ದಿನದ ಸುದ್ದಿ

ಬಿಳಿಗಿರಿರಂಗನ ಬೆಟ್ಟದಲ್ಲಿ ಕಪ್ಪು ಚಿರತೆ ಪ್ರತ್ಯಕ್ಷ ; ಕ್ಯಾಮೆರಾ ಟ್ರ್ಯಾಪ್‌ನಲ್ಲಿ ಚಿರತೆ ಸೆರೆ

Published

on

ಸುದ್ದಿದಿನ,ಚಾಮರಾಜನಗರ:‌ ಬಿಳಿಗಿರಿರಂಗನ ಬೆಟ್ಟದಲ್ಲಿ ಮತ್ತೆ ಕಪ್ಪು ಚಿರತೆ ಪ್ರತ್ಯಕ್ಷವಾಗಿದೆ. ವನ್ಯಜೀವಿಗಳ ಸಾಂದ್ರತೆ ಹೆಚ್ಚಾಗಿರುವ ಕಾರಣದಿಂದ ಕಪ್ಪು ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಡಾ.ಸಂಜಯ್ ಗುಬ್ಬಿ ಯವರ ಹೊಳೆಮತ್ತಿ ನೇಚರ್ ಫೌಂಡೇಷನ್‌ನ ತಂಡದವರು ಚಿರತೆಯ ಅಧ್ಯಯನಕ್ಕೆ ನಡೆಸಿದ್ದ ಕ್ಯಾಮೆರಾ ಟ್ರ್ಯಾಪ್‌ನಲ್ಲಿ ಚಿರತೆ ಸೆರೆಯಾಗಿದೆ.

ಇದಕ್ಕೂ ಮುಂಚೆ 2020ರ ಡಿಸೆಂಬರ್ ಇದೇ ಗಂಡು ಚಿರತೆ ಮಲೈ ಮಹದೇಶ್ವರ ವನ್ಯಜೀವಿಧಾಮದ ಪಿ.ಜಿ.ಪಾಳ್ಯ ವಲಯದಲ್ಲಿ ಕಾಣಿಸಿಕೊಂಡಿತ್ತು. ಈಹ ಚಿರತೆಗೆ 6 ವರ್ಷ ವಯಸ್ಸಾಗಿರಬಹುದು ಎಂದು ಊಹಿಸಲಾಗಿದೆ.

ಹುಲಿ ಸಂರಕ್ಷಿತ ಪ್ರದೇಶ ಮತ್ತು ಮಲೆ ಮಹದೇಶ್ವರ ವನ್ಯಜೀವಿಧಾಮಗಳ ನಡುವೆ ಸುಮಾರು 1.6 ಕಿ.ಮೀ ಅಗಲದ ವನ್ಯಜೀವಿ ಕಾರಿಡಾರ್ ಇದೆ. ಈ ಎರಡೂ ವನ್ಯಧಾಮಗಳಲ್ಲಿ ಈಗ ಕಾಣಿಸಿಕೊಂಡರುವ ಚಿರತೆಯ ಚಲನವಲನ ದಾಖಲಾಗಿರುವುದು ಈ ಕಾರಿಡಾರ್ ನ ಮಹತ್ವವನ್ನು ಎತ್ತಿ ತೋರಿಸುತ್ತದೆ. ಈ ವನ್ಯಜೀವಿ ಕಾರಿಡಾರನ್ನು ಸಂರಕ್ಷಿಸುವಂತೆ ವನ್ಯ ಜೀವಿ ತಜ್ಞರುಗಳು ಆಗ್ರಹಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version