Connect with us

ದಿನದ ಸುದ್ದಿ

ಮುಂದಿನ ಚುನಾವಣೆಯೊಳಗೆ ಬಾಂಬೆ ಡೇಸ್ ಪುಸ್ತಕ ಬಿಡುಗಡೆ : ಹೆಚ್.ವಿಶ್ವನಾಥ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಮೈಸೂರು ; ಮುಂದಿನ ಚುನಾವಣೆಯೊಳಗೆ ಬಾಂಬೆ ಡೇಸ್ ಪುಸ್ತಕ ಬಿಡುಗಡೆ ಆಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ.

ಇಂದು ಕಾಡಾ ಕಚೇರಿಯಲ್ಲಿ ತಮ್ಮ ನೂತನ ಕಚೇರಿ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು ಹೆಚ್. ವಿಶ್ವನಾಥ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ ಅಂಶಗಳನ್ನ ಒಳಗೊಂಡಿರುವ ಬಾಂಬೆ ಡೇಸ್ ಪುಸ್ತಕ ಮುಂದಿನ ವಿಧಾನಸಭಾ ಚುನಾವಣೆಯ ಒಳಗೆ ಬಿಡುಗಡೆ ಆಗಲಿದ್ದು, ಬಾಂಬೆ ಡೇಸ್ ಪುಸ್ತಕವನ್ನ ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾ ರೀತಿಯಲ್ಲಿ ಬಾಂಬೆ ಫೈಲ್ಸ್ ಎಂದು ಬದಲಾಯಿಸಿದ್ದು, ಅದು ವಾಸ್ತವ ಸತ್ಯಗಳ ಬಿಂಬವಾಗಿದೆ ಎಂದರು.

ಚಕ್ರತೀರ್ಥ ನೇತೃತ್ವದಲ್ಲಿ ಆಗಿರುವ ಪರಿಷ್ಕರಣೆ ಪಠ್ಯ ಪುಸ್ತಕ ವಿತರಣೆಯನ್ನು ಮಾಡಬೇಡಿ, ಹಳೆಯ ಪಠ್ಯ ಪುಸ್ತಕಗಳನ್ನೇ ಮುಂದುವರೆಸಿ. ಅಕ್ಷರ ವಿಚಾರದಲ್ಲಿ ಸರ್ಕಾರ ಹಠ ಮಾಡಬಾರದು, ಪರಿಷ್ಕರಣೆ ಆಗಿರುವ ಪಠ್ಯ ಪುಸ್ತಕಕ್ಕೆ ರಾಜ್ಯಾದ್ಯಂತ ವಿರೋಧವಾಗಿದೆ. ಜನಾಭಿಪ್ರಾಯಕ್ಕೆ ಸರ್ಕಾರ ಮನ್ನಣೆ ಕೊಡಬೇಕು. ಈ ವಿಚಾರದಲ್ಲಿ ಸರ್ಕಾರ ಹಠ ಮಾಡಬಾರದು, ಶಿಕ್ಷಣ ವಿಚಾರದಲ್ಲಿ ಶಿಕ್ಷಣ ಸಚಿವರು ಮಾತನಾಡಬೇಕು, ಈ ವಿಚಾರದಲ್ಲಿ ಕಂದಾಯ ಸಚಿವರು, ನಗರಾಭಿವೃದ್ಧಿ ಸಚಿವರು ಮಾತನಾಡುವುದು ಸರಿಯಲ್ಲ ಎಂದರು.

ಸರ್ಕಾರ ಈ ಬಾರಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ರಚನೆಯಾದ ಪಠ್ಯ ಪುಸ್ತಕಗಳನ್ನೇ ಮುಂದುವರಿಸಬೇಕು, ಮುಂದಿನ ವರ್ಷ ಸಾಹಿತಿಗಳು, ತಜ್ಞರನ್ನು ಸೇರಿಸಿಕೊಂಡು ಒಂದು ಸಮಿತಿ ಮಾಡಿ ಪಠ್ಯ ಪುಸ್ತಕಗಳನ್ನ ಪರಿಷ್ಕರಣೆ ಮಾಡಬೇಕು ಎಂದು ಸರ್ಕಾರಕ್ಕೆ ವಿಶ್ವನಾಥ್​ ಸಲಹೆ ನೀಡಿದರು.

ಮಹಾರಾಷ್ಟ್ರದಲ್ಲಿ ಸರ್ಕಾರದ ಅಸ್ಥಿರತೆ ವಿಚಾರ ಕರ್ನಾಟಕದಲ್ಲಿ ಆಗಿದ್ದೇ ಅಲ್ಲೂ ಆಗುತ್ತಿದೆ. ಅಲ್ಲಿನ ಸಿಎಂ ಉದ್ಧವ್ ಠಾಕ್ರೆ ಅವರ ಸರ್ವಾಧಿಕಾರಿ ನಡವಳಿಕೆಗಳು ಈ ಘಟನೆಗೆ ಕಾರಣವಾಗಿದ್ದು, ಅಲ್ಲಿನ ಸಿಎಂ ಮಗನ ಆಡಳಿತ ಹಸ್ತಕ್ಷೇಪವು ಇದಕ್ಕೆ ಕಾರಣವಾಗಿದೆ. 2019 ರಲ್ಲಿ ಕರ್ನಾಟಕದಲ್ಲಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರ ದರ್ಪ ದೌರ್ಜನ್ಯದಿಂದ ಕರ್ನಾಟಕದಲ್ಲಿ ಆದ ದಂಗೆ ಮಹಾರಾಷ್ಟ್ರದಲ್ಲೂ ಆಗುತ್ತಿದೆ. ಈ ಘಟನೆಗಳಿಗೆ ಬಿಜೆಪಿ ಕಾರಣ ಎಂದು ಹೇಳಲು ಆಗುವುದಿಲ್ಲ ಎಂದರು.

ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಈ ದೇಶ ಕಂಡ ದೊಡ್ಡ ಸಾಹಿತಿ. ಆದರೆ, ಅವರು ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಒಂದು ಪಕ್ಷದ ವಕ್ತಾರರ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ಹಾಗೆ ಮಾತನಾಡಬಾರದು, ಅದು ಅವರಿಗೆ ಶೋಭೆ ತರುವುದಿಲ್ಲ ಎಂದ ವಿಶ್ವನಾಥ್, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ ನಮಗೆ ಏನು ಬೇಕು ಎಂದು ಪ್ರಧಾನಿಯ ಬಳಿ ಬೆಂಗಳೂರು ಮತ್ತು ಮೈಸೂರಿನ ಜನಪ್ರತಿನಿಧಿಗಳು ಒಂದು ಮನವಿಯನ್ನು ಸಹಾ ಕೊಡಲು ಧೈರ್ಯ ತೋರಲಿಲ್ಲ, ಯಾಕೆ ಹೀಗೆ ಎಂದು ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending