Connect with us

ದಿನದ ಸುದ್ದಿ

ಸಾಮರ್ಥ್ಯಾಧಾರಿತ ಕಲಿಕೆಗೆ ಚಟುವಟಿಕೆ ಆಧಾರಿತ ಬೋಧನೆ ಪೂರಕ : ಎಸ್.ಕೆ.ಬಿ.ಪ್ರಸಾದ್

Published

on

ಸುದ್ದಿದಿನ,ಚಿತ್ರದುರ್ಗ: ಮಕ್ಕಳ ಸಾಮರ್ಥ್ಯಾಧಾರಿತ ಕಲಿಕೆಗೆ ಚಟುವಟಿಕೆ ಆಧಾರಿತ ಬೋಧನೆ ಪೂರಕವಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಸ್.ಕೆ.ಬಿ.ಪ್ರಸಾದ್ ಹೇಳಿದರು.

ನಗರದ ಡಯಟ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಡಿ.ಎಸ್.ಇ.ಆರ್.ಟಿ ಮತ್ತು ಡಯಟ್ ಸಂಯುಕ್ತಾಶ್ರಯದಲ್ಲಿ ಎನ್.ಇ.ಪಿ-2020 ಆಧಾರಿತ 8,9 ಮತ್ತು 10 ನೇ ತರಗತಿ ಸಮಾಜ ವಿಜ್ಞಾನ ‘ಸಂಜೀವಿನಿ’ ಕುರಿತು ಪ್ರೌಢಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಪೈಲೆಟ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಗುವಿಗೆ ಸಾಮರ್ಥ್ಯಾಧಾರಿತ ಕಲಿಕೆ ಉಂಟು ಮಾಡಲು, ಶಿಕ್ಷಕರ ವೃತ್ತಿಪರ ಸಾಮರ್ಥ್ಯ ಅಭಿವೃದ್ದಿಗೆ ತರಬೇತಿಗಳು ಪೂರಕವಾಗುತ್ತವೆ. ಭವಿಷ್ಯ ಜೀವನದಲ್ಲಿ ಮಕ್ಕಳು ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಾರೆ. ಶಿಕ್ಷಕರು ಏನನ್ನು ಕಲಿಸುತ್ತಾರೆಯೋ ಮಗು ಅದನ್ನು ಕಲಿಯುತ್ತದೆ. ಶಿಕ್ಷಕರು ಬೋಧಿಸುವ ವಿಷಯವನ್ನು ಪ್ರೀತಿಸಬೇಕು. ಮಕ್ಕಳು ಆಸಕ್ತಿದಾಯಕವಾಗಿ ಕಲಿಯುವಂತೆ ಕಲಿಕಾ ಸಾಮಗ್ರಿಗಳೊಂದಿಗೆ ಚಟುವಟಿಕೆ ಆಧಾರಿತವಾಗಿ ಬೋಧಿಸಬೇಕು ಎಂದರು. ಎನ್.ಇ.ಪಿ – 2020 ರಲ್ಲಿ ಸಾಮರ್ಥ್ಯಾಧಾರಿತ ಕಲಿಕೆಗೆ ಒತ್ತು ನೀಡಲಾಗಿದ್ದು ತಂತ್ರಜ್ಞಾನ ಆಧಾರಿತ ಬೋಧನೆ ಮೂಲಕ ನಕಾಶೆ ಓದುವ, ಸ್ಥಳಗಳು, ನದಿಗಳ ಉಗಮ ಸ್ಥಾನ ಗುರುತಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದರು.

ನೋಡಲ್ ಅಧಿಕಾರಿ ಡಿ.ಆರ್.ಕೃಷ್ಣಮೂರ್ತಿ ಮಾತನಾಡಿ, ಕಲಿಕಾ ಫಲಗಳ ಆಧಾರಿತವಾಗಿ ತರಬೇತಿ ಸಾಹಿತ್ಯ ರಚನೆ ಮಾಡಲಾಗಿದೆ. ಶಿಬಿರಾರ್ಥಿಗಳು 5 ದಿನದ ತರಬೇತಿಯಲ್ಲಿ ಆಯೋಜಿಸುವ ಗುಂಪು ಚರ್ಚೆ, ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಬೇಕು ಎಂದರು.

ಹಿರಿಯ ಉಪನ್ಯಾಸಕರಾದ ಈ.ಹಾಲಮೂರ್ತಿ, ಮಹಮದ್ ಅಯೂಬ್, ಸಯ್ಯದ್ ಮೋಸಿನ್, ಉಪನ್ಯಾಸಕರಾದ ಆರ್.ನಾಗರಾಜು ಎಸ್.ಬಸವರಾಜು, ಕೆ.ಜಿ.ಪ್ರಶಾಂತ್, ಕೆ.ಎಂ. ನಾಗರಾಜು, ತಾಂತ್ರಿಕ ಸಹಾಯಕ ಆರ್.ಲಿಂಗರಾಜು, ಕೆ.ಆರ್.ಲೋಕೇಶ್, ಸಂಪನ್ಮೂಲ ವ್ಯಕ್ತಿಗಳಾದ ಬಿ.ಟಿ.ನಾಗರಾಜು, ಉಮೇಶ್, ಮಾರುತಿ, ಮಲ್ಲಿಕಾರ್ಜುನ ಸ್ವಾಮಿ, ಶ್ರೀನಿವಾಸ, ಪ್ರಸನ್ನ ಕುಮಾರ, ಹುಸೇನ್ ಶರೀಫ್, ಶಿಕ್ಷಕಿ ಉಮಾ ಮತ್ತು ಶಿಬಿರಾರ್ಥಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮ ಪಂಚಾಯಿತಿ ಸೇವೆಗಳು ಇನ್ನು ವಾಟ್ಸಪ್‍ನಲ್ಲಿ

Published

on

ಸುದ್ದಿದಿನ,ದಾವಣಗೆರೆ : ಗ್ರಾಮ ಪಂಚಾಯಿತಿ ಸೇವೆಗಳನ್ನು ಪಡೆಯಲು ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದ್ದು ಪಂಚಮಿತ್ರ ಸೇವೆಗಳನ್ನು ವಾಟ್ಸಪ್ ಚಾಟ್‍ನಲ್ಲಿ ಪಡೆಯಲು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡಿದರು.

ಅವರು ಭಾನುವಾರ ದಾವಣಗೆರೆ ತಾ; ದೊಡ್ಡಬಾತಿ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯಿತಿ ದೊಡ್ಡಬಾತಿ, ಹಳೆಬಾತಿಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಂಚಮಿತ್ರ ವಾಟ್ಸಪ್ ಸೇವೆಗೆ ಸಚಿವರು ಚಾಲನೆ ನೀಡಿದರು.

ಗ್ರಾಮೀಣ ಜನರಿಗೆ 89 ಸೇವೆಗಳನ್ನು ನೀಡುವ ಪಂಚಮಿತ್ರ ಪೋರ್ಟಲ್ ಮತ್ತು ವಾಟ್ಸಾಪ್ ಚಾಟ್ ಡಿಜಿಟಲ್ ವೇದಿಕೆಯ ಮೂಲಕ ಪಡೆಯಲು ಅವಕಾಶ ಕಲ್ಪಿಸಿದೆ. ಇದರ ಮೂಲಕ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ವಿವಿಧ 17 ಸೇವೆಗಳು, ಇತರೆ ಇಲಾಖೆಗಳಿಗೆ ಸಂಬಂಧಿಸಿದ 72 ಸೇವೆಗಳು ಈ ವೇದಿಕೆಯಲ್ಲಿ ಸಿಗಲಿವೆ. ಕಟ್ಟಡ ಪರನಾನಗಿ, ಹೊಸ ನೀರು ನಲ್ಲಿ ಸಂಪರ್ಕ, ಬೀದಿ ದೀಪ ನಿರ್ವಹಣೆ, ಸ್ವಾಧೀನ ಪ್ರಮಾಣ ಪತ್ರ, ವ್ಯಾಪಾರ ಪರವಾನಗಿ, ನಿರಾಕ್ಷೇಪಣಾ ಪತ್ರ, ಜಾಬ್ ಕಾರ್ಡ್ ವಿತರಣೆ ಸೇರಿದಂತೆ ಗ್ರಾಮ ಪಂಚಾಯಿತಿ ಸೇವೆಗಳನ್ನು ಇದರಲ್ಲಿ ಪಡೆಯಬಹುದಾಗಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಪಂಚಮಿತ್ರ ವಾಟ್ಸಪ್ ಸೇವೆಗಳ ಬಗ್ಗೆ ವಿವರಿಸಿದರು.

ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ, ದೊಡ್ಡಬಾತಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ.ಡಿ ಇವರು ಅಧ್ಯಕ್ಷತೆ ವಹಿಸಿದ್ದರು. ಹಳೆಬಾತಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೀತಾ ಆರ್, ದೊಡ್ಡಬಾತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಭಾನುವಳ್ಳಿ ಸಿದ್ದಪ್ಪ, ಹಳೇಬಾತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪ ಎ, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಭಾನು ಎಸ್.ಬಳ್ಳಾರಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕರಿಬಸಪ್ಪ, ಗಿರೀಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಉಪವಿಭಾಗಾಧಿಕಾರಿ ದುರ್ಗಾಶ್ರೀ ಸ್ವಾಗತಿಸಿದರು.

ವೆಬ್ಸೈಟ್ ಲಿಂಕ್

https://prcrdpr.karnataka.gov.in/gallery/Panchamitra%20Portal/en

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಡಿತರ ವಿತರಕರಿಗೆ ಕಮಿಷನ್ ಮೊತ್ತ ಹೆಚ್ಚಳ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ಪಡಿತರ ವಿತರಕರಿಗೆ ಪ್ರತಿ ಕೆ.ಜಿ. ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿ ಹೆಚ್ಚಳಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಗುರುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ದಶಮಾನೋತ್ಸವ ಹಸಿವು ಮುಕ್ತ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರ ಕಾಯಕ ದಾಸೋಹದ ಪರಿಕಲ್ಪನೆ ಅನ್ನಭಾಗ್ಯಕ್ಕೆ ಪ್ರೇರಣೆಯಾಗಿತ್ತು. ಆಹಾರ ಉತ್ಪಾದನೆ ಮಾಡುವವರು ಕಾಯಕ ಜೀವಿಗಳು ಹಸಿವಿನಿಂದ ಮಲಗಬಾರದು. 5 ಕೆ.ಜಿ. ಅಕ್ಕಿಗೆ ಬದಲಾಗಿ ಪ್ರತಿ ಕೆ.ಜಿ.ಗೆ 34 ರೂಪಾಯಿಯಂತೆ ಫಲಾನುಭವಿಗಳಿಗೆ ನೇರ ನಗದು ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದರು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಉದ್ದೇಶ ರಾಜ್ಯವನ್ನು ಹಸಿವು, ಅನಾರೋಗ್ಯ, ಅನಕ್ಷರತೆ, ನಿರುದ್ಯೋಗ ಮುಕ್ತ ಮಾಡುವುದೇ ಆಗಿದೆ. ಸರ್ಕಾರದ ಯೋಜನೆಗಳಿಂದ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಗ್ರಾಹಕ ರಕ್ಷಕ ತಪಾಸಣೆ ವಾಹನಗಳಿಗೆ ಚಾಲನೆ ಹಾಗೂ ತೂಕ ಮತ್ತು ಅಳತೆಗಳ ಗ್ರಾಹಕರ ಜಾಗೃತಿ ಕೈಪಿಡಿ ಬಿಡುಗಡೆ ಮಾಡಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending