Connect with us

ದಿನದ ಸುದ್ದಿ

ದಾವಣಗೆರೆ | ರಕ್ತದಾನಿಗಳು ಜೀವ ಉಳಿಸುವ ರಕ್ಷಕರು : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಗೊತ್ತಿದ್ದೋ, ಗೊತ್ತಿಲ್ಲದೆಯೊ ಯಾರದೋ ಪ್ರಾಣ ಉಳಿಸಲು ಕಾರಣರಾಗಿರುವ ರಕ್ತದಾನಿಗಳು ಜೀವ ಉಳಿಸುವ ರಕ್ಷಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ರಕ್ತಭಂಡಾರ, ಜಿಲ್ಲಾ ಚಿಗಟೇರಿ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕುವೆಂಪು ಕನ್ನಡ ಭವನದ ರಾಷ್ಟ್ರಕವಿ ಡಾ.ಜಿಎಸ್.ಶಿವರುದ್ರಪ್ಪ ಸಭಾಂಗಣದಲ್ಲಿ “ಸುರಕ್ಷಿತ ರಕ್ತ ಜೀವ ರಕ್ಷಕ” ರಕ್ತ ನೀಡಿ ಮತ್ತು ಪ್ರಪಂಚವನ್ನು ಆರೋಗ್ಯಕರ ಸ್ಥಳವನ್ನಾಗಿಸಿ” ಎಂಬ ಘೋಷವಾಕ್ಯದಡಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸಬಹುದು. ಇದರಿಂದಾಗಿ ಹಲವಾರು ಜನರು ಸಾವಿನಿಂದ ಪಾರಾಗಬಹುದಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದಾನಿಗಳ ಕಾರ್ಯ ಶ್ಲಾಘನೀಯವಾಗಿದೆ. ಅವರಿಗೆ ನಾವೆಲ್ಲರೂ ಹೃದಯ ಪೂರ್ವಕ ಧನ್ಯವಾದ ಅರ್ಪಿಸಬೇಕಿದೆ ಎಂದ ಅವರು, ವಿಶ್ವ ರಕ್ತದಾನಿಗಳ ದಿನಾಚರಣೆಯ ಘೋಷವಾಕ್ಯಕ್ಕೆ ಎಲ್ಲರೂ ಕೂಡ ಬದ್ಧರಾಗುವ ಮೂಲಕ ಕಾರ್ಯ ಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಎಲ್ಲಾ ಊರಲ್ಲಿಯೂ ಸಹ ಕೊರೊನಾ ಕೇಸ್ ಕಂಡು ಬರುತ್ತಿದೆ. ಈ ಸಂದರ್ಭದಲ್ಲಿ ನಮ್ಮನ್ನು ನಾವು ಸಂಪೂರ್ಣವಾಗಿ ರಕ್ಷಣೆ ಮಾಡಿಕೊಂಡು ಕೆಲಸ ಮಾಡಬೇಕಾಗಿದೆ. ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ನಮ್ಮ ವೈಯಕ್ತಿಕ ರಕ್ಷಣೆ ನಮ್ಮ ಹೊಣೆಯಾಗಿದೆ. ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ನಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಮಾಜದ ಎಲ್ಲಾ ರಂಗದಲ್ಲಿಯೂ ಕೆಲಸ ಸಾಗುವುದರೊಂದಿಗೆ, ಕೊರೊನಾ ವಿರುದ್ಧ ಹೋರಾಟ ನಡೆಸಬೇಕಾಗಿದೆ ಎಂದು ತಿಳಿಸಿದರು.

ಯಾರಿಗಾದರೂ ನಿಮ್ಮ ಸಂಪರ್ಕದಲ್ಲಿರುವವರಿಗೆ ಶೀತ, ಜ್ವರ, ಕೆಮ್ಮು ಉಸಿರಾಟದ ತೊಂದರೆ ಕಂಡುಬಂದಲ್ಲಿ ಆಸ್ಪತ್ರೆಗೆ ಹೋಗಿ ತೋರಿಸಿಕೊಳ್ಳಲು ಸಲಹೆ ನೀಡಬೇಕು. ಅವರಿಗೆ ಮಾಸ್ಕ್ ಹಾಕಿಕೊಳ್ಳಲು ತಿಳಿ ಹೇಳಿಬೇಕು. ಪ್ರತಿಯೊಬ್ಬರು ಮಾಸ್ಕ್ ಹಾಕಿಕೊಳ್ಳುವ ಮೂಲಕ ನಿಮ್ಮನ್ನು ಮಾತ್ರವಲ್ಲದೆ ನಿಮ್ಮ ಸುತ್ತಮುತ್ತಲಿನವರರನ್ನು ರಕ್ಷಿಸಬಹುದಾಗಿದ್ದು, ನಮ್ಮಿಂದಾಗಿ ಹಲವು ಜನರಿಗೆ ಆಗುವ ತೊಂದರೆಯನ್ನು ತಪ್ಪಿಸಬಹುದಾಗಿದೆ ಎಂದರು.

ಆರೋಗ್ಯ ಇಲಾಖೆ ತಂಡ ರಕ್ತದಾನ ಕಾರ್ಯಕ್ರಮದಲ್ಲಿ ಬಹಳ ಕಳಕಳಿಯಿಂದ ಪಾಲ್ಗೊಂಡಿದ್ದಾರೆ. ಇವರು ಒಬ್ಬೊಬ್ಬರು ಒಂದೊಂದು ಆಸ್ತಿ ಇದ್ದ ಹಾಗೆ. ಎಲ್ಲರೂ ಸಹ ಒದೊಂದು ಕ್ಷೇತ್ರದಲ್ಲಿ ಹಗಲು ರಾತ್ರಿ ದುಡಿದಂತಹವರು. ಕೊರೊನಾ ಎಂಬ ಯುದ್ದ ಸಮಯದಲ್ಲಿ ಜಿಲ್ಲೆಗೆ ಏನಾದರೂ ಒಳ್ಳೆಯ ಹೆಸರು ಬಂದಿದ್ದರೆ ಅದು ಇವರಿಂದ ಮಾತ್ರ. ನಾಗರಿಕರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೆನೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಉತ್ಸಹದಿಂದ ಕೆಲಸ ಮಾಡುತ್ತೇವೆ ಎಂದರು.

ರಕ್ತಭಂಡಾರದ ವೈದ್ಯಾಧಿಕಾರಿಗಳಾದ ಡಾ.ಡಿ.ಹೆಚ್.ಗೀತಾ ಮಾತನಾಡಿ, ರಕ್ತವನ್ನು ಯಾರೂ ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ. ರಕ್ತ ದೇಹದ ಜೀವನಾಡಿಯಾಗಿದೆ. ಇಂದೇ ರಕ್ತದಾನ ಮಾಡುವ ಸಂಕಲ್ಪ ಮಾಡುವ ಮೂಲಕ ಇನ್ನೊಂದು ಜೀವಕ್ಕೆ ವರದಾನ ನೀಡಬೇಕು ಎಂದು ಹೇಳಿದರು.

ರಕ್ತಕ್ಕೆ ವರ್ಷವಿಡಿ ನಿರಂತರವಾಗಿ ಬೇಡಿಕೆ ಇರುತ್ತದೆ. ಯಾಕೆಂದರೆ ಅಪಘಾತಗಳು, ತುರ್ತು ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಕ್ಯಾನ್ಸರ್ ರೋಗಿಗಳು, ಗರ್ಭಿಣಿ ಸ್ತ್ರೀಯರು, ಹಿಮೊಫಿಲಿಯಾ, ಸಿಕಲ್‍ಸೆಲ್, ಅನಿಮೀಯಾ ಮುಂತಾದ ರೋಗಿಗಳು ರಕ್ತದಾನಿಗಳನ್ನೆ ಅವಲಂಬಿಸಿರುತ್ತಾರೆ ಎಂದರು.

ಹೆಣ್ಣು ಗಂಡು ಎಂಬ ಬೇಧವಿಲ್ಲದೇ 18 ರಿಂದ 60 ವರ್ಷದ ಒಳಗಿರುವ ಎಲ್ಲ ಆರ್ಯೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ಹಿಮೋಗ್ಲೋಬಿನ್ 12.5 ಗ್ರಾಂ. ಗಿಂತ ಜಾಸ್ತಿ ಇರುವವರು ಮತ್ತು ತೂಕ 45 ಕಿಲೋ ಗಿಂತ ಹೆಚ್ಚಾಗಿರುವವರು, ಪುರುಷರು 3 ತಿಂಗಳಿಗೊಮ್ಮೆ ಮಹಿಳೆಯರು 6 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷರಾದ ಮಂಜುನಾಥ್ ಎಸ್.ಕುರ್ಕಿ ಮಾತನಾಡಿ, ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗುತ್ತದೆ. ರಕ್ತದಾನ ಬಹಳ ಶ್ರೇಷ್ಠವಾದ ದಾನವಾಗಿದ್ದು, ಒಂದು ಜೀವ ಉಳಿಸುವ ಶಕ್ತಿ ರಕ್ತದಾನಕ್ಕೆ ಇದ್ದು, ಇನ್ನೊಬ್ಬರ ಬದುಕು ಬೆಳಗಿಸಬಹುದಾಗಿದೆ ಎಂದು ಹೇಳಿದರು.

4 ಶಕ್ತಿಗಳು ಇಂದು ಜಗತ್ತನ್ನು ಆಳುತ್ತಿವೆ. ಪರಿಸರದ ಜೊತೆಗೆ ಒಡನಾಡಿಯಾಗಿ ಜೀವನ ಸಾಗಿಸುವ ಮತ್ತು ದೇಶಕ್ಕೆ ಅನ್ನ ನೀಡುವ ರೈತ, ತನ್ನ ಹೆತ್ತವರು ಹಾಗೂ ಮಡದಿ ಮಕ್ಕಳನ್ನು ಬಿಟ್ಟು ಗಡಿ ಕಾಯುವ ಯೋಧ, ಜೀವ ಉಳಿಸುವ ವೈದ್ಯಕೀಯ ಸಿಬ್ಬಂದಿಗಳು ಹಾಗೂ ರಕ್ತದಾನ ಮಾಡಿ ಜೀವ ಉಳಿಸುವ ರಕ್ತದಾನಿಗಳು. ಇವರು ನಾಲ್ಕು ಜನರು ಸಮಾಜದ ಬಹು ಮುಖ್ಯ ಅಂಗಗಳು ಆಗಿದ್ದಾರೆ ಎಂದು ಬಣ್ಣಿಸಿದರು.

ಇದೇ ಸಂದರ್ಭದಲ್ಲಿ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. 77 ಬಾರಿ ರಕ್ತದಾನ ಮಾಡಿರುವ ಚೌಕಿಪೇಟೆಯ ಪುಸ್ತಕ ವ್ಯಾಪಾರಿ ಮಹಡಿಮನೆ ಶಿವಕುಮಾರ್ ಸೇರಿದಂತೆ 10 ಕ್ಕಿಂತ ಹೆಚ್ಚಿನ ಬಾರಿ ರಕ್ತದಾನ ಮಾಡಿದ ರಕ್ತದಾನಿಗಳು ತುಂಬಾ ಉತ್ಸಾಹದಿಂದ ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರ ಸ್ವಾಮಿ, ಚಿಗಟೇರಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಅಧೀಕ್ಷಕರಾದ ಡಾ.ನಾಗರಾಜ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಅಧೀಕ್ಷಕರಾದ ಡಾ.ಜೆ.ಬಿ.ನೀಲಕಂಠ, ಜಿಲ್ಲಾ ಏಡ್ಸ್ ಪ್ರತಬಂಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಕೆ.ಎಚ್.ನಾಗರಾಜ್, ಡಾ.ಮೀನಾಕ್ಷಿ, ಡಾ.ಮುರುಳೀಧರ್ ಮತ್ತಿತರರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending