ದಿನದ ಸುದ್ದಿ
ನೆರೆ ಸಂತ್ರಸ್ತರ ಪರಿಹಾರದಲ್ಲೂ ಸರ್ಕಾರದ ತಾರತಮ್ಯ ಅಮಾನವೀಯ : ಬಿ.ಕೆ. ಹರಿಪ್ರಸಾದ್
ಸುದ್ದಿದಿನ ಡೆಸ್ಕ್ : ನೆರೆ ಸಂತ್ರಸ್ತರ ಪರಿಹಾರದಲ್ಲೂ ಸರ್ಕಾರದಿಂದ ತಾರತಮ್ಯ ಅಮಾನವೀಯ. ನಿರಾಶ್ರಿತರ ನೆರವಿಗೆ ಧಾವಿಸುವಂತೆ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳು ಅತಿವೃಷ್ಠಿಯಿಂದ ತತ್ತರಿಸುತ್ತಿವೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರಿನ ಪ್ರವಾಹ ಅವಾಂತರವನ್ನೇ ಸೃಷ್ಟಿಮಾಡಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸುರತ್ಕಲ್, ಮಂಗಳೂರು ನಗರ ಉತ್ತರದ ನೇರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು,ಸಚಿವರುಗಳು “ಬಂದ ಪುಟ್ಟ ಹೋದ ಪುಟ್ಟ” ಎಂಬಂತೆ ನೆರೆ ಪೀಡಿತ ಪ್ರದೇಶಗಳಿಗೆ ಫ್ಯಾಶನ್ ಶೋ ಗೆ ಭೇಟಿ ಕೊಟ್ಟಿದ್ದು ಮಾತ್ರ. ಆದರೆ ಇಲ್ಲಿವರೆಗೂ ನಯಾ ಪೈಸೆ ಬಿಡುಗಡೆ ಮಾಡಲಿಲ್ಲ. ನೊಂದವರಿಗೆ ನೆರವು ನೀಡಲಿಲ್ಲ. ನಿರಾಶ್ರಿತರಿಗೆ ನೀಡಿರುವ ಭರವಸೆಗಳು ನಿರಾಸೆಗೊಳಿಸಿವೆ ಎಂದರು.
ಪಚ್ಚನಾಡಿ, ಗುರುಪುರ, ಮಿನಕಳಿ, ಉಳ್ಳಾಲ, ಸುರತ್ಕಲ್, ಸೋಮೇಶ್ವರ ಗ್ರಾಮ, ಬೆಟ್ಟಂಪಾಡಿ, ಬೈಕಂಪಾಡಿ, ಅದ್ಯಪಾಡಿ ಸೇರಿದಂತೆ ಇನ್ನಿತರೆ ಮಳೆಯಿಂದ ಹಾನಿಗೊಳಿಗಾಗಿರುವ ಹಾಗೂ ಕಡಲ್ಕೊರೆತದಿಂದ ಅಪಾಯದಲ್ಲಿರುವ ಪ್ರದೇಶಗಳಿಗೆ ಭೇಟಿ ಮಾಡಿದೆ. ಬಹುತೇಕ ಕಡೆ ಇಲ್ಲಿವರೆಗೂ ನಿರಾಶ್ರಿತರಿಗೆ ಪ್ರಾಥಮಿಕ ಸೌಲಭ್ಯವೂ ಕಲ್ಪಿಸದೆ ಅಮಾನವೀಯವಾಗಿ ನಡೆದುಕೊಂಡಿರುವುದು ದುರಂತ.
ಇನ್ನೂ ಕಳೆದ ಎರಡು ವರ್ಷಗಳ ಹಿಂದೆ ನೆರೆ ಸಂದರ್ಭದಲ್ಲಿ ಗುರುಪುರದ ಗ್ರಾಮಪಂಚಾಯಿತಿ ವ್ಯಾಪ್ತಿಯ 70ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರಿಸಲಾಗಿತ್ತು. ಸ್ಥಳಾಂತರಿಸುವಾಗ ಮನೆ ಕಟ್ಟಿ ಕೊಡುವ ಭರವಸೆಯನ್ನ ನೀಡಿ, ಬಾಡಿಗೆ ಮನೆ ನಿವಾಸಿಗಳಿಗೆ ತಿಂಗಳಿಗೆ ಹತ್ತು ಸಾವಿರ ರೂಗಳ ಸಹಾಯ ನೀಡುವ ಭರವಸೆ ನೀಡಿತ್ತು. ಆದ್ರೆ ಇಲ್ಲಿವರೆಗೂ ಈ ಸರ್ಕಾರ ಹಾಗೂ ಸ್ಥಳೀಯ ಶಾಸಕರು ಇತ್ತ ತಿರುಗಿಯೂ ನೋಡಿಲ್ಲ. ಪರಿಹಾರ ನೀಡುವುದರಲ್ಲಿಯೂ ಬೆರಳಣಿಕೆ ಕುಟುಂಬಗಳಿಗೆ ಪರಿಹಾರ ನೀಡಿ ತಾರತಮ್ಯ ಮಾಡುವ ಮೂಲಕ ಅಮಾನವೀಯವಾಗಿ ನಡೆದುಕೊಂಡಿದೆ. ಕೂಡಲೇ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ನೀಡಿದ್ದ ಭರವಸೆಯನ್ನ ಈಡೇರಿಸಬೇಕೆಂದು ಒತ್ತಾಯಿಸುತ್ತೇನೆ.
ಕಡಲ್ಕೊರೆತ ಪ್ರದೇಶಗಳ ಕುಟುಂಬಗಳು ಪ್ರತಿ ಕ್ಷಣವೂ ಜೀವ ಕೈಲಿ ಹಿಡಿದುಕೊಂಡಿವೆ. ಜಿಲ್ಲಾಡಳಿತ ಕೂಡಲೇ ಅಂತಹ ಪ್ರದೇಶಗಳನ್ನ ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕು. ನಿರಾಶ್ರಿತರು ಹಾಗೂ ಅಪಾಯದಲ್ಲಿರುವವರಿಗೆ ಎನ್ಡಿಆರ್ ಎಫ್ ಹಾಗೂ ಎಸ್ಡಿಆರ್ ಎಫ್ ನಿಧಿ ಕೇವಲ ಎರಡೊತ್ತಿನ ಊಟಕ್ಕೆ ಮಾತ್ರ ಸೀಮಿತವಾಗಲಿದೆ. ಆದ್ದರಿಂದ ರಾಜ್ಯ ಸರ್ಕಾರ ವಿಶೇಷ ಪರಿಹಾರ ನಿಧಿಯನ್ನ ಘೋಷಿಸಿ, ಸಂಪೂರ್ಣವಾಗಿ ಆಸ್ತಿ ಪಾಸ್ತಿ ಕಳೆದುಕೊಂಡವರಿಗೆ ಸಂಪೂರ್ಣ ಪರಿಹಾರ ನೀಡಬೇಕು.
ಬಿಜೆಪಿ ಸರ್ಕಾರದ ಶಾಸಕರುಗಳೇ ತಮ್ಮ ಸರ್ಕಾರ ಹಾಗೂ ಮಂತ್ರಿಗಳ ಕಾರ್ಯವೈಖರಿಯನ್ನ ಬಹಿರಂಗವಾಗಿ ಖಂಡಿಸುತ್ತಿದ್ದಾರೆ. ಇಡೀ ಸರ್ಕಾರ ಹಾಗೂ ಮಂತ್ರಿ ಮಂಡಲ ಬರೀ ಕಮಿಷನ್ ವ್ಯವಹಾರಗಳಲ್ಲೇ ಕಾಲ ಕಳೆಯುತ್ತಿದ್ದಾರೆ. ಬಹುತೇಕ ಮಂತ್ರಿಗಳು ಬೆಂಗಳೂರು ಬಿಟ್ಟು ಅಲುಗಾಡುತ್ತಿಲ್ಲ. ಕೂಡಲೇ ಮೈ ಚಳಿ ಬಿಟ್ಟು ನೆರೆಯಿಂದ ನಿರಾಶ್ರಿತರಾಗಿರುವ ಕುಟುಂಬಗಳಿಗೆ ನೆರವಾಗಬೇಕೆಂದು ಆಗ್ರಹಿಸಿದರು.
ಮೊದಲ ದಿನದ ನೆರೆ ಪೀಡಿತ ಪ್ರದೇಶಗಳ ಪ್ರವಾಸದಲ್ಲಿ ಮಾಜಿ ಸಚಿವರು,ಶಾಸಕರಾದ ಯುಟಿ ಖಾದರ್, ಮಾಜಿ ಶಾಸಕ ಮೊಯ್ದೀನ್ ಬಾವಾ, ಮಾಜಿ ಕಾರ್ಪೋರೆಟರ್ ಗಳು, ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


