ಸಿನಿ ಸುದ್ದಿ
ಆರೋಗ್ಯಕರ ಜೀವನಕ್ಕಾಗಿ ಮಾಂಸಾಹಾರ ತ್ಯಜಿಸಿದ ಬಾಲಿವುಡ್ ಸೆಲೆಬ್ರಿಟಿಗಳು
ಸುದ್ದಿದಿನ
ಸೆಲೆಬ್ರಿಟಿಗಳು ಫಿಟ್ನೆಸ್ ಕಾಯ್ದುಕೊಳ್ಳಲು ಏನೆಲ್ಲಾ ಮಾಡುತ್ತಾರೆ. ಎಷ್ಟೆಲ್ಲಾ ವರ್ಕೌಟ್ ಮಾಡುತ್ತಾರೆ. ಅದಕ್ಕಾಗಿ ಆಹಾರ ಕ್ರಮವನ್ನು ಬದಲಿಸಿಕೊಳ್ಳುತ್ತಾರೆ. ಆದರೆ, ಕೆಲವು ಸೆಲೆಬ್ರಿಟಿಗಳು ತಮ್ಮ ಸಾಕು ಪ್ರಾಣಿ (ಪಪ್ಪಿ)ಗಳಿಗಾಗಿ ಮಾಂಸಾಹಾರವನ್ನೇ ತ್ಯಜಿಸಿದ್ದಾರೆ. ಯಾರ್ಯಾರು ಈ ಚಾಲೆಂಜ್ ತೆಗೆದುಕೊಂಡಿದ್ದಾರೆ. ನೋಡಿ ಇಲ್ಲಿದೆ ಮಾಹಿತಿ..!?
ಅಮಿರ್ ಖಾನ್:
ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಟ್ ಅಮಿರ್ ಖಾನ್, ಸಸ್ಯಾಹಾರ ಪದ್ಧತಿ ಪಾಲಿಸುತ್ತಿರುವುದಕ್ಕೆ ಅವರ ಹೆಂಡತಿ ಕಿರಣ್ ರಾವ್ ಕಾರಣ ಎನ್ನಬಹುದು. ಏಕೆಂದರೆ ಕಿರಣ್ ಸಹ ಸಸ್ಯಾಹಾರಿ ಆಗಿದ್ದಾರೆ. ಪ್ರಾಣಿಗಳ ಮೆರಲಿನ ಪ್ರೀತಿಯಿಂದ ಅವುಗಳ ಹತ್ಯೆ ಮಾಡುವುದನ್ನು ಇಷ್ಟಪಡುವುದಿಲ್ಲ. ಹಾಗಾಗಿ ಅವರು ಮನೆಯಲ್ಲಿ ಬಹುತೇಕ ಸಸ್ಯಾಹಾರ ಆಡುಗೆ ಮಾಡುತ್ತಾರೆ. ಅಲ್ಲದೇ ಗಂಡ ಅಮಿರ್ ಖಾನ್ ಗೂ ಇದನ್ನೇ ಪಾಲಿಸುತ್ತಿದ್ದಾರೆ. ಅಮಿರ್ ಖಾನ್ ಮಾಂಸಾಹಾರ ಸೇವನೆಯಿಂದ ಬರುವ ಹದಿನೈದು ಮಾರಣಾಂತಿಕ ಕಾಯಿಲೆಗಳ ಜಾಗೃತಿ ಮೂಡಿಸಿದ್ದಾರೆ.
ಶಾಹಿದ್ ಕಪೂರ್:
ಶಾಹಿದ್ ಕಪೂರ್ ಬಾಳಿನಲ್ಲಿ ಕರೀನಾ ಕಪೂರ್ ಬಂದಾಗಿನಿಂದ ಇಬ್ಬರು ವೆಜ್ ಅಳವಡಿಸಿಕೊಂಡಿದ್ದಾರೆ. ಈಗಲೂ ಸಸ್ಯಾಹಾರವನ್ನು ಬಳಸುತ್ತಿದ್ದಾರೆ. ಶಾಹಿದ್ ಅನೇಕ ಪೆಟಾ ಆಂದೋಲನಗಳಲ್ಲಿ ಭಾಗವಹಿಸುತ್ತಿದ್ದು, ೨೦೧೧ರಲ್ಲಿ “ಏಷ್ಯಾದ ಸೆಕ್ಸೆಯೆಸ್ಟ್ ವೆಜಿಟೇರಿಯನ್ ಮ್ಯಾನ್” ಪ್ರಶಸ್ತಿ ಪಡೆದಿದ್ದಾರೆ. ಪ್ರಾಣಿ ಪ್ರಿಯರಾದ ಶಾಹಿದ್ ಕಪೂರ್‌ಗೆ ಅವರ ತಂದೆ “ಲೈಫ್ ಇಸ್ ಫೇರ್” ಪುಸ್ತಕ ಕೊಡುಗೆ ನೀಡಿದ್ದಾರೆ. ಇದನ್ನು ಒಂದೇ ಬಾರಿ ಕುಳಿತು ಓದಿ ಮುಗಿಸಿ ನಾನ್ ವೆಜ್ ತ್ಯಜಿಸುವುದಾಗಿ ಪ್ರಮಾಣ ಮಾಡಿಬಿಟ್ಟರು.
ಅಲಿಯಾ ಭಟ್:
ವೆಜಿಟೆರಿಯನ್.ಗೆ ಹೊಸಬಳಾದ ಅಲಿಯಾ ಭಟ್ ಆಹಾರ ಪದ್ಧತಿಯನ್ನು ಸಂತೋಷ ಪಡುತ್ತಿದ್ದಾಳೆ. ಆಕೆಯ ತಂದೆ ಮಹೇಶ್ ಭಟ್ ಕೂಡ ಮಗಳ ಸಸ್ಯಾಹಾರ ಪದ್ಧತಿಯನ್ನು ಸ್ವಾಗತಿಸಿದ್ದಾರೆ
ಸೋನಾಕ್ಷಿ ಸಿನ್ಹಾ:
ಪ್ರಾಣಿ ವಧೆಯನ್ನು ಪ್ರಬಲವಾಗಿ ವಿರೋಧಿಸುವ ಸೋನಾಕ್ಷಿ ಸಿನ್ಹಾ, ಮಾಂಸಾಹಾರ ಸೇವನೆ ತ್ಯಜಿಸಿದ್ದಾರೆ. ಇದು ಅವರ ದೇಹದ ತೂಕ ಇಳಿಸಿಕೊಳ್ಳಲು ಅನುಕೂಲವಾಗಿದೆ. ಅಲ್ಲದೆ ಅವರ ಮೆಟಬಾಲಿಯಿಸಂಗೆ ಸಹಕಾರಿಯಾಗಿದೆ.
ಅನುಷ್ಕಾ ಶರ್ಮಾ:
ಅನುಷ್ಕಾ ಶರ್ಮಾ ಕ್ಯೂಟ್ ಆಗಿ ಕಾಣಲು ಕಾರಣವೆಂದು ಅನೇಕರು ಯೋಚಿಸಿರಬಹುದು. ಇದಕ್ಕೆ ಕಾರಣ ಮಾಂಸಾಹಾರ ತ್ಯಜಿಸಿರುವುದು. ಇದನ್ನು ಸಂದರ್ಶನವೊಂದರಲ್ಲಿ ರಹಸ್ಯ ಬಯಲು ಮಾಡಿದ್ದಾರೆ. ಅನುಷ್ಕಾ ತನ್ನ ಮುದ್ದು ಪಪ್ಪಿಗಾಗಿ ವೆಜ್ ರೂಢಿಸಿಕೊಂಡಿದ್ದಾರೆ. ಮೀಟ್ ಸ್ಮೆಲ್ ಸೋಕಿದರೆ ಹೇಟ್ ಮಾಡುತ್ತಿದ್ದಾರೆ. ಈ ರೀತಿಯ ಲೈಫ್ ಸ್ಟೈಲ್ ಇಷ್ಟ ಪಡುತ್ತಿದ್ದಾರೆ.
ಜಾನ್ ಅಬ್ರಾಹಂ:
ಜಾನ್ ಅಬ್ರಾಹಂ ಬಾಲಿವುಡ್‌ನ ಫಿಟೆಸ್ಟ್ ಆಕ್ಟರ್. ಅವರು ಫಿಟ್ನೆಸ್ ಕಾಯ್ದುಕೊಳ್ಳಲು ಏನೆಲ್ಲಾ ತಿನ್ನಬಹುದೆಂಬ ನಿಮ್ಮ ತಲೆಯಲ್ಲಿ ಲೆಕ್ಕಾಚಾರ ನಡೆಯುತ್ತಿದ್ದರೆ ಇದು ತಲೆಕೆಳಗಾಗಬಹುದು. ಏಕೆಮ.ದರೆ ಬಹುತೇಕರು ತಿಳಿದಮನತೆ ಮಾಂಸಾಹಾರ ಸೇವನೆಯಿಂದ ಮಾತ್ರ ವರ್ಕೌಟ್ ಸಾಧ್ಯ ಎಂಬುದಿದೆ. ಜಿಮ್ ನಲ್ಲಿ ವರ್ಕೌಟ್ ಮಾಡುವ ಮಾಂಸಾಹಾರ ಪ್ರಿಯರಿಗೆ ಜಾನ್ ಅಬ್ರಾಹಂ ಮಾತು ಹೇಳಬಯಸುತ್ತಾರೆ. ಮಾಂಸಾಹಾರ ಇಲ್ಲದೇ ಬಾಡಿ ಬಿಲ್ಡ್ ಮಾಡಬಹುದು. ಇದಕ್ಕೆ ನಾನೇ ಸಾಕ್ಷಿ ಎನ್ನುತ್ತಾರೆ ಜಾನ್ ಅಬ್ರಾಹಂ.
ಕಂಗನಾ ರಣಾವತ್:
ಯಾರಿಗೆ ಗೊತ್ತಿಲ್ಲ ಬಾಲಿವುಡ್‌ನ ಬೋಲ್ಡ್ ಬೆಡಗಿ. ತನ್ನ ಸ್ಟ್ರೇಟ್ ಫಾರ್ವರ್ಡ್ ಲೂಕ್, ಟಾಕ್, ಫಿಸಿಕ್ ಎಂಥವರನ್ನು ಆಕರ್ಷಿಸುತ್ತದೆ. ಕಂಗನಾ ಬೋಲ್ಡ್ ಬ್ಯೂಟಿ ಎಂಥಾ ಆಹಾರ ಸೇವಿಸಬಹುದು ಎಂಬ ಲೆಕ್ಕಾಚಾರಕ್ಕೆ ಸಸ್ಯಾಹಾರ ಎಂಬುದು ಉತ್ತರ ಸಿಗುತ್ತದೆ. ಬಾಲಿವುಡ್‌ನಲ್ಲಿ ಕಂಡುಕೊಂಡ ಮೇಲೂ ಸಸ್ಯಾಹಾರ ಪಾಲಿಸುತ್ತಿದ್ದಾರೆ. ಇದು ಬೋಲ್ಡ್ ಬ್ಯೂಟಿಯ ರಹಸ್ಯ ರಿವಿಲ್ ಮಾಡಿದ್ದಾರೆ.

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ
~ಡಾ. ಪುಷ್ಪಲತ ಸಿ ಭದ್ರಾವತಿ
ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು
ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.
ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.
ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.
ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.
ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ
ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ6 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ


