Connect with us

ದಿನದ ಸುದ್ದಿ

ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಲೇಖಕರ ಆಯ್ಕೆ

Published

on

ಸುದ್ದಿದಿನ,ಶಿವಮೊಗ್ಗ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪ್ರಸಕ್ತ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಗೆ ಪ್ರಶಸ್ತಿಗಳನ್ನು ಘೋಷಿಸಿದೆ.

ಲೇಖಕರು ಪ್ರಶಸ್ತಿಗಾಗಿ ಸಲ್ಲಿಸಿದ ಪ್ರಕಟಣೆಗಳನ್ನು ಆಯಾ ಕ್ಷೇತ್ರದ ತಜ್ಞರಿಂದ ಮೌಲ್ಯಮಾಪನ ಮಾಡಿಸಿ, ಪ್ರಶಸ್ತಿಗೆ ಪುಸ್ತಕಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಲೇಖಕರಿಗೆ ಜುಲೈ ಮಾಸಾಂತ್ಯದಲ್ಲಿ ಗೌರವಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಡಾ.ಟಿ.ಎಸ್.ಚನ್ನೇಶ್ ಅವರು ಬರೆದ ಅನುರಣ ವಿಜ್ಞಾನ ಪ್ರಬಂಧಗಳ ಕೃತಿಗೆ ಶ್ರೇಷ್ಠ ವಿಜ್ಞಾನ ಪುಸ್ತಕ ಪ್ರಶಸ್ತಿ, ಶ್ರೀಮತಿ ಸಿ.ತ್ರಿವೇಣಿ ಅವರು ರಚಿಸಿದ ಮಣ್ಣು-ಉಸಿರಾಡುವ ಜೀವವಸ್ತು ಎಂಬ ವಿಜ್ಞಾನ ಕೃತಿಗೆ ಶ್ರೇಷ್ಠ ಪುಸ್ತಕ ಪ್ರಶಸ್ತಿ, ಡಾ.ಉದಯಶಂಕರ ಪುರಾಣಿಕ್ ಅವರು ಬರೆದ ಆರ್ಟಿಫಿಸಿಯಲ್ ಇಂಟೆಲಿಜೆನ್ಸ್ – ಹೊಸ ತಂತ್ರಜ್ಞಾನ ಹೊಸ ಅವಕಾಶಗಳು ಎಂಬ ತಂತ್ರಜ್ಞಾನಾಧಾರಿತ ಕೃತಿಗೆ ಹಾಗೂ ಪ್ರೊ.ಮಹದೇವಯ್ಯ ಅವರು ರಚಿಸಿದ ವೃತ್ತಿಪರ ಕಂಪ್ಯೂಟರ್ ಸಾಕ್ಷರತೆ ಎಂಬ ತಂತ್ರಜ್ಞಾನಾಧಾರಿತ ಕೃತಿಗೆ ಹಾಗೂ ಡಾ.ರಣಜಿತ ಬೀರಣ್ಣ ನಾಯಕ ಅವರು ರಚಿಸಿದ ವೈದ್ಯ-ವಿಜ್ಞಾನ ಕೃತಿ ಹಾಗೂ ಡಾ. ಮುರಲೀಮೋಹನ್ ಚೂಂತಾರು ಅವರು ರಚಿಸಿದ ಸಂಜೀವಿನಿ-ಆರೋಗ್ಯ ಮಾರ್ಗದರ್ಶಿ ಎಂಬ ವೈದ್ಯಕೀಯ ಕೃತಿಗೆ ಶ್ರೇಷ್ಠ ಪುಸ್ತಕ ಪ್ರಶಸ್ತಿ ಲಭಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ45 minutes ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

ದಿನದ ಸುದ್ದಿ4 hours ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

ದಿನದ ಸುದ್ದಿ18 hours ago

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ....

ದಿನದ ಸುದ್ದಿ19 hours ago

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ...

ದಿನದ ಸುದ್ದಿ7 days ago

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ...

ದಿನದ ಸುದ್ದಿ1 week ago

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ...

ದಿನದ ಸುದ್ದಿ1 week ago

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್...

ದಿನದ ಸುದ್ದಿ2 weeks ago

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ...

ದಿನದ ಸುದ್ದಿ2 weeks ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ2 weeks ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

Trending