ದಿನದ ಸುದ್ದಿ
ಬ್ರೇಕಿಂಗ್ : ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ !
ಸುದ್ದಿದಿನ ಡೆಸ್ಕ್ : ಆತಂಕಕಾರಿ ಬೆಳವಣಿಗೆವೊಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ರೂಮ್ ಗೆ ಕೆಲ ದುಷ್ಕರ್ಮಿಗಳು ಕರೆ ಮಾಡಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಕರೆ ಮಾಡಿದ್ದ ಅನಾಮಧೇಯರು ಬಾಂಬ್ ಸ್ಫೋಟಿಸುವುದಾಗಿ ಬೆದರಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ನಿಲ್ದಾಣ ಮತ್ತು ಪ್ರಯಾಣಿಕರ ತಪಾಸಣೆ ಕಾರ್ಯ ಕೈಗೊಂಡಿದ್ದು, ಮಧ್ಯಾಹ್ನ 1ಗಂಟೆ ಸುಮಾರಿಗೆ ಇದೊಂದು ಸುಳ್ಳು ಕರೆಯಾಗಿತ್ತು ಪ್ರಕಟಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ