳ್ಳದೇ ಜನರನ್ನು ವಂಚಿಸುತ್ತಿದ್ದಾರೆಂದು ಆರೋಪಿಸಿದರು.
ಚುನಾವಣೆಯನ್ನು ಹಣಬಲದಿಂದ ಜಾತಿ ವಿಷ ಬೀಜ ಬಿತ್ತುವ ಮೂಲಕ ಚುನಾವಣೆ ಗೆಲ್ಲಬಹುದೆಂದು ಹಗಲು ಕನಸು ಕಾಣುತ್ತಿರುವ ಸಮ್ಮಿಶ್ರ ಸರ್ಕಾರದ ಮುಖಂಡರಿಗೆ ಜಿಲ್ಲೆಯ ಜನರೇ ತಕ್ಕ ಬುದ್ಧಿ ಕಲಿಸಲಿದ್ದಾರೆ ಎಂದು ತಿಳಿಸಿದರು ತಮ್ಮ ಅಧಿಕಾರದ ಅವಧಿಯಲ್ಲಿ ಯಾವುದೇ ಜಾತಿ ಭೇದ ಮರೆತು ಎಲ್ಲಾ ಜನಾಂಗದವರಿಗೂ ಸಾವಿರಾರು ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಮೈಷುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನ ಹಜ್ ಭವನ ಭಾಗ್ಯಲಕ್ಷ್ಮಿ ಯೋಜನೆ ವಾಲ್ಮೀಕಿ ಭವನ ಸೇರಿದಂತೆ ಜಿಲ್ಲೆಗೆ ಸಾವಿರಾರು ಕೋಟಿ ರು ಅನುದಾನ ಬಿಡುಗಡೆಗೊಳಿಸಿರುವುದಾಗಿ ತಿಳಿಸಿದರು ಇತ್ತಿಚೆಗೆ ನಡೆದ ಸರ್ವೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲ್ಲಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ಆದ್ದರಿಂದ ಈ ಬಾರಿ ಡಾ, ಸಿದ್ದರಾಮಯ್ಯ ರವರನ್ನು ಅತೀ ಹೆಚ್ಚಿನ ಮತಗಳನ್ನು ಕೊಟ್ಟು ಲೋಕಸಭೆಗೆ ಕಳುಹಿಸಿ ಕೊಡುವ ಮೂಲಕ ನರೇಂದ್ರ ಮೋದಿ ಯವರ ಕೈ ಬಲ ಪಡಿಸ ಬೇಕೆಂದು ವಿನಂತಿಸಿ ಕೊಂಡರು.
ಸಭೆಯಲ್ಲಿ ಡಿ.ಎಸ್. ವೀರಯ್ಯ ,ಸಿ.ಟಿ.ರವಿ, ಅಶ್ವಥ್ ನಾರಾಯಣ,ಆರ್.ಅಶೋಕ್, ರಾಜ್ಯ ಎಸ್.ಸಿ.ಮೋರ್ಚಾ ಸಂ.ಕಾ.ಆತ್ಮಾನಂದ , ಕೆಂಪ ಬೋರಯ್ಯ, ರವಿಕುಮಾರ್ , ಅರವಿಂದ್, ಹಾಗೂ ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾ|ವಾಟ್ಸಾಪ್|9986715401

ದಿನದ ಸುದ್ದಿ
ಸಿದ್ದು , ಡಿಕೆ ಪ್ರಮಾಣ ವಚನ ; ಗಣ್ಯಾತಿಗಣ್ಯರ ಉಪಸ್ಥಿತಿ

ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಇಂದು ಅಸ್ತಿತ್ವಕ್ಕೆ ಬರಲಿದೆ. ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ನ ಹಿರಿಯ ಮುಖಂಡ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇವರೊಂದಿಗೆ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲು ವೇದಿಕೆ ಸಿದ್ಧವಾಗಿದೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12:30ಕ್ಕೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.
ಈ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಸಿದ್ಧತೆಗಳು ಭರದಿಂದ ಸಾಗಿವೆ. ಸಮಾರಂಭಕ್ಕೆ ರಾಜ್ಯದ ಮೂಲೆ – ಮೂಲೆಗಳಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಆಗಮಿಸಲಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಭದ್ರತಾ ಕಾರ್ಯಕ್ಕಾಗಿ ಒಂದು ಸಾವಿರದ 500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಪಶ್ಚಿಮ ಬಂಗಾಳದ ಟಿಎಂಸಿ ಉಪನಾಯಕ ಡಾ.ಕಕೋಲಿ ಘೋಷ್ ದಸ್ತಿದಾರ್, ಬಿಹಾರದ ಮುಖ್ಯಮಂತ್ರಿ ನಿತಿಶ್ ಕುಮಾರ್, ನ್ಯಾಷನಲ್ ಕಾನ್ಪರೆನ್ಸ್ ಪಕ್ಷದ ಅಧ್ಯಕ್ಷ ಫಾರುಕ್ ಅಬ್ದುಲ್ಲಾ, ಸಿಪಿಐಎಂ ಮುಖಂಡ ಸೀತಾರಾಮ್ ಯಚೂರಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನಿಸಿದ್ದಾರೆ.
ಛತ್ತೀಸ್ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವೀರ್ ಸಿಂಗ್ ಸುಖು ಅವರನ್ನೂ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.
ಈ ನಡುವೆ, ನೂತನ ಸಚಿವ ಸಂಪುಟ ಸೇರ್ಪಡೆಗೆ ಕಾಂಗ್ರೆಸ್ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಸಂಭಾವ್ಯ ಸಚಿವರ ಪಟ್ಟಿಗೆ ಕಾಂಗ್ರೆಸ್ ವರಿಷ್ಠರಿಂದ ಅನುಮೋದನೆ ಪಡೆಯಲು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಿದ್ದರಾಮಯ್ಯ ಗೆ ಸಿಎಂ ಪಟ್ಟ ; ಡಿಕೆಶಿ ಡಿಸಿಎಂ

ಸುದ್ದಿದಿನ, ದೆಹಲಿ : ಕಾಂಗ್ರೆಸ್ ವರಿಷ್ಠರ ಜತೆಗೆಗಿನ ಹಲವು ಸುತ್ತಿನ ಮಾತುಕತೆಯ ಮೂಲಕ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ.
ಮೇ 20ರಂದು ಮಧ್ಯಾಹ್ನ12:30ಕ್ಕೆ ಬೆಂಗಳೂರಿನಲ್ಲಿ ನೂತನ ಸಿಎಂ ಮತ್ತು ಡಿಸಿಎಂಗಳ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.ಕಾಂಗ್ರೆಸ್ ನ ರಾಜ್ ದೀಪ್ ಸರ್ ದೇಸಾಯಿ ಟ್ವೀಟ್ ಮೂಲಕ ತಿಳಿಸಿದ್ದು, ಎಸಿಸಿ ಮಲ್ಲಿಕಾರ್ಜುನ ಖರ್ಗೆ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದಿದ್ದಾರೆ.
Finally it’s done: BIG BREAKING: @siddaramaiah CM, @DKShivakumar deputy CM. Swearing in 12.30 on 20th in Bengaluru: this after @kharge burns the midnight oil in a late night formula to achieve the breakthrough between the two . @IndiaToday
— Rajdeep Sardesai (@sardesairajdeep) May 17, 2023
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ; ನವಿಲೇಹಾಳಿನಲ್ಲಿ 30 ಅಡಿ ಎತ್ತರದ ಸಿದ್ದರಾಮಯ್ಯ ಫ್ಲೆಕ್ಸ್ ಹಾಕಿ ಸಂಭ್ರಮ

ಸುದ್ದಿದಿನ, ದಾವಣಗೆರೆ : ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆಯುವುದರ ಮೂಲಕ ಸ್ಪಷ್ಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಚನ್ನಗಿರಿ ತಾಲೂಕಿನ ನವಿಲೇಹಾಳು ಗ್ರಾಮದಲ್ಲಿ ಮೂವತ್ತು ಅಡಿಯ ಸಿದ್ದರಾಮಯ್ಯ ಅವರ ಫ್ಲೆಕ್ಸ್ ಹಾಕುವುದರ ಮೂಲಕ ಅಭಿಮಾನಿಗಳು ಸಂಭ್ರಮಿಸಿದರು.
ಮಾಯಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್. ಬಸವಂತಪ್ಪ ಅವರು 70346 ಮತಗಳನ್ನು ಪಡೆದು ಭರ್ಜರಿ ಜಯಭೇರಿ ಭಾರಿಸಿದ ಸಂದರ್ಭ ಊರಿನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಸವಂತಪ್ಪ ಹಾಗೂ ಸಿದ್ದರಾಮಯ್ಯ ಅವರ ಫೋಟೋ ಹಿಡಿದು ಮೆರವಣಿಗೆ ಮೂಲಕ ಸಂಭ್ರಮದಲ್ಲಿ ತೊಡಗಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
