Connect with us

ರಾಜಕೀಯ

ಕಲ್ಲಡ್ಕದ ಭಯೋತ್ಪಾದಕ ಹೇಳಿದ ಹಾಗೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಆಗುತ್ತಿದೆ‌ : ಬಿ ಕೆ ಹರಿಪ್ರಸಾದ್ ವಾಗ್ದಾಳಿ

Published

on

ಸುದ್ದಿದಿನ,ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಸೇರಿದಂತೆ ವರ್ಗಾವಣೆಯಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ವರ್ಗಾವಣೆಯು ಲಕ್ಷ-ಕೋಟಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯದ ಪತ್ರಿಕೆಗಳು ಸುದ್ದಿ ಮಾಡುತ್ತಿವೆ.

ವರ್ಗಾವಣೆಯ ಹಣ ನೇರವಾಗಿ ಸಂಘಪರಿವಾರದ ಕೇಶವ ಕೃಪಕ್ಕೆ ಸಂದಾಯವಾಗುತ್ತಿದೆ. ಕಲ್ಲಡ್ಕದ ಭಯೋತ್ಪಾದಕ ಒಬ್ರು ಹೇಳಿದ ಹಾಗೆ ವರ್ಗಾವಣೆ ನಡೆಯುತ್ತಿರುವುದು ದುರಂತ ಎಂದು ಆರ್ ಎಸ್ ಎಸ್ ನ ಕಲ್ಲಡ್ಕ ಪ್ರಭಾಕರ್ ಭಟ್ಟರ ಹೆಸರು ಹೇಳದೆ ಬಿಜೆಪಿ ಸರ್ಕಾರದ ವಿರುದ್ಧ ಪರಿಷತ್ ನಲ್ಲಿ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಪೊಲೀಸ್ ಇಲಾಖೆಯ ಕೆಲ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿರುವ ಕುರಿತ ವಿಷಯದಲ್ಲಿ ನಿಯಮ 68ರ ಮೇಲಿನ ಚರ್ಚೆಯಲ್ಲಿ ಮಾತ್ನಾಡಿದ ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ರಾಜ್ಯದ ಪ್ರಮುಖ ಪತ್ರಿಕೆಗಳಲ್ಲಿ ಪೊಲೀಸ್ ಇಲಾಖೆಗಳ ಲಂಚ, ಭ್ರಷ್ಟಾಚಾರದ ಬಗ್ಗೆ ಧಾರವಾಹಿಗಳನ್ನ ಪ್ರಕಟಿಸುತ್ತಿದ್ದಾರೆ. ನೇಮಕಾತಿ, ವರ್ಗಾವಣೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ.

ಸುಪ್ರೀಂ ಕೋರ್ಟ್ ನ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರ ವರ್ಗಾವಣೆ ನಡೆಸುತ್ತಿದೆ. ಹಣ ಕೊಟ್ಟು ವರ್ಗಾವಣೆ ಆದ ಅಧಿಕಾರಿಗಳು ಪೊಲೀಸ್ ಠಾಣೆಗಳಲ್ಲಿ ಲಂಚ ತೆಗೆದುಕೊಳ್ಳದೆ ಕೆಲಸಗಳನ್ನೇ ಮಾಡುತ್ತಿಲ್ಲ. ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಇನ್ಸೆಪೆಕ್ಟರ್ ಒಬ್ರು ಗೂಗಲ್ ಪೇ ಮೂಲಕ, ಫೋನ್ ಪೇ ಮೂಲಕ ಹಣ ತೆಗೆದುಕೊಳ್ಳುತ್ತಿದ್ದಾರೆ. ಪೊಲೀಸ್ ಕೂಡ ಅಪ್ಡೇಟ್ ಆಗಿ ಲಂಚ ಸ್ವೀಕರಿಸುತ್ತಿದ್ದಾರೆ. ಅಂತಹ ಅಧಿಕಾರಿಗಳ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುದೆ ಸರ್ಕಾರ ಕುಮ್ಮಕ್ಕು ನೀಡಿದೆ ಎಂದು ಗಂಭೀರವಾಗಿ ಆರೋಪಿಸಿದ್ರು.

ಪೊಲೀಸ್ ಅಧಿಕಾರಿಗಳನ್ನ ವರ್ಷಕ್ಕೊಮ್ಮೆ ವರ್ಗಾವಣೆಯನ್ನ ನಡೆಸುತ್ತಿರುವುದರ ಹಿಂದೆ ಲಕ್ಷ-ಕೋಟಿ ಲಂಚದ ಹಣ ಅಕ್ರಮ ನಡೆಯುತ್ತಿದೆ. ಸರ್ಕಾರ ಎಲ್ಲದಕ್ಕೂ ಸಾಕ್ಷಿ ಕೇಳುತ್ತಿದೆ ಹಾಗಾದ್ರೆ ಸರ್ಕಾರ ನಿಮ್ಮದೇ ಇರುವಾಗ ತನಿಖಾ ಏಜೆನ್ಸಿಗಳಿಂದ ತನಿಖೆ ನಡೆಸಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ರು. ಇತ್ತೀಚೆಗೆ ಹಿಜಾಬ್ ವಿಷಯದಲ್ಲಿ ಹೈಕೋರ್ಟ್ ” ಕಾಣದ ಕೈಗಳು ಇಂತಹ ಘಟನೆಗಳನ್ನು ನಡೆಸುತ್ತಿದೆ” ಎಂಬ ಹೇಳಿಕೆ ನೀಡಿದೆ.

ಅಂತಹ ಶಕ್ತಿಗಳು ಯಾವುದು ಎಂದು ಪತ್ತೆ ಹಚ್ಚಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ, ದೇಶದಲ್ಲಿ ನಿಮಿಷಕ್ಕೊಮ್ಮೆ, ಗಂಟೆಗೊಮ್ಮೆ, ದಿನಾಲು ದಲಿತರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆಗಳು ನಡೆಯುತ್ತಲೇ ಇದೆ. ಬಹುತೇಕ ಪ್ರಕರಣಗಳು ಪೊಲೀಸ್ ಠಾಣೆಗೂ ಬರವುದಿಲ್ಲ, ಬರುವ ಪ್ರಕರಣಗಳು ಠಾಣೆಗಳಲ್ಲಿಯೇ ರಾಜೀ ಪಂಚಾಯಿತಿ ಮಾಡುವ ಕೆಲಸಗಳು ಹೆಚ್ಚಾಗುತ್ತಿದೆ. ಇದಕ್ಕೆ ಮೂಲ ಕಾರಣ ಪೊಲೀಸ್ ಇಲಾಖೆಗಳಲ್ಲಿ ಜಾತಿಯ ಆಧಾರದ ಮೇಲೆ, ಲಂಚದ ಮೇಲೆ, ಧರ್ಮದ ಆಧಾರದ ಮೇಲೆ ನಡೆಯುತ್ತಿರುವ ವರ್ಗಾವಣೆಯೇ ಕಾರಣ ಎಂದು ಆರೋಪಿಸಿದ್ರು.

ನೇಮಕಾತಿಗಳಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಪಿಎಸ್ ಐ ಅಭ್ಯರ್ಥಿಗಳು ನೊಂದು ಕಾನೂನು ಹೋರಾಟ ನಡೆಸುತ್ತಿದ್ದಾರೆ. ಪತ್ರಿಕೆಯಲ್ಲಿ ಅದರ ಬಗ್ಗೆ ಸುದೀರ್ಘವಾಗಿ ದಾಖಲೆ ಸಮೇತ ಪ್ರಕಟ ಮಾಡಿದೆ. ಅಭ್ಯರ್ಥಿಗಳು ಉತ್ತರ ಪತ್ರಿಕೆ ಕೊಡಿ ಎಂದು ಅರ್ಜಿ ಸಲ್ಲಿಸಿ ಎಂದು ಗೃಹ ಸಚಿವರು ಹೇಳಿಕೆ ಕೊಡ್ತಾರೆ, ಆದ್ರೆ ಪೊಲೀಸ್ ಮಹಾ ನಿರ್ದೇಶಕರು ಉತ್ತರ ಪತ್ರಿಕೆ ಕೊಡಕ್ ಆಗಲ್ಲ ಅಂತಾರೆ. ಅಭ್ಯರ್ಥಿಗಳನ್ನ ಯಾಕೆ ಪೊಲೀಸ್ ಇಲಾಖೆ ದಿಕ್ಕು ತಪ್ಪಿಸುತ್ತಿದೆ.

ಒಂದು ತಾಲೂಕಿನಲ್ಲೇ ಐವತ್ತಕ್ಕೂ ಹೆಚ್ಚು ‌ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆಂಬ ಆರೋಪವಿದೆ, ಇದರ ಸತ್ಯಾಸತ್ಯೆಗಳನ್ನ ರಾಜ್ಯದ ಜನರಿಗೆ ಅರ್ಥ ಮಾಡಲು ಇಲಾಖೆ ಸೋತಿದೆ. ನೇಮಕಾತಿಯಿಂದಲೇ ಅಕ್ರಮ, ಅನ್ಯಾಯ, ಭ್ರಷ್ಟಾಚಾರಗಳು ನಡೆಯುವಾಗ ರಾಜ್ಯದಲ್ಲಿ ಹೇಗೆ ಕಾನೂನು, ಸುವ್ಯವಸ್ಥೆ ಕಾಪಾಡುವುದಕ್ಕೆ ಸಾಧ್ಯ.

ಭ್ರಷ್ಟಾಚಾರ ಪ್ರಕರಣಗಳು ಹೆಚ್ಚಾಗುವುದಕ್ಕೆ ಪೊಲೀಸರ ಸಂಬಳ ಕಡಿಮೆಯಾಗುವುದು ಕೂಡ ಕಾರಣ ಇರಬಹುದು. ಸರ್ಕಾರದ ಪ್ರಮುಖ ಇಲಾಖೆಯಲ್ಲಿಯೇ ಸುವ್ಯವಸ್ಥೆ ತರುವಲ್ಲಿ ಸರ್ಕಾರ ಸೋತಿದೆ ಎಂದು ಮಾತ್ನಾಡಿದ್ರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು

ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.

ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.

ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.

ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.

ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.

ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.

ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಅಲ್ಲದೆ, ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಸುಮಾರು 24000 ಪೌತಿ ಖಾತೆಗಳನ್ನು ಬದಲಾಯಿಸಲಾಗಿದ್ದು, ಪೌತಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಜಮೀನು ಮಂಜೂರು ಆಗಿ ಪೋಡಿ ಆಗದೇ ಪ್ರತ್ಯೇಕ ಪಹಣಿ ಬರದೇ ಇರುವುದರಿಂದ ಅಂತಹವುಗಳನ್ನು ಗೈರು ವಿಲೇ ಕಡತವನ್ನು ಮಾಡಲಾಗಿದ್ದು, ಸುಮಾರು 4000 ಜನರಿಗೆ ಈ ಗೈರು ವಿಲೇ ಕಡತವನ್ನು ನೀಡಲಾಗಿದೆ. ರಾಜ್ಯದಲ್ಲಿ ನಮ್ಮ ಜಿಲ್ಲೆಯೂ 3ನೇ ಸ್ಥಾನವನ್ನು ಹೊಂದಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending